Breaking News

ಬೆಳಗಾವಿ

ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿ, ಸಂಗೊಳ್ಳಿ ರಾಯಣ್ಣ  ಪ್ರಥಮ ದರ್ಜೆ ಕಾಲೇಜ್ ಸುಸಜ್ಜಿತವಾದ ಮೂಲ ಸೌಕರ್ಯದೊಂದಿಗೆ  ಗ್ರಾಮೀಣ ಪ್ರತಿಭೆಗಳ ಉನ್ನತ ವ್ಯಾಸಂಗದ ಕನಸನ್ನು ನನಸು ಮಾಡುವ ಉದ್ದೇಶ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೊಂದಿದೆ. ಸುಮಾರು 9.8 ಕೋಟಿ ವೆಚ್ಚದಲ್ಲಿ  ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. …

Read More »

ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್ ಮಾಡಲಾಗಿದೆ. ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ.     ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ …

Read More »

ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್

ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …

Read More »

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತೋಷ ಜಾರಕಿಹೊಳಿ ಸಂತಾಪ

ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

  ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ …

Read More »

ಶವವಾಗಿರುವ ಎಂಇಎಸ್: ನಾರಾಯಣಗೌಡ ಟೀಕೆ

ಬೆಳಗಾವಿ: ‘ಇಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಶವವಾಗಿದೆ. ಮರುಜೀವ ಕೊಡುವುದಕ್ಕೋಸ್ಕರ ಕೆಲವರು ಆಗಾಗ ವಿವಾದಗಳನ್ನು ಸೃಷ್ಟಿಸುತ್ತಿರುತ್ತಾರೆ. ಇದಕ್ಕೆ ಕನ್ನಡಿಗರು ಅಂಜುವುದಿಲ್ಲ. ತಕ್ಕ ಉತ್ತರ ಕೊಡುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ರಾಯಣ್ಣನ ಪುಣ್ಯಭೂಮಿ. ಇಲ್ಲಿ ಆ ನಾಯಕನ ಪ್ರತಿಮೆ ಪ್ರತಿಷ್ಠಾಪನೆಗೆ ಯಾವುದೇ ದೊಡ್ಡ ನಾಯಕರ ಅನುಮತಿ ಬೇಕಿಲ್ಲ. ಯಾರೋ ವಿವಾದ ಸೃಷ್ಟಿಸಿ …

Read More »

ಆರ್‌ಸಿಯು: ಪೂರಕ ತರಗತಿ ಸೆ.1ರಿಂದ

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ಕೋರ್ಸ್‍ಗಳ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ.1ರಿಂದ ಪೂರಕ ತರಗತಿ ನಡೆಸಲಾಗುತ್ತದೆ. ಆದರೆ, ಈ ತರಗತಿಗಳು ಕಡ್ಡಾಯವಾಗಿರುವುದಿಲ್ಲ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ. ‘ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವವರ ಪೈಕಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. ಆನ್‍ಲೈನ್ ತರಗತಿಗಳ ಅಲಭ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗೆ ಅವರಿಗೆ ತೊಂದರೆಯಾಗಿದೆ. ಪರೀಕ್ಷೆ ಬರೆಯುವುದಕ್ಕಾಗಿ …

Read More »

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ …

Read More »

ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಹಾಗೂ ಅತಿಶೀಘ್ರದಲ್ಲೇ ಈ ಅಭಿವೃದ್ಧಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. …

Read More »