Breaking News

ಬೆಳಗಾವಿ

NHM ಸಿಬ್ಬಂದಿಗಳಿಂದ ನಾಳೆಯಿಂದ ಮುಷ್ಕ್ ರ

ಗೋಕಾಕ :ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ , ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, HR Policy ಮತ್ತು ಇತರೇ ಬೇಡಿಕೆಗಳ ಈಡೇರಿಕೆಗೆ ಇಂದು ತಹಸೀಲ್ದಾರ್ ಗೋಕಾಕ ಮತ್ತು ತಾಲೂಕಾ ಆರೋಗ್ಯ ಅಧಿಕಾರಗಳು  ಇವರಿಗೂ ಸಹ ಮನವಿ ಪತ್ರ ನೀಡಿದರು ಇನ್ನೂ ಮುಂದುವರೆದು, ಇಲಾಖೆ ಖಾಯಂ ನೌಕರರನ್ನು ಅವಲಂಬಿಸಿದೆ ಮತ್ತು ಎಲ್ಲಾ ಜಿಲ್ಲೆಯಲ್ಲಿ …

Read More »

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …

Read More »

ಪ್ರಥಮ ಭಾಷೆಗೆ 481 ವಿದ್ಯಾರ್ಥಿಗಳು ಗೈರು ಹಾಜರು

ಬೆಳಗಾವಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ 2ನೇ ದಿನವಾದ ಮಂಗಳವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಿತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 2,700 ಮಂದಿಯಲ್ಲಿ 2,540 ವಿದ್ಯಾರ್ಥಿಗಳು ಹಾಜರಾದರು. 160 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4,005 ಮಕ್ಕಳು ನೋಂದಾಯಿಸಿದ್ದರು. ಇವರಲ್ಲಿ 3,684 ಮಂದಿ ಹಾಜರಾದರು. 321 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.

Read More »

ಬ್ಯಾಂಕ್ ಸಿಬ್ಬಂದಿ ಸಾಲ ಕೊಡತಿಲ್ಲ: ಅಂತ ತಹಸೀಲ್ದಾರ್ ಕಛೇರಿ ಮುಂದೆ ವಿಷ್ಯದ ಬಾಟಲಿ ಇಡಿದು ಆತ್ಮಹತ್ಯೆ ಮುಂದಾದ ರೈತರು

ಚಿಕ್ಕೋಡಿ : ಹಾರೋಗೇರಿ ಪಿಕೆಪಿಎಸ್ ಬ್ಯಾಂಕ್ ನ ಸಿಬ್ಬಂದಿಗಳು ಬೆಳೆ ಸಾಲ ನೀಡುತ್ತಿಲ್ಲ. ಮುಚ್ಚಿಹೋಗಿರುವ ಬ್ಯಾಂಕ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಿ ಅಂತ ಕಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸುವಂತೆ ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರೈತ ಲಕ್ಷ್ಮಣ ತಿಪ್ಪಣ್ಣ ವಡಗೋಲೆ ವಿಷದ ಬಾಟಲಿ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಷಡಕ್ಷರಿ ಬ್ಯಾಂಕ್ ನಲ್ಲಿ ಅಲಖನೂರ ಗ್ರಾಮದ ರೈತ ಲಕ್ಷ್ಮಣ …

Read More »

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ …

Read More »

ಬಾಯಿಲೇರ್ ಪ್ರದೀಪನ ಪೂಜಾ ಸಮಾರಂಭ

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಬಾಯಿಲೇರ್ ಪ್ರದೀಪನ ಪೂಜೆ ಮಾಡಲಾಯಿತು. ಈ ಸಮಾರಂಭದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅಧಿಕರಾವ ಪಾಟೀಲ ( GM) ದತ್ತಕುಮಾರ್ ರಕ್ತಾಲೇ ( CC) ಪ್ರಮೋದ್ ಸಾಬಳೆ ( Boiler Engineer) ಪ್ರಶಾಂತ್ ಪಾಟೀಲ (HR) ಎಲ್ಲಾ ಕಾರ್ಮಿಕರು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.

Read More »

ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ ನೇಮಕ

ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ‘ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ‘ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ವಕ್ತಾರರನ್ನಾಗಿ ನೇಮಿಸಿದ ಅಧ್ಯಕ್ಷರಿಗೆ ಹೃದಯಪೂರ್ವಕ ಧನ್ಯವಾದ …

Read More »

ಆರ್‌ಸಿಯುಗೆ 126 ಎಕರೆ ಮಂಜೂರು.

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ. ‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ …

Read More »

ಶಾಸಕ ಐಹೊಳೆಗೆ ಕೋವಿಡ್ ದೃಢ.

ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ‌ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.

Read More »

ಜೂಜಾಟ: 22 ಮಂದಿ ಬಂಧನ.

ಬೆಳಗಾವಿ: ಇಲ್ಲಿನ ರಾಜಹಂಸ ಗಲ್ಲಿಯ ಸದಾನಂದ ಮಠದ ಪಕ್ಕದ ಗಲ್ಲಿಯಲ್ಲಿ ಭಾನುವಾರ ಮಧ್ಯರಾತ್ರಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 22 ಮಂದಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜೂರ ಚೋಪಧಾರ, ಪ್ರದೀಪ ಲಾಟೂಕರ, ಮೋಯಿಜ ಗಚವಾಲೆ, ವಿಜಯ ಪಾಟೀಲ, ಪರಶುರಾಮ ಮೇತ್ರಿ, ಸುಶೀಲ ಮುದೋಳಕರ, ಬಾಬು ಯಾದವ, ಅನಿಲ ಯಳ್ಳೂರಕರ, ಕಿಸನ ಪಾಟೀಲ, ಜಹಾಂಗೀರಖಾನ ಪಠಾಣ, ವಿಜಯ ಶಿಂದೋಳಕರ, ದೀಪಕ ಹೊನ್ಯಾಳಕರ, ಆಕಾಶ ಜಕ್ಕಾನೆ, ವಿನಾಯಕ ಗಣಾಚಾರಿ, ಸಾಗರ ಮುತಗೇಕರ, …

Read More »