Breaking News

ಬೆಳಗಾವಿ

ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಬೆಳಗಾವಿ : ಗಣೇಶ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿಘ್ನಗಳ ವಿನಾಶಕನೇ ಗಣೇಶ ಎಂಬ ಕಾರಣ ಪ್ರತಿಯೊಂದು ಸಮಾರಂಭದಲ್ಲಿ ಗಜಾನನ ಪೂಜೆ ನಡೆಸಲಾಗುತ್ತದೆ. ಆದ್ರೆ ಈ ಬಾರಿ ಗಣೇಶ ಹಬ್ಬಕ್ಕೆ ಮೂರ್ತಿ ತಯಾರಿಕ ಕುಟುಂಬಕ್ಕೆ ಈ ಮಾತು ಅಕ್ಷರಶಃ ಸುಳ್ಳಾಗಿದೆ. ಅಥಣಿ ಪಟ್ಟನದಲ್ಲಿವಂಶ ಪಾರಂಪರಿಕವಾಗಿ ಗಣೇಶ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿಕೊಂಡಿರುವ  15ಕ್ಕೂ ಹೆಚ್ಚು ಕುಟುಂಬಗಳು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. …

Read More »

ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More »

ಘಟಪ್ರಭಾ ನದಿ ಗೋಕಾಕ್​​ನ ಬಡಾವಣೆಗಳು ಜಲಾವೃತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು‌‌ ನುಗ್ಗಿದೆ. ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ …

Read More »

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಲಕ್ಷ್ಮಣ ಸವದಿ ಹೇಳಿದ್ದೇನು

ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು  ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ  ಅವರು ನಡ್ಡಾ …

Read More »

ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು

ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …

Read More »

ಕುಂದಾನಗರಿಯಲ್ಲಿ ವರುಣನ ಅಬ್ಬರ : ಮಹಾಮಳೆಗೆ ಧರೆಗುರುಳಿದ ಮನೆಗಳು

ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು …

Read More »

ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!

ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್‌ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ.   ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ. …

Read More »

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ  ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು,  ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ  ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …

Read More »

ಘಟಪ್ರಭಾ ನದಿಗೆ 72800 ಕ್ಯೂಸೆಕ್ಸ್ ನೀರು ಹರಿವು: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ:ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …

Read More »