Breaking News
Home / ಜಿಲ್ಲೆ / ಬೆಳಗಾವಿ (page 500)

ಬೆಳಗಾವಿ

ಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ.

ಚಿಕ್ಕೋಡಿ :  ಪಟ್ಟಣದ  23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು  ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.  ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ …

Read More »

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ ಕುರಿತು ವೈದ್ಯಕೀಯ ಸಚಿವ ಸುಧಾಕರ್ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ   ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ …

Read More »

ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »

ಸಾಮಾಜಿಕ‌ ಅಂತರಕ್ಕೆ ಕ್ಯಾರೆ ಎನ್ನದ ಗೋಕಾಕ ಜನ: ತರಕಾರಿ‌ ಖರೀದಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜನಜಂಗುಳಿ

ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದ್ರೆ ಸಾಮಾಜಿಕ ಅಂತರ ಒಂದೇ ಮದ್ದು ಆಗಿರುವ ಮಹಾಮಾರಿ ಕೊರೋನಾ ಸೋಂಕಿಗೆ ಜನರು ಕ್ಯಾರೆ ಎನ್ನದೇ ಬೃಹತ್ ಸಂಖ್ಯೆಯಲ್ಲಿ ಸೇರಿದ್ದಾರೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ …

Read More »

ಗೋಕಾಕ: ಅಗತ್ಯ ವಸ್ತುಗಳ ಪೂರೈಕೆಗೆ ಕರ್ಪ್ಯೂ ಸಡಲಿಕೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು. ಸಾರ್ವಜನಿಕರು ಶಿಸ್ತು ಬದ್ಧವಾಗಿ ಸರದಿ ಸಾಲಿನಲ್ಲಿ ನಿಂತು …

Read More »

ನಾಳೆಯಿಂದ ಹೋಟೆಲ್ ಗಳಲ್ಲಿ ಪಾರ್ಸೆಲ್ ಸಿಗತ್ತೆ ದಿನ ನಿತ್ಯದ ವಸ್ತು ಗಳನ್ನ ಮನೆಬಾಗಿಲಿಗೆ ಬರುತ್ತೆ.:ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ -: ರಾಷ್ಟ್ರದಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ನಾಗರಿಕರಿಗೆ ದೈನಂದಿನ ಅಗತ್ಯ ಸಾಮಗ್ರಿಗಳಾದ ದಿನಸಿ, ತರಕಾರಿ ಮತ್ತಿತರ ವಸ್ತುಗಳನ್ನು ಮನೆಬಾಗಿಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ (ಮಾ.೨೫) ದಿನಸಿ, ತರಕಾರಿ ವ್ಯಾಪಾರಸ್ಥರು ಹಾಗೂ ಹೋಟೆಲ್ ಮಾಲೀಕರ ಜತೆ ಸಭೆ ನಡೆಸಿದ ಬಳಿಕ ಈ ವಿಷಯ ತಿಳಿಸಿದರು. ಕೋವಿಡ್-೧೯ ವೈರಾಣು ಹರಡುವಿಕೆ ತಡೆಗಟ್ಟಲು ವಾಹನಗಳ ಸಂಚಾರ ಸೇರಿದಂತೆ ಅನೇಕ ನಿರ್ಬಂಧ ವಿಧಿಸಲಾಗಿರುವುದರಿಂದ ನಾಗರಿಕರಿಗೆ …

Read More »

ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್-. ಎಸ್. ಬಿ.ಬೊಮ್ಮನಹಳ್ಳಿ

Share , ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ ಹತ್ತು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈಗಾಗಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬುಧವಾರ (ಮಾ.೨೫) ಬಂದಿದ್ದು, …

Read More »

ಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ…

ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿ ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರಕಿದೆ. ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದೇ ರೀತಿ …

Read More »

ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳು:

ಮೂಡಲಗಿ: ಕೊರೊನಾ ವೈರಸ್ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು  ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುಧವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನ್  ಗಳನ್ನು ತಗೆದುಕಂಡು ಬಂದು …

Read More »

ಮನೆ ಮನೆಗೆ ಅಗತ್ಯವಸ್ತುಗಳ ಪೂರೈಕೆ ತಲುಪಿಸುವ ಯೋಜನೆ ಆರಂಭಿಸಲಾಗುವುದು: ಅಭಯ ಪಾಟೀಲ್

ಬೆಳಗಾವಿ:  ಕೊರೊನಾ ಸೋಂಕು ತಡೆಗಟ್ಟಲು ಸಲುವಾಗಿ ರಾಷ್ಟ್ರವ್ಯಾಪಿ  ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ  ನಗರ ಜನತೆಗೆ ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆ ಆರಂಭಿಸಲಾಗುವುದು  ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು, ಜನರು ಅನಗತ್ಯವಾಗಿ ಹೊರಗೆ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಂಬಂಧಪಟ್ಟ ವ್ಯಾಪಾರಿಗಳು ಮತ್ತು ಜಿಲ್ಲಾಧಿಕಾರಿ, ಆಹಾರ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಚರ್ಚೆ  ಮಾಡಲಾಗಿದೆ. ಮನೆ …

Read More »