ಅಥಣಿ :ತಾಲೂಕಿನಲ್ಲಿ ಒಕ್ಕರಿಸಿದ ಲಂಪಿ ಸ್ಕಿನ್ ಡಿಸಿಜ್ ಮಹಾಮಾರಿಯಿಂದ ಸಾಲು ಸಾಲು ಜಾರುವರುಗಳ ಮಾರಣ ಹೋಮ ನಡೆಯುತ್ತಿದೆ.ಆದ್ರೆ ಪಶು ಇಲಾಖೆ ವೈದ್ಯಧಿಕಾರಿಗಳು ಮಾತ್ರ ಕಾಟಾಚಾರದ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯಿಂದ ಜಾನುವಾರುಗಳ ರೋಗ ಹತೋಟಿಗೆ ಬರದೆ ಸೂಕ್ತ ಚಿಕಿತ್ಸೆ ಸಿಗದೆ ದಿನನಿತ್ಯ ಜಾನುವಾರುಗಳು ಸಾವನಪ್ಪುತ್ತಿವೆ.ತಾಲೂಕಿನ ಪ್ರತಿ ಗ್ರಾಮಗಳಲ್ಲು ನೂರಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಮತ್ತೆ ಈಗ ಗಡಿ ಗ್ರಾಮಗಳಲ್ಲಿ ಮಹಾಮಾರಿ ಲಂಪಿ ಬೇನೆಯು ಮರಣ ಮೃದಂಗ ಬಾರಿಸುತ್ತಿದೆ. …
Read More »ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು.
ಹುಕ್ಕೇರಿ : ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು. ನಮ್ಮ ಯುವಕ, ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆ ,ಸಿ ಆರ್ ಶೇಟ್ಟಿ ಫೌಂಡೇಶನ್ ಮತ್ತು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಹುಕ್ಕೇರಿ ಗೆಳೆಯರ ಬಳಗ ವತಿಯಿಂದ ಬೃಹತ್ ಉಚಿತ ಉದ್ಯೋಗ ಮೇಳವನ್ನು ಹುಕ್ಕೇರಿ …
Read More »ಚಿಕ್ಕೋಡಿಯಲ್ಲಿ ವಿಜೃಂಭಣೆಯಿಂದ ಜರುಗಿದ ಮೇದಾರ ಕೇತಯ್ಯಾ ಜಯಂತಿ
ಚಿಕ್ಕೋಡಿಯಲ್ಲಿ ವಿಜೃಂಭಣೆಯಿಂದ ಜರುಗಿದ ಮೇದಾರ ಕೇತಯ್ಯಾ ಜಯಂತಿ ಚಿಕ್ಕೋಡಿ: ಪಟ್ಟಣದಲ್ಲಿ ಇವತ್ತು ಶಿವಶರಣ ಮೇದಾರ ಕೇತಯ್ಯಾನವರ 894 ನೇ ಜಯಂತೋತ್ಸವ ವಿಜೃಂಭಣೆಯಿಂದ ಜರುಗಿತು. ಪ್ರಾರಂಭದಲ್ಲಿ ಮೇದಾರ ಕೇತಯ್ಯ ಅವರ ಭಾವಚಿತ್ರದ ಮೆರವಣಿಗೆಯು ಸಕಲ ವಾದ್ಯ ಮೇಳದೊಂದಿಗೆ,ಸುಮಂಗಲಿಯರ ಕುಂಭದೊಂದಿಗೆ ಚಿಕ್ಕೋಡಿ ಪಟ್ಟಣದ್ಯಾಂತ ಜರುಗಿತು. ಮೇದಾರ ಕೇತಯ್ಯಾ ಭವನದಿಂದ ಪ್ರಾರಂಭವಾದ ಮೆರವಣಿಗೆಯು ಅಂಕಲಿಕೂಟ, ಗುರುವಾರ ಪೇಟ, ಪುರಸಭೆ, ಬಸವೇಶ್ವರ ವೃತ್ತದವರೆಗೆ ಅತ್ಯಂತ ವಿಜೃಂಭಣೆಯಿಂದ ಸಾಗಿತು. ಬಳಿಕ ಬಸವಣ್ಣನವರ ಹಾಗೂ ಮೇದಾರ ಕೇತಯ್ಯಾನವರ ಭಾವಚಿತ್ರಕ್ಕೆ …
Read More »ಹ್ಯಾಪಿ ಸ್ಕೂಲ್ ಯೋಜನೆ: ವಿದ್ಯಾರ್ಥಿಗಳಿಗೆ ಸೌಕರ್ಯ
ಗೋಕಾಕ: ಶಾಲೆಗಳು ದೇವಾಲಯಗಳಾಗಿದ್ದು, ಮಕ್ಕಳನ್ನು ದೇವರಂತೆ ಕಾಣಬೇಕು. ಅವರ ಸೇವೆ ಮಾಡುವುದು ಪುಣ್ಯದ ಕಾರ್ಯ ಎಂದು ಇನ್ನರ್ವ್ಹೀಲ್ ಸಂಸ್ಥೆಯ ಜಿಲ್ಲಾ ಪ್ರಾಂತಪಾಲೆ ಜ್ಯೋತಿ ದಾಸ್ ಹೇಳಿದರು. ಶುಕ್ರವಾರ ತಾಲ್ಲೂಕಿನ ದುಂಡಾನಟ್ಟಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನರವ್ಹೀಲ್ ಸಂಸ್ಥೆಯ ಹ್ಯಾಪಿ ಸ್ಕೂಲ್ ಕಾರ್ಯಕ್ರಮದ ಅಡಿ ಶಾಲೆಗೆ ಕಲ್ಪಿಸಲಾದ ವಿವಿಧ ಸವಲತ್ತು, ಸೌಕರ್ಯ ಮತ್ತು ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದರು. ಇನ್ನರವ್ಹೀಲ್ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಸೌಲಭ್ಯಗಳನ್ನು …
Read More »ಬಟ್ಟೆ ಹರಿದು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು
ಬೆಳಗಾವಿ: ಇಲ್ಲಿನ ವಡ್ಡರವಾಡಿ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಹಲ್ಲೆ ಮಾಡಿದ ಪ್ರಕರಣ ತಡವಾಗಿ ಗೊತ್ತಾಗಿದೆ. ಕಳೆದ ಸೋಮವಾರ (ನ.11) ರಾತ್ರಿ ಘಟನೆ ನಡೆದಿದೆ. ಶನಿವಾರ ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಂದ್ರಾ ಅಷ್ಟೇಕರ್, ಹೂವಪ್ಪ ಅಷ್ಟೇಕರ್, ಮಣಿಕಂಠ ಅಷ್ಟೇಕರ್ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪಿಗಳು ಎಂದು ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ. ವಡ್ಡರವಾಡಿಯ ಮಹಿಳೆಯೊಬ್ಬರನ್ನು ಮಹಾರಾಷ್ಟ್ರಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಅವರಿಗೆ …
Read More »ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಪ್ರಮುಖ ಆರೋಪಿ ತಹಶೀಲ್ದಾರ್ ಕಚೇರಿಗೆ ಹಾಜರು
ಬೆಳಗಾವಿ: ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಶುಕ್ರವಾರ ಕಚೇರಿಗೆ ಬಂದು, ಕೆಲಸಕ್ಕೆ ಹಾಜರಾದರು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್ಡಿಎ ಅಶೋಕ ಕಬ್ಬಲಿಗೇರ ಹಾಗೂ ಸೋಮು ದೊಡವಾಡಿ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ‘ಯಾವುದೇ ಸರ್ಕಾರಿ ಅಧಿಕಾರಿ 48 ಗಂಟೆ ಜೈಲು ಸೇರಿದ್ದರೆ ಮಾತ್ರ ಅಮಾನತು ಮಾಡಲು ಅವಕಾಶವಿದೆ. ಹೀಗಾಗಿ, ತಹಶೀಲ್ದಾರ್ ಅಮಾನತು ಆಗಿಲ್ಲ. ಪ್ರಕರಣ …
Read More »ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
ಬೆಳಗಾವಿ: ದೇಶದಲ್ಲಿ ಮಾನವ ಕಳ್ಳ ಸಾಗಾಣಿಕೆ ಮತ್ತು ಜೀತ ಪದ್ಧತಿಯಂತಹ ಅನಿಷ್ಠ ಪದ್ಧತಿಗಳಿಗೆ ಬಡತನ, ಅನಕ್ಷರತೆ, ನಿರುದ್ಯೋಗ ಕಾರಣವಾಗಿದೆ. ಜೀತ ಪದ್ಧತಿ ಎಲ್ಲಿದೆ ಎಂಬುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿಮೋಹನ್ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ಪಂದನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧದಲ್ಲಿ ಮಾನವ ಕಳ್ಳ …
Read More »ಬೆಳಗಾವಿಯ ವಡ್ಡರವಾಡಿಯಲ್ಲಿ ಬಟ್ಟೆ ಹರಿದು ಮಹಿಳೆ ಮೇಲೆ ಹಲ್ಲೆ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ. ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ …
Read More »ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ
ಗೋಕಾಕ : ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರದಂದು ಪ್ರತಿಭಟನೆ ನಡೆಯಿಸಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಕಳೆದ ಹಲವಾರು ವರ್ಷಗಳಿಂದ ಗೋವಾದಲ್ಲಿ ವಾಸವಾಗಿರುವ ಕನ್ನಡಿಗರನ್ನು ವಿನಾ ಕಾರಣ ಗೋವಾ ಸರಕಾರ ಮನೆಗಳನ್ನು ತೆರವುಗೊಳಿಸಿ ತೊಂದರೆಯನ್ನು ನೀಡುತ್ತಿರುವುದು ಖಂಡನೀಯವಾಗಿದ್ದು, ಸುಮಾರು 40 ವರ್ಷಗಳಿಂದ ಗೋವಾದ ಮಾಪ್ಸಾದ …
Read More »ನೌಕರರಿಗೆ ಅನ್ಯಾಯ, ಸರ್ಕಾರದ ವಿರುದ್ಧ ಸ್ವಪಕ್ಷ ಶಾಸಕ ರಾಜು ಕಾಗೆ ಅಪಸ್ವರ
ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ …
Read More »