ಗೋಕಾಕ: ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರದಿಂದ ಪ್ರಭಾ ಶುಗರ್ಸ್ ಪ್ರಸ್ತಕ ವರ್ಷದಿಂದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಸಕಾಲಯಕ್ಕೆ ಮಳೆಯಾಗಿ ಉತ್ತಮ …
Read More »14 ‘ಕನ್ನಡ ಭಾಷಾ ದಿನ’ವೆಂದು ಆಚರಿಸಲು ಒತ್ತಾಯ
ಬೆಳಗಾವಿ: ’14ರಂದು ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಕನ್ನಡ ದಿನ ಆಚರಿಸುವಂತೆ ಕಚೇರಿ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಿದರು. ಅಂಚೆ ಇಲಾಖೆ ಅಧಿಕಾರಿಗಳಿಗೆ ಸಿಹಿ ವಿತರಿಸಿದರು. ‘ರಾಷ್ಟ್ರೀಕೃತ ಬ್ಯಾಂಕ್, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. …
Read More »‘ಲಿಂಗಾಯತ’ ಜಾತಿ ಪ್ರಮಾಣಪತ್ರಕ್ಕೆ ಆಗ್ರಹ
ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು. ‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ …
Read More »ಬೆಳಗಾವಿ: ಸರ್ಕಾರಿ ವೈದ್ಯರ ಪ್ರತಿಭಟನೆ
ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ‘ಸೆ.21ರವರೆಗೆ ಸರ್ಕಾರಕ್ಕೆ ಯಾವುದೇ ವರದಿ ನೀಡದೆ ಕಾರ್ಯನಿರ್ವಹಿಸುತ್ತೇವೆ’ ಎಂದು ತಿಳಿಸಿದರು. ‘ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ವಿಷಯದಲ್ಲಿ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸಲಾಗುವುದು. ಬಳಿಕವೂ ಸ್ಪಂದಿಸದಿದ್ದಲ್ಲಿ ಬೆಂಗಳೂರು ಚಲೋ …
Read More »ಬೆಳಗಾವಿ-ಕರಾಡ ರೈಲು ಮಾರ್ಗ ವಿಸ್ತರಣೆ ಎಂದು?
ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಬಹು ಬೇಡಿಕೆಯ ಕರಾಡ-ಧಾರವಾಡ ಹೊಸ ರೈಲು ಮಾರ್ಗದ ಈಗಾಗಲೇ ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದ್ದು, ಉಳಿದ ಬೆಳಗಾವಿ-ಕರಾಡ ಹೊಸ ರೈಲು ಮಾರ್ಗ ವಿಸ್ತರಣೆ ಮಾಡಬೇಕು ಎಂದು ಗಡಿ ಜನರ ಒತ್ತಾಯವಾಗಿದೆ. ಗಡಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕರಾಡ-ಧಾರವಾಡ(ಕೊಲ್ಲಾಪುರ, ನಿಪ್ಪಾಣಿ, ಸಂಕೇಶ್ವರ, ಬೆಳಗಾವಿ, ಕಿತ್ತೂರು ಮಾರ್ಗವಾಗಿ) ಹೊಸ ರೈಲು ಮಾರ್ಗ ರಚನೆಯಾಗಬೇಕೆಂದು ಕಳೆದ 2012ರಲ್ಲಿ ರೈಲ್ವೆ ಇಲಾಖೆ ಸರ್ವೇ ಕಾರ್ಯ ಕೈಗೊಂಡಿತ್ತು. ಇದೀಗ ಧಾರವಾಡ-ಬೆಳಗಾವಿ …
Read More »ಒಳಚರಂಡಿ ಪೈಪ್‌ಲೈನ್ ಒಡೆದು ಕಲುಷಿತ ನೀರು ಸಂಗ್ರಹ
ಬೆಳಗಾವಿ: ಮೂರು ದೇವಸ್ಥಾನಗಳು ಇರುವ ಈ ಪ್ರದೇಶದಲ್ಲಿ ಒಳಚರಂಡಿ ಪೈಪ್‌ಲೈನ್ ಒಡೆದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಸ್ಥಳೀಯರು ಕೆಲ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಮಧ್ಯ ಭಾಗದಲ್ಲಿರುವ ಸೋಮವಾರ ಪೇಟೆಯಲ್ಲಿ ಮೂರು ದೇವಸ್ಥಾನಗಳ ನಡುವೆ ಒಳಚರಂಡಿ ಇದ್ದು, ಇದರ ಪೈಪ್‌ಲೈನ್ ಒಡೆದು ಹೋಗಿದ್ದರಿಂದ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಇಲ್ಲಿ ನಡೆದುಕೊಂಡು ಹೋಗುವುದು ಸ್ಥಳೀಯರಿಗೆ ಕಷ್ಟದ ಕೆಲಸವಾಗಿದೆ. ಪೈಪ್‌ಲೈನ್ ಒಡೆದು ಗಜೀಲು ರಸ್ತೆಗೆ ಹರಿಯುತ್ತಿದ್ದು, ಜನರ ಆರೋಗ್ಯದ …
Read More »ಬಿ.ವೈ. ಪವಾರಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ
ಬೆಳಗಾವಿ: ‘ದೇಶ ಕಟ್ಟುವ ಪ್ರಯತ್ನದಲ್ಲಿ ಸಿವಿಲ್ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ’ ಎಂದು ಬೆಂಗಳೂರಿನ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಭಾ ಪುರಸ್ಕಾರ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಆರ್. ನಾಗರಾಜ್ ಹೇಳಿದರು. ಇಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಇ ಬಿ.ವೈ. ಪವಾರ ಅವರಿಗೆ ‘ತಾಂತ್ರಿಕ ರತ್ನ’ ಪ್ರಶಸ್ತಿ ನೀಡಿ ಮಾತನಾಡಿದರು. ‘ಸಿವಿಲ್ ಎಂಜಿನಿಯರ್‌ಗಳು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ, ಸದೃಢವಾದ ರಾಷ್ಟ್ರವನ್ನು ನಿರ್ಮಾಣ ಮಾಡಬಹುದು’ ಎಂದರು. ‘ಪ್ರತಿಷ್ಠಾನದಿಂದ ಸರ್ಕಾರದ ಅನುಮೋದನೆ ಮೇರೆಗೆ …
Read More »ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.
ಬೆಳಗಾವಿ – ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೊಸ ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ ಅಧಿಕಾರ ಸ್ವೀಕಾರಿಸಿದರು. ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್ ವರ್ಗಾವಣೆಯಾಗಿದ್ದರಿಂದ ಅವರ ಸ್ಥಾನಕ್ಕೆ ಡಾ. ವಿಕ್ರಮ ಅಮಟೆ ಅವರನ್ನು ನೇಮಿಸಲಾಗಿದೆ. ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.
Read More »ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಗೋಕಾಕ: ಹಿಂದಿ, ಇಂಗ್ಲೀಷ ನಂತರ ಮೊದಲು ಕರ್ನಾಟಕದಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಬೇಕು, ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ಹಿಲ್ ಗಾರ್ಡನ್ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ದೇಶ್ಯಾದ್ಯಂತ ಹಿಂದಿ ಹೇರಿಕೆಗೆ ನಡೆದಿತ್ತು. ಹಲವು ರಾಜ್ಯಗಳು ಇದನ್ನು ಖಂಡಿಸಿದ್ದವು. ಮೊದಲು ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕು. ಇಲ್ಲಿಯವರೆಗೂ ಕನ್ನಡ …
Read More »ಆರೆಸ್ಸೆಸ್ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ
ಬೆಳಗಾವಿ: ಆರೆಸ್ಸೆಸ್ ರೀತಿ ಯಲ್ಲಿ ನಮ್ಮ ಶತ್ರುಗಳಿಗೂ ತರಬೇತಿ ನೀಡುವುದಿಲ್ಲ. ಆರೆಸ್ಸೆಸ್‌ಗೂ ಕಾಂಗ್ರೆಸ್ ತರಬೇತಿ ಶಿಬಿರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಸ್ಪಷ್ಟಪಡಿಸಿದರು. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ರೀತಿಯ ಸಂಘಟನೆ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, …
Read More »
Laxmi News 24×7