Breaking News

ಬೆಳಗಾವಿ

ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.

Read More »

ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಗೆ ಬಿಡದೇ ಕಾಡುತ್ತಿದೆ.

ಬೆಳಗಾವಿ: ನಗರದಲ್ಲಿ ಕೊರೊನಾ ಸೋಂಕಿಗೆ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ. ಗುಡ್ ಶೆಡ್ ರಸ್ತೆ ನಿವಾಸಿಯಾಗಿರುವ 74 ವರ್ಷದ ವ್ಯೆಕ್ತಿಗೆ ನಿನ್ನೆ ಮಧ್ಯಾಹ್ನ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯ ವೈದ್ಯರಿಗೆ ತೋರಿಸಿದಾಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸ್ಸು ಮಾಡಿದ್ದರು,, …

Read More »

ಬಡ್ಡಿ ಹೆಚ್ಚು ಪಡೆದುಕೊಳ್ಳುತ್ತಿದ್ದರೆ ಎಂದು ಆರೋಪಿಸಿ ಬ್ಯಾಂಕಗಳಿಗೆ ಮುತ್ತಿಗೆ ಹಾಕಿ ಗೋಕಾಕ ರೈತ ಸಂಘಟನೆಯಿಂದ ಪ್ರತಿಭಟನೆ…!

  ಗೋಕಾಕ :ನಿಗದಿ ದರಕಿಂತ ಹೆಚ್ಚು ಬಡ್ಡಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಜಾಜ್ ಪೈನಾನ್ಸ್ ಲಿಮಿಟೆಡ್ ಹಾಗೂ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಸೇರಿದಂತೆ ಗೋಕಾಕನ ವಿವಿಧ ಬ್ಯಾಂಕ್ ಕಚೇರಿಯ ಮುಂದೆ ರೈತ ಸಂಘಟನೆಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ಒಂದು ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ನಡೆದಿದೆ… ಸುಮಾರು ವರ್ಷಗಳ ಹಿಂದೆ ಸಾಗಣ್ಣಾ ಹಡಿಗನಾಳ ಹಾಗೂ ಈರಣ್ಣಾ ಹಡಿಗನಾಳ ಅನಾರೋಗ್ಯದಿಂದ ಸಾವನ್ನಪ್ಪಿದು ಅವರ ಸಾವಿಗೆ ಬ್ಯಾಂಕ್ …

Read More »

ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಿದ ಬೆಳಗಾವಿ ಜಿಲ್ಲೆಯ ಜನರ ಮೇಲೆ ಪ್ರಕರಣ ದಾಖಲಿಸಲು ಸೂಚನೆ

ಬೆಳಗಾವಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಬೆಳಗಾವಿ ಜಿಲ್ಲೆಯ 573 ಜನ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲು ಕ್ವಾರಂಟೈನ್ ನೊಡಲ್ ಅಧಿಕಾರಿಗಳು ಜಿಲ್ಲೆಯ ಉಪವಿಭಾಗಾಧಿಕಾರಿಗಳುಮತ್ತು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಪಕ್ಕದ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಗೆ ಬಂದಿರುವ 573 ಜನ ಹೋಮ್ ಕ್ವಾರಂಟೈನ್ ನಲ್ಲಿ ಇರದೇ ಸುತ್ತಾಡಿದ್ದು ಇವರನ್ನು ಟ್ರ್ಯಾಕ್ ಮಾಡಿರುವ ಕ್ವಾರಂಟೈನ್ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿರುವ 573 ಜನರ ಪಟ್ಟಿ ಮಾಡಿ ಬೆಳಗಾವಿ ಜಿಲ್ಲೆಯ ಎಲ್ಲ ಉಪ …

Read More »

ಗೋಕಾಕ ತಾಲೂಕಿನ ಘಟಪ್ರಭಾ ನಗರದ 2 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಘಟಪ್ರಭಾ: ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಘಟಪ್ರಭಾದಲ್ಲಿ ಎರಡು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ* ಪ್ರಾಥಮಿಕ …

Read More »

ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

ಅಥಣಿ:  ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ  ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ  32 ವರ್ಷದ ವ್ಯಕ್ತಿ.  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರ

ಅಥಣಿ:  ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರವನ್ನು ತಾಲೂಕಾಡಳಿತ  ಕೋವಿಡ್ ಮಾರ್ಗಸೂಚಿ ಪ್ರಕಾರ ನಿನ್ನೆ ತಡರಾತ್ರಿ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನೆರವೇರಿಸಿದೆ. ಲಂಡನ್ ನಲ್ಲಿ ನೆಲೆಸಿದ್ದ  ಖಾಸಗಿ ಕಂಪನಿಲ್ಲಿ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಟಿಕ್ಕಿ. ಜನೇವರಿ 15 ರಂದು ಅಥಣಿಗೆ ಮರಳಿದ್ದ . ಲಾಕ್ ಡೌನ್  ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ …

Read More »

ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …

Read More »

ಬೆಳಗಾವಿನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ -: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು. ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ. ಕೊರೊನಾ, ನೆರೆ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ …

Read More »

ನಿಪ್ಪಾಣಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ!

ನಿಪ್ಪಾಣಿಯಲ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಅಮಿತ ಸಾಳವೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರಾಯಗೌಡ ಕಲಗೌಂಡ ಕೆಳಗಿನಮಣಿ …

Read More »