Breaking News

ಬೆಳಗಾವಿ

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ಸಂcಪೂರ್ಣ ಹಾಳಾಗಿದ್ದು: ವಾಹನ ಸವಾರರು ಆಕ್ರೋಶ.

  ಅಥಣಿ: ಅಥಣಿ ಪಟ್ಟಣದಿಂದ ಐಗಳಿ ಕ್ರಾಸ್ ವರೆಗೆ ವಿಜಯಪುರ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು ಹೋಗಿದ್ದು ರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಥಣಿ ಇಂದ ವಿಜಯಪುರ ಅಂತಾರಾಜ್ಯ ರಸ್ತೆ ಸಂಚಾರಕ್ಕೆ ಅಪಾಯ ಮಟ್ಟಕ್ಕೆ ಹೋಗಿದ್ದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಂಚರಿಸುವ ಸ್ಥಿತಿ ಏರ್ಪಟ್ಟಿದೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಿಂದ ಪಕ್ಕದ ಮಹಾರಾಷ್ಟ್ರ, ಹಾಗೂ ತೆಲಂಗಾಣ ರಾಜ್ಯಕ್ಕೆ ಅಥಣಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ …

Read More »

ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್‌ಗೆ ಬಿ.ಸಿ.ಪಾಟೀಲ ಪ್ರಶ್ನೆ

ಬೆಳಗಾವಿ: ‘ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’ ‘ಆರ್‌ಎಸ್‌ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ. ‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ‍್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು. ‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ …

Read More »

ವಿದ್ಯಾರ್ಥಿಗಳಿಗೆ ‘ಜಿತೋ ನೆರವು

ಬೆಳಗಾವಿ: ಜಿತೋ (ಜೈನ ಅಂತರರಾಷ್ಟ್ರೀಯ ವ್ಯಾಪಾರ ಸಂಸ್ಥೆ) ಬೆಳಗಾವಿ ವಿಭಾಗದಿಂದ ಜೈನ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಭಾನುವಾರ ಆರ್ಥಿಕ ನೆರವು ನೀಡಲಾಯಿತು. ‘7 ವರ್ಷಗಳಿಂದಲೂ, ಎಸ್ಸೆಸ್ಸೆಲ್ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 385 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತಲಾ ₹ 5ಸಾವಿರ ವಿತರಿಸಲಾಗಿದೆ’ ಎಂದು ಆಯೋಜಕರು ತಿಳಿಸಿದ್ದಾರೆ. ಮುಖಂಡರಾದ ಶಾಂತಿಲಾಲ ಪೋರವಾಲ, …

Read More »

ಜಿಐಟಿ ಎಂಬಿಎ ವಿಭಾಗದ ವಾರ್ಷಿಕೋತ್ಸವ

ಬೆಳಗಾವಿ: ಇಲ್ಲಿನ ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದಿಂದ ಆನ್‌ಲೈನ್ ಮೂಲಕ ವಾರ್ಷಿಕ ದಿನ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಮಾತನಾಡಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಮಾಜಕ್ಕೆ ನಿಷ್ಠರಾಗಿರಬೇಕು. ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವಿನ ಸಂಬಂಧವು ದೀರ್ಘಕಾಲದ್ದಾಗಿರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಗೆ ಅವರೇ ನಿಜವಾದ ಬ್ರಾಂಡ್ ಅಂಬಾಸಿಡರ್‌ಗಳಾಗಿರುತ್ತಾರೆ’ ಎಂದರು. ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣ ಶೇಖರ್ ಲಾಲ್‌ದಾಸ್ ವಾರ್ಷಿಕ …

Read More »

ನಾಳೆ ಸಚಿವರು ರಮೇಶ ಜಾರಕಿಹೊಳಿ ದೆಹಲಿಗೆ: ಸಂಪುಟ ವಿಸ್ತರಣೆ ಚರ್ಚೆಯ ನಡುವೆ ಗರಿಗೆದರಿದ ಕುತೂಹಲ

ರಾಜ್ಯ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಹೊಸದೆಹಲಿಗೆ ಹೊರಟಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಸಚಿವರು ಮೂರನೇ ಬಾರಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಕೆರಳಿಸಿದೆ. ಜಲಸಂಪನ್ಮೂಲ ಸಚಿವಾಲಯದ ಮಾಹಿತಿಯಂತೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ದೆಹಲಿಗೆ ತೆರಳುವರು. ಅಂದು ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸುವರು. ದೆಹಲಿಯಲ್ಲಿ ಶುಕ್ರವಾರದವರೆಗೂ ಜಾರಕಿಹೊಳಿ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದೆ. ಸಚಿವ ರಮೇಶ ಜಾರಕಿಹೊಳಿ …

Read More »

ಪ್ರಸಕ್ತ ಹಂಗಾಮು 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರದಿಂದ ಪ್ರಭಾ ಶುಗರ್ಸ್ ಪ್ರಸ್ತಕ ವರ್ಷದಿಂದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಸಕಾಲಯಕ್ಕೆ ಮಳೆಯಾಗಿ ಉತ್ತಮ …

Read More »

14 ‘ಕನ್ನಡ ಭಾಷಾ ದಿನ’ವೆಂದು ಆಚರಿಸಲು ಒತ್ತಾಯ

ಬೆಳಗಾವಿ: ’14ರಂದು ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಕನ್ನಡ ದಿನ ಆಚರಿಸುವಂತೆ ಕಚೇರಿ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಿದರು. ಅಂಚೆ ಇಲಾಖೆ ಅಧಿಕಾರಿಗಳಿಗೆ ಸಿಹಿ ವಿತರಿಸಿದರು. ‘ರಾಷ್ಟ್ರೀಕೃತ ಬ್ಯಾಂಕ್‌, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. …

Read More »

‘ಲಿಂಗಾಯತ’ ಜಾತಿ ಪ್ರಮಾಣಪತ್ರಕ್ಕೆ ಆಗ್ರಹ

ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು. ‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ …

Read More »

ಬೆಳಗಾವಿ: ಸರ್ಕಾರಿ ವೈದ್ಯರ ಪ್ರತಿಭಟನೆ

ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ‘ಸೆ.21ರವರೆಗೆ ಸರ್ಕಾರಕ್ಕೆ ಯಾವುದೇ ವರದಿ ನೀಡದೆ ಕಾರ್ಯನಿರ್ವಹಿಸುತ್ತೇವೆ’ ಎಂದು ತಿಳಿಸಿದರು. ‘ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ವಿಷಯದಲ್ಲಿ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸಲಾಗುವುದು. ಬಳಿಕವೂ ಸ್ಪಂದಿಸದಿದ್ದಲ್ಲಿ ಬೆಂಗಳೂರು ಚಲೋ …

Read More »