Breaking News

ಬೆಳಗಾವಿ

ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …

Read More »

ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ

ಬೆಳಗಾವಿ : ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕುRCU ವಿವಿ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕು ವಕ್ಕರಿಸಿದ್ದು, ವಿಶ್ವವಿದ್ಯಾಯಲ ಆವರಣದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.  ನೌಕರನಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ  ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು.   ವರದಿ ಪಾಸಿಟಿವ್ ಬಂದಿದೆ.

Read More »

ಶಾಸಕ ದುರ್ಯೋಧನನಿಗೆ ಖಾದಿ ಮತ್ತು ಗ್ರಾಮೋದ್ಯೋಗ  ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ

ಬೆಳಗಾವಿ:  ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ  ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ  ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ರಾಯಬಾಗ ಕ್ಷೇತ್ರಿದಂದ ಸತತ ಮೂರು ಬಾರಿ ಶಾಸಕರಾಗಿ ದುರ್ಯೋಧನ ಐಹೊಳೆ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.   ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಸಂಭ್ರಮದ ಮಧ್ಯೆಯೇ 24 ಶಾಸಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ.  24 …

Read More »

ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್  ಎರಡು ರಿಪೋರ್ಟ್

ಬೆಳಗಾವಿ: ಜಿಲ್ಲೆ ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್  ಎರಡು ರಿಪೋರ್ಟ್ ನೀಡಿ ಅಧಿಕಾರಿಗಳು ನಿನ್ನೆ ಎಡವಟ್ಟು ಮಾಡಿದ್ದಾರೆ. ಜುಲೈ 15ರಂದು ಅಥಣಿಯಲ್ಲಿ ಗಂಟಲು ದ್ರವದ ಮಾದರಿಯನ್ನು ನೀಡಿದ್ರು. ಜುಲೈ 16ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿ ಅಲ್ಲಿಯೇ ದಾಖಲಾಗಿದ್ದರು. ಜುಲೈ 18ರಂದು ಬೆಳಗಾವಿ ಬಿಮ್ಸ್ ಕೊರೊನಾ ನೆಗೆಟಿವ್ ರಿಪೋರ್ಟ್ ನೀಡಿದ  ಹಿನ್ನೆಲೆ ಅಂದೇ ಡಿಸ್ಚಾರ್ಜ್ ಮಾಡಿತ್ತು. ಕೊರೊನಾ ನೆಗೆಟಿವ್ ವರದಿ ಪಡೆದು ವ್ಯಕ್ತಿ …

Read More »

ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ

ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ ಕೋವಿಡ್-19 ಲಾಕ್ ಡೌನ್ ವೇಳೆ ತಾಯಿಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಔಷಧಿಗಳನ್ನು ಪೂರೈಕೆ ಮಾಡಿದ್ದಕ್ಕೆ ರಾಮದುರ್ಗದ ಪವಿತ್ರಾ ಹಾಲಬಾವಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು. ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರಕಾರದ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” …

Read More »