Breaking News

ಬೆಳಗಾವಿ

ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ

ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ …

Read More »

ಮದುವೆಗಳಲ್ಲಿ ಬ್ಯಾಂಡ್‌ಗೆ ಅನುಮತಿ: ಅಗ್ರಹ

ಬೆಳಗಾವಿ: ಮದುವೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಮಂಗಳವಾದ್ಯ ಮತ್ತು ಬ್ರಾಸ್‌ ಬ್ಯಾಂಡ್‌ಗಳನ್ನು ನುಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಂಗಳವಾದ್ಯ ಹಾಗೂ ಬ್ಯಾಂಡ್ ಕಲಾವಿದರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ‍ಪ್ರತಿಭಟನೆ ನಡೆಸಿದರು. ‘ಈ ವೃತ್ತಿಯನ್ನು ಸಾವಿರಾರು ಮಂದಿ ಅವಲಂಬಿಸಿದ್ದೇವೆ. ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಸಭೆ, ಸಮಾರಂಭ, ಮದುವೆ, ಜಯಂತಿ, ಜಾತ್ರೆ ಮೊದಲಾದ ಕಾರ್ಯಕ್ರಮಗಳಿಗೆ ಹಲವು ತಿಂಗಳವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದಾಗಿ ದುಡಿಮೆ ಇಲ್ಲದೆ, ಗಳಿಕೆಯೂ ಇಲ್ಲದೆ ನಾವು …

Read More »

ಬಸ್‌ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ

ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್‌ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್‌ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್‌ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್‌ ಜಾರಿ ಮಾಡಿ ಬಸ್‌ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್‌ …

Read More »

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …

Read More »

ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರ ಅಡ್ಡಿ

ಖಾನಾಪುರ: ತಾಲ್ಲೂಕಿನಲ್ಲಿ  ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು,  ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ …

Read More »

ಒಂದೇ ವಾರದಲ್ಲಿ  145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನುಬಂಧಿಸಲಾಗಿದೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವೆನೆ ಎಗ್ಗಿಲ್ಲದೆ ನಡೆಯುತ್ತಿದ್ದು,  ಒಂದೇ ವಾರದಲ್ಲಿ  145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನು ಬಂಧಿಸಿದ್ಧಾರೆ. 2 ಲಕ್ಷ 25 ಸಾವಿರ ಬೆಲೆಯ 145 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ದೂರು ದಾಖಲಾಗಿದ್ದು, 14 ಜನರನ್ನು ಬಂಧಿಸಲಾಗಿದೆ ಎಂದು  ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ …

Read More »

ಸತೀಶ ಜಾರಕಿಹೊಳಿ ಟೈಗರ್ ಗ್ಯಾಂಗ್ ಬಗ್ಗೆ ಹೇಳಿದ್ದೇನು….

ಗೋಕಾಕ:  ನಗರದಲ್ಲಿ  ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ನ್ನು  ತಡವಾದರು ಕೂಡ ಪೊಲೀಸರು ಬಂಧಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.  ನಿಷ್ಪಕ್ಷಪಾತ ತನಿಖೆಯಿಂದ ಮತ್ತಷ್ಟು ಮಾಹಿತಿ  ಹೊರ ಬರಲಿ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??   ಟೈಗರ್ ಗ್ಯಾಂಗ್ ಬಂಧನ ವಿಚಾರವಾಗಿ ನಗರದಲ್ಲಿ …

Read More »

ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್​ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ …

Read More »

ಸುವರ್ಣಸೌಧ ಮುಂದೆ ರಾಯಣ್ಣ, ಚೆನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಕಲ್ಪ ಯಾತ್ರೆ

ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್​ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

Read More »

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ. ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ …

Read More »