ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …
Read More »ಕೊಲೆ, ಸುಲಿಗೆ, ಅಕ್ರಮ ಚಟುವಟಿಕೆಗಳೇ ತುಂಬಿದ್ದ ಗ್ರಾಮದಲ್ಲಿ ಈಗ ಶಿಕ್ಷಣ ಕ್ರಾಂತಿ, ಯಾವೂರದು?
ಬೆಳಗಾವಿ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸವಾಣಿ ಇದೆ.. ಈ ಮಾತು ನಿಜಕ್ಕೂ ಸತ್ಯ. ಜೀವನ ಅರ್ಥ ತಿಳಿಯಲು, ಗುರಿ ಸಾಧಿಸಲು ಗುರು ಬೇಕೆ ಬೇಕು. ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ತವರು ಎಂದು ಈ ಗ್ರಾಮ ಖ್ಯಾತಿ ಪಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿರುವ ಈ ಇಂಚಲ ಗ್ರಾಮ ಶಿಕ್ಷಕರಿಂದಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಗ್ರಾಮದಲ್ಲಿ ಮನೆಗೆ ಒಬ್ಬರಂತೆ ಶಿಕ್ಷಕರಿದ್ದಾರೆ. …
Read More »ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ.ಈ ಗ್ರಾಮದಲ್ಲಿ
ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ …
Read More »ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಸೆ.೨೨ರ ಒಳಗಾಗಿಆರಂಭಿಸಬೇಕು
ಬೆಳಗಾವಿ :ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದು ಸೆ.೨೨ರ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ , ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತಾಗಿ ಕೈಗೊಳ್ಳಬೇಕಾದ …
Read More »ಟೈಗರ್ ಗ್ಯಾಂಗ್ ಅಲ್ಲ ಅದು, ಬಿಲ್ಲಿ ಗ್ಯಾಂಗ್: ರಮೇಶ ಜಾರಕಿಹೊಳಿ
ಬೆಳಗಾವಿ: ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್ ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ. ಟೈಗರ್ ಗ್ಯಾಂಗ್ ಅಲ್ಲ ಅದು, ಬಿಲ್ಲಿ ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ …
Read More »ಡ್ರಗ್ಸ್ ದಂಧೆಗೆ ಕಡಿವಾಣ: ಆಗ್ರಹ
ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …
Read More »ಸಾಲ ಮರುಪಾವತಿಗೆ ಪೀಡಿಸಿದರೆ ಕೇಸ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ
ಬೆಳಗಾವಿ: ‘ಸಾಲಗಾರರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಗುರುವಾರ ನಡೆದ ಹಣಕಾಸು ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮರ್ಧ್ಯವತಿಗಳನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಮುಂದುವರಿಯಬಾರದು. ಒತ್ತಾಯದಿಂದ ಸಾಲ ಮರುಪಾವತಿ ಸೇರಿದಂತೆ ಇತರ ತೊಂದರೆ …
Read More »ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ
ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. …
Read More »ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ………..
ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದ ಆಚಾರಿಗಲ್ಲಿಯಲ್ಲಿ ವಯಸ್ಕರ ಅಕ್ಕ ಮತ್ತು ತಮ್ಮ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನದ ಹಿಂದೆ ಆಚಾರಿಗಲ್ಲಿಯ ಮನೆಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಮನೆಯಿಂದ ದುರ್ವಾಸನೆ ಬಂದು,ಪ್ರಕರಣ ಇವತ್ತು ಬೆಳಕಿಗೆ ಬಂದಿದೆ. 61 ವರ್ಷ ವಯಸ್ಸಿನ ಯದುಕುಲೇಶ ನಾಯಿಕ,70 ವರ್ಷದ ಪಂಕಜಾ ರಾಮಚಂದ್ರ ನಾಯಿಕ,ಆತ್ಯಹತ್ಯೆ ಮಾಡಿಕೊಂಡಿದ್ದು,ಇಬ್ಬರೂ ಅವಿವಾಹಿತರಾಗಿದ್ದರು,ಮನೆಯಲ್ಲಿ ಬೇರೆ ಯಾರೂ ಇಲ್ಲದಿರುವದರಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ …
Read More »ಬೆಳಗಾವಿ ಸೂಪರ್ ಕಾಪ್ ಮಾರ್ಕೆಟ್ ಸ್ಟೇಷನ್ ಇಂದ ವರ್ಗಾವಣೆ………
ಬೆಳಗಾವಿ- ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆಯಾಗಿದ್ದು ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ಮಾರ್ಕೆಟ್ ಎಸಿಪಿಯಾಗಿ ಸದಾಶಿವ ಕಟ್ಟೀಮನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇಂದು ನಾರಾಯಣ ಭರಮಣಿ ಅವರು ಸದಾಶಿವ ಕಟ್ಟೀಮನಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ತರಬೇತಿ ಶಾಲೆಗೆ ವರ್ಗಾವಣೆ ಮಾಡಿದೆ. ಮಾರ್ಕೆಟ್ ಎಸಿಪಿಯಾಗಿ ನಾರಾಯಣ ಭರಮಣಿ ಅವರು ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡುವಲ್ಲಿ ಪ್ರಮುಖ …
Read More »