ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆನಂದ ಅಪ್ಪುಗೋಳ ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು …
Read More »ಕೊರೊನಾ ಕೂಡ. ಇದನ್ನು ನಾವು ಮನೆಯಲ್ಲಿ ಎದುರಿಸಬೇಕಾಗುತ್ತದೆ. ಇದರ ಬಗ್ಗೆ ತೆಲೆಕೆಡಿಸಿಕೊಂಡರೆ ಆರ್ಥಿಕತೆ ದಿವಾಳಿತನ ಆಗುತ್ತೆ
ಬೆಳಗಾವಿ: ಮಾಸ್ಕ್ ಹಾಕಿಕೊಂಡವರನ್ನು ನೋಡಿದರೆ ರಾಮಾಯಣ ನೆನಪಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಕೊರೊನಾ ಕುರಿತು ಭಾಷಣ ಮಾಡುವಾಗ ಮಾತನಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ
ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. …
Read More »ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ: ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, …
Read More »ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.
ಬೆಳಗಾವಿ : ಗಣೇಶ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿಘ್ನಗಳ ವಿನಾಶಕನೇ ಗಣೇಶ ಎಂಬ ಕಾರಣ ಪ್ರತಿಯೊಂದು ಸಮಾರಂಭದಲ್ಲಿ ಗಜಾನನ ಪೂಜೆ ನಡೆಸಲಾಗುತ್ತದೆ. ಆದ್ರೆ ಈ ಬಾರಿ ಗಣೇಶ ಹಬ್ಬಕ್ಕೆ ಮೂರ್ತಿ ತಯಾರಿಕ ಕುಟುಂಬಕ್ಕೆ ಈ ಮಾತು ಅಕ್ಷರಶಃ ಸುಳ್ಳಾಗಿದೆ. ಅಥಣಿ ಪಟ್ಟನದಲ್ಲಿವಂಶ ಪಾರಂಪರಿಕವಾಗಿ ಗಣೇಶ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿಕೊಂಡಿರುವ 15ಕ್ಕೂ ಹೆಚ್ಚು ಕುಟುಂಬಗಳು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. …
Read More »ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.
ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Read More »ಘಟಪ್ರಭಾ ನದಿ ಗೋಕಾಕ್ನ ಬಡಾವಣೆಗಳು ಜಲಾವೃತ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ …
Read More »ಸಾಂಬ್ರಾ ವಿಮಾನ ನಿಲ್ದಾಣದಲ್ಲಿಲಕ್ಷ್ಮಣ ಸವದಿ ಹೇಳಿದ್ದೇನು
ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ ಅವರು ನಡ್ಡಾ …
Read More »ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು
ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »