ಬೆಳಗಾವಿಯ ಶಹಾಪುರದಲ್ಲಿರುವ ಸ್ಮಶಾನದಲ್ಲೇ ಶಿವರಾತ್ರಿಯ ಜಾಗರಣೆ ನಡೆಯುತ್ತದೆ. ಹಬ್ಬ-ಹರಿದಿನಗಳಲ್ಲೂ ಜನ ಬರುತ್ತಾರೆ. ಅಕ್ಷರಶಃ ಸ್ಮಶಾನಪ್ರಿಯ ಶಿವನ ನಿಜ ಆರಾಧನೆ ಇಲ್ಲಿ ನಡೆಯುತ್ತದೆ. ಶಹಾಪುರ ಮುಕ್ತಿಧಾಮ ವೈರಾಗ್ಯದ ತಾಣವನ್ನು ಭಕ್ತಿ ಕ್ಷೇತ್ರವನ್ನಾಗಿ ಬದಲಾಯಿಸಿದೆ. ಉತ್ತಮ ಉದ್ಯಾನ ಜನಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯ ಸಮಾಜಸೇವಕರು ಸೇರಿ 28 ವರ್ಷಗಳ ಹಿಂದೆ ಮುಕ್ತಿಧಾಮ ಸೇವಾ ಸುಧಾರಣಾ ಮಂಡಳಿ ಸ್ಥಾಪಿಸಿ, ಶಿವನ ಮಂದಿರ ನಿರ್ಮಿಸಿ, ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಮಹಾನಗರ ಪಾಲಿಕೆ ಅನುದಾನವಿಲ್ಲದೆ ಈ ಮಂಡಳಿಯೇ ಸ್ಮಶಾನವನ್ನು ಮಾದರಿ …
Read More »ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!
ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ …
Read More »ಮತದಾರರ ಪಟ್ಟಿ ಪರಿಷ್ಕರಣಾ ಸಭೆ
ನಿಪ್ಪಾಣಿ: ಮತಕ್ಷೇತ್ರದ ಬಿ.ಎಲ್.ಎ.-2 ಕಾರ್ಯಗಾರ ಸಭೆಯನ್ನು ಉದ್ಘಾಟಿಸಿ & ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಭೆ ನಡೆಸಿ ಮಾತನಾಡಲಾಯಿತು. ಕಾರ್ಯಗಾರದ ಬಗ್ಗೆ ಸಮಗ್ರ ಮಾಹಿತಿ ನೀಡಿ,ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದುಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶವನ್ನು ಕಲ್ಪಿಸಿದ್ದು,ನಿಖರ ಮತದಾರರ ಪಟ್ಟಿ ಇಲ್ಲದೆ,ನ್ಯಾಯಯುತ ಚುನಾವಣೆಗಳು ಅಸಾಧ್ಯ.ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಮೂಲಕ ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, …
Read More »ಯಾವ ಪುರುಷಾರ್ಥಕ್ಕೆ ಸಾವಿರ ದಿನಗಳ ಸಂಭ್ರಮ? ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಈರಣ್ಣ ಕಡಾಡಿ ಕಿಡಿ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳಾಗಿವೆ. ಇಂದು ಹಾವೇರಿಯಲ್ಲಿ ಬೃಹತ್ ಪ್ರಮಾಣದ ಸಾವಿರ ದಿನಗಳ ಸಂಭ್ರಮಾಚರಣೆ ಸಮಾವೇಶ ನಡೆಸಲಾಗುತ್ತಿದೆ “ಯಾವ ಪುರುಷಾರ್ಥಕ್ಕೆ ? ಈ ಸಮಾವೇಶ ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಾಗ್ದಾಳಿ ನಡೆಸಿದರು. ಶನಿವಾರ ಫೆ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ 3731 ಕ್ಕೂ ಹೆಚ್ಚು ರೈತರು …
Read More »Belagavi: ಕಾರು ಹಾಯ್ದು ಮಗು ಸಾವು
ಖಾನಾಪುರ: ತಾಲೂಕಿನ ವಾಟರೆ ಗ್ರಾಮದ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾರು ಹಾಯ್ದು ಶ್ರೀಷಾ ಸಂತೋಷ ನಾಯ್ಕ (1.6 ವರ್ಷ) ಮೃತಪಟ್ಟ ಘಟನೆ ನಡೆದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನಾಲ್ವರು ಕಳ್ಳರ ಬಂಧನ, 18 ಬೈಕ್ ಜಪ್ತಿ
ಬೆಳಗಾವಿ: ನಗರದ ಮಾರ್ಕೆಟ್, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವುನ ಪ್ರಕರಣದಲ್ಲಿ ಗುರುವಾರ ಪೊಲೀಸರು 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್.ಗ್ರಾಮದ ರಜತ ಶಿವಣಗೇಕರ (29), ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ವಿಠ್ಠಲ ಆರೇರ (38), ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಉಮೇಶ ಬಾಗೇವಾಡಿ (33), ಗುಡಸ ಗ್ರಾಮದ ಮೌಲಾ ಹಲಕರ್ಣಿ (48) ಬಂಧಿತರು. ಎರಡು ವರ್ಷಗಳಿಂದ ನಗರದ …
Read More »ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ ಖಡೆಬಜಾರ್ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಅವರು, ಮಕ್ಕಳ ನ್ಯಾಯ ಕಾಯ್ದೆ-2015ರ ಅನ್ವಯ ಪದಾಧಿಕಾರಿಗಳ ಮಾಹಿತಿ ಹಾಗೂ ಮಕ್ಕಳ ಸಹಾಯವಾಣಿ 1098ರ ಫಲಕಗಳನ್ನು ತಕ್ಷಣವೇ ಶಾಶ್ವತವಾಗಿ ಅಳವಡಿಸುವಂತೆ ಖಡಕ್ ಸೂಚನೆ ನೀಡಿದರು. ಅಲ್ಲದೆ, ಮಕ್ಕಳ ಪ್ರಕರಣಗಳ ರಿಜಿಸ್ಟ್ರಾರ್ …
Read More »ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್
ಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸ್ಥಳಕ್ಕೆ ತೆರಳಿ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು. ಹಿರಿಯ ನಾಗರಿಕರಿಗಾಗಿ ವಿವಿಧ ಮೋಜಿನ ಆಟಗಳು, ಸಂವಾದ, ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಸಾವಿರ ಹಿರಿಯ ನಾಗರಿಕರು ಸೇರಿದಂತೆ 20 …
Read More »ಬೆಳಗಾವಿಗೆ ಐಪಿಎಲ್ ಮ್ಯಾಚ್ ತರಲು ಪ್ರಯತ್ನ
ಬೆಳಗಾವಿ: ಐಪಿಎಲ್ನಂತಹ ಮ್ಯಾಚ್ಗಳು ಬೆಳಗಾವಿಯಲ್ಲೂ ನಡೆಯುವ ರೀತಿಯಲ್ಲಿ ಇಲ್ಲಿನ ಸ್ಟೇಡಿಯಂ ಅಭಿವೃದ್ಧಿಯಾಗಬೇಕಿದೆ. ಇದಕ್ಕಾಗಿಯೇ ಏಷಿಯನ್ ಕ್ರಿಕೆಟ್ ಕೌನ್ಸಿಲ್ ಸದಸ್ಯ ಆಶೀಷ ಶೇಲಾ ಅವರಿಗೆ ಮನವಿ ಮಾಡಿದ್ದು, ಐಪಿಎಲ್ ಮ್ಯಾಚ್ ಬರುವವರೆಗೂ ಪ್ರಯತ್ನ ಮುಂದುವರಿಯುತ್ತದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ನಗರದ ಸರ್ದಾರ ಮೈದಾನದಲ್ಲಿ ಎಂಪಿ ಫೌಂಡೇಷನ್ ವತಿಯಿಂದ ಆಯೋಜಿಸಿರುವ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಟುಗಳನ್ನು ಒಳಗೊಂಡಿರುವ “ಆಲ್ ಇಂಡಿಯಾ ಓಪನ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ&26′ ಶ್ರೀ ಮುರುಘೇಂದ್ರಗೌಡ …
Read More »ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. …
Read More »
Laxmi News 24×7