Breaking News

ಬೆಳಗಾವಿ

ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಮರಾಠ ರೆಜಿಮೆಂಟ್ ನಲ್ಲಿ ಸೇನಾ ನೇಮಕಾತಿ ಮುಕ್ತ ರಾಲಿ ನಡೆಯುತ್ತಿದ್ದು, ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಯುವಕರು ಭಾಗಿಯಾಗಿದ್ದಾರೆ. ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದ ಅರ್ಜಿ ಹಾಕಿದ್ದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.   ಆದರೆ ಏಕಾಏಕಿ ಯುವಕರು ಸೇರಿದ್ದರಿಂದ ನೂಕು ನುಗ್ಗಲು, ತಳ್ಳಾಟ ನೂಕಾಟ ನಡೆದಿದೆ. ಈ ವೇಳೆ ಇಬ್ಬರು ಯುವಕರಿಗೆ ಗಾಯವಾಗಿದೆ. ನೂಕು ನುಗ್ಗಲು ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಸೈನಿಕರು …

Read More »

ವಕ್ಫ್‌ ಕಾಯ್ದೆ ರದ್ದಿಗೆ ಆಗ್ರಹಿಸಿ ನ.12ರಂದು ಪ್ರತಿಭಟನಾ ಸಭೆ

ಬೆಳಗಾವಿ: ‘ವಕ್ಫ್‌ ಕಾಯ್ದೆ ರದ್ದುಪಡಿಸಬೇಕು ಒತ್ತಾಯಿಸಿ ಹಾಗೂ ಈ ಕಾಯ್ದೆಯಿಂದ ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಆಗುತ್ತಿರುವ ಅನ್ಯಾಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಇಲ್ಲಿನ ಸಂಭಾಜಿ ಉದ್ಯಾನದಲ್ಲಿ ನ.12ರಂದು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದೇವೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಮುಖಂಡ ಬಸವರಾಜ ಭಾಗೋಜಿ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಕೊಲ್ಹಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಸಭೆ ಉದ್ದೇಶಿಸಿ ಮಾತನಾಡುವರು. ಜಿಲ್ಲೆಯ ವಿವಿಧ ಮಠಾಧೀಶರು, ಸಂತರು, …

Read More »

ಕಲಕಾಂಬ ಗ್ರಾ.ಪಂ ಕಟ್ಟಡಕ್ಕೆ ಪೆಟ್ರೋಲ್‌ ಬಾಂಬ್ ಎಸೆದ ದುಷ್ಕರ್ಮಿಗಳು

ಬೆಳಗಾವಿ: ತಾಲ್ಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಕಚೇರಿಯೊಳಗಿನ ಕೆಲ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಕೂಡ ಕಿತ್ತುಕೊಂಡು ಹೋಗಿದ್ದಾರೆ.   ಘಟನೆ ಶನಿವಾರ ಬೆಳಿಗ್ಗೆಯೇ ಜನರಿಗೆ ಗೊತ್ತಾಗಿದೆ. ಬಿಯರ್‌ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿ, ಅದಕ್ಕೆ ಬೆಂಕಿ ಹಚ್ಚಿ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಗೆ ಎಸೆಯಲಾಗಿದೆ. ಕಿಟಕಿಗೆ ಹೊತ್ತಿಕೊಂಡ ಬೆಂಕಿ ಕೆಲ ನಿಮಿಷಗಳ ಬಳಿಕ ತಾನಾಗಿಯೇ ನಂದಿದೆ. ಅದರ …

Read More »

ರಾಣಿ ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆ: ಜನ- ಪೊಲೀಸರ ಮಧ್ಯೆ ವಾಗ್ವಾದ

ಬೆಳಗಾವಿ: ತಾಲ್ಲೂಕಿನ ಕಣಬರಗಿಯ ಮುಖ್ಯವೃತ್ತದಲ್ಲಿ ಎರಡು ದಿನಗಳ ಹಿಂದೆ ಪ್ರತಿಷ್ಠಾಪಿಸಿದ್ದ ವೀರರಾಣಿ ಕಿತ್ತೂರು ಚನ್ನಮ್ಮನ ಅಶ್ವಾರೂಢ ಪ್ರತಿಮೆ ತೆರವು ಮಾಡುವ ವಿಚಾರಾಗಿ, ಶುಕ್ರವಾರ ತಡರಾತ್ರಿ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಶನಿವಾರ ನಸುಕಿನವರೆಗೂ ಗ್ರಾಮದಲ್ಲಿ ವಾತಾವರಣ ಬಿಗುವಿನಿಂದ ಕೂಡಿತ್ತು.   ಬೆಳಗಾವಿ ನಗರದಿಂದ ಕಣಬರಗಿಗೆ ಪ್ರವೇಶ ಮಾಡುವಾಗ ಸಿಗುವ ಮೊದಲ ವೃತ್ತದಲ್ಲಿ ಯಾವುದೇ ಪ್ರತಿಮೆ ಇರಲಿಲ್ಲ. ಆರಂಭದಿಂದಲೂ ಇದಕ್ಕೆ ರಾಣಿ ಚನ್ನಮ್ಮ ವೃತ್ತ ಎಂದೇ ಹೆಸರಿಡಲಾಗಿದೆ. ಇಲ್ಲಿ ಚನ್ನಮ್ಮನ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಅಮೆರಿಕ ಸಂಸತ್ತಿಗೆ ಬೆಳಗಾವಿಯ ಶ್ರೀನಿವಾಸ ಆಯ್ಕೆ:ಡೆಮಾಕ್ರೆಟಿಕ್ ಪಕ್ಷದಿಂದ ಗೆಲುವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ (69) ಎಂಬುವರು ಅಮೆರಿಕ ಸಂಸತ್ತಿನ ಪ್ರತಿನಿಧಿಯಾಗಿ ಚುನಾಯಿತರಾಗಿದ್ದಾರೆ. ಕಮಲಾ ಹ್ಯಾರಿಸ್‌ ನೇತೃತ್ವದ ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಮಿಷಿಗನ್ ರಾಜ್ಯದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ.   ಹಲವು ವರ್ಷಗಳಿಂದ ಅಮೆರಿಕದಲ್ಲಿ ಇರುವ ಶ್ರೀನಿವಾಸ ಥಾಣೇದಾರ ಅವರು ಬೆಳಗಾವಿಯ ಚಿಂತಾಮಣರಾವ್ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಅಲ್ಲಿ ವಿಜ್ಞಾನಿ, ಉದ್ಯಮಿ ಮತ್ತು ಇಂಗ್ಲಿಷ್‌ ಸಾಹಿತಿ ಆಗಿದ್ದಾರೆ. ಶ್ರೀನಿವಾಸ ಅವರು ಮಿಷಿಗನ್ ರಾಜ್ಯದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2024-25 ರ 13 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೈತರು, …

Read More »

ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ ಶ್ರೀಮಂತ ಪಾಟೀಲ

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ;ಮಾಜಿ ಶಾಸಕ ಆಕ್ರೋಶ ಅಥಣಿ:ರಾಜ್ಯದಲ್ಲಿ ಗ್ಯಾಂರಂಟಿ ಯೋಜನೆಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅವರು ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಅಥಣಿ ಸುಗರ್ಸ್ ಕಾರ್ಖಾನೆ ಕಚೇರಿಯಲ್ಲಿ ಮಾಧ್ಯಮದವರೊಡನೆ ಮಾತನಾಡುತ್ತ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತವಾಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರಕುತ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಯಾವುದೆ ಅಭಿವೃದ್ಧಿ ಕಾರ್ಯಗಳನ್ನ ಕಾನದೆ ಹಿನ್ನಡೆಯಗುಟ್ಟುದೆ. …

Read More »

ರಷಿಯಾದಲ್ಲಿ ವಿಶ್ವ ಕಿರಿಯರ ವೀರಾಗ್ರಣಿ ಕರಾಟೆ ಸ್ಪರ್ಧೆ ಅಕ್ಕತಂಗೇರಹಾಳ ವೈಷ್ಣವಿ ನಿರ್ವಾಣಿ ಗೆ ವಿಶ್ವ ಕರಾಟೆ ವೀರಾಗ್ರಣಿ ಪಟ್ಟ

ಬೆಳಗಾವಿ – ರಷಿಯಾದ ಉಜ್ಬೇಕಿಸ್ಥಾನ ದಲ್ಲಿ ಮಂಗಳವಾರ ಜರುಗಿದ ಅಂತರ್ರಾಷ್ಟ್ರೀಯ ವಿಶ್ವ ಕಿರಿಯರ ವೀರಾಗ್ರಣಿ ಕರಾಟೆ ಸ್ಪರ್ಧೆ ಯಲ್ಲಿ ಕರ್ನಾಟಕ ಪ್ರತಿನಿಧಿಸಿ ಪಾಲ್ಗೊಂಡಿದ್ದ ಗೋಕಾಕ ನಾಡಿನ ಅಕ್ಕತಂಗೇರಹಾಳ ಗ್ರಾಮದ ಪ್ರತಿಭಾವಂತ ಕರಾಟೆ ಪಟು, ೧೬ ರ ಬಾಲಕಿ, ವೈಷ್ಣವಿ ಶಿವನಗೌಡಾ ನಿರ್ವಾಣಿ ಸ್ವರ್ಣ ಪಡೆದು ವಿಶ್ವ ವೀರಾಗ್ರಣಿ ಪಟ್ಟ ತನ್ನ ಮುಡಿಗೇರಿಸಿಕೊಂಡಿದ್ದಾಳೆ. ಇಂಟರ್ ನ್ಯಾಶನಲ್ ಜೀತ್ ಕುನೆದೊ ಫೆಡರೇಶನ್ ನಿಂದ ಮಂಗಳವಾರ ದಿನಾಂಕ ೦೫ ರಂದು ರಷಿಯಾದ ಉಜಕಿಸ್ಥಾನ ದಲ್ಲಿ …

Read More »

ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ಮಾಹಿತಿ ಸಂಗ್ರಹಿಸಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »