ಖಾನಾಪುರ: ತಾಲ್ಲೂಕಿನಲ್ಲಿ ಬುಧವಾರ ಆರು ಜನರಿಗೆ ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಜಿಲ್ಲೆಯಲ್ಲಿ ಕೊರೊನಾ ಕೇಸ್ ದಾಖಲಾಗುತ್ತಿವೆ. ಇಂದು ಸಹ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಬರುವ ಮೊದಲೇ ಖಾನಾಪುರ ತಾಲ್ಲೂಕಿನಲ್ಲಿ 6 ಜನರಗೆ ಕೊರೊನಾ ವಕ್ಕರಿಸಿದೆ. ಆರೋಗ್ಯ ಇಲಾಖೆ 5 ಜನ ಸಿಬ್ಬಂದಿ, ಒಬ್ಬ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಜಿಲ್ಲಾಡಳಿತ ಲಾಕ್ ಡೌನ್ …
Read More »ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ರಾಮಜನ್ಮಭೂಮಿ ಅಯೋಧ್ಯೆಗೆ ತಲುಪಿಸಲು ಕೊರಿಯರ್ ಮುಖಾಂತರ ರವಾನಿಸಲಾಯಿತು.
ಬೆಳಗಾವಿ – ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ಇಂದು ಕಳುಹಿಸಲಾಯಿತು. ವಿಶ್ವ ಹಿಂದೂ ಪರಿಷತ್ ನಿರ್ಣಯದಂತೆ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕ್ಷೇತ್ರಗಳಾದ ಕಪಿಲೇಶ್ವರ ಮಂದಿರ, ಕಮಲ ಬಸ್ತಿ, ಕಣಬರಗಿಯ ಸಿದ್ದೇಶ್ವರ ಕ್ಷೇತ್ರ, ರಾಮತೀರ್ಥ ನಗರದ ರಾಮತೀರ್ಥ ಮಂದಿರಗಳ ತೀರ್ಥಗಳು, ಮಣ್ಣು ಮತ್ತು ಬೆಳಗಾವಿ ಜಿಲ್ಲೆಯ ಪಂಚನದಿಗಳಾದ ಕೃಷ್ಣೆ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಅಮೃತ ಜಲ ಮತ್ತು ಮಣ್ಣನ್ನು ಮತ್ತು …
Read More »ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ
ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ …
Read More »ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕೊರೊನಾ…..
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ 23 ಮಂದಿಗೆ ಕೊರೊನಾ ಕೊರೊನಾ ಸೋಂಕು ದೃಢವಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 1102 ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಂಗಳವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಇಂದು ಮೃತರಾದ ನಾಲ್ವರು ಬೆಳಗಾವಿ ತಾಲೂಕಿಗೆ ಸೇರಿದವರಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಮೃತರ ಸಂಖ್ಯೆ 30 ಕ್ಕೆ ತಲುಪಿದೆ. ಜಿಲ್ಲೆಯ 1102 ಸೋಂಕಿತರ ಪೈಕಿ 461 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 611 ಪ್ರಕರಣ …
Read More »ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ವಾಹನ ಮೇಲಿಂದ ಬಿದ್ದು ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಪಾಲಿಕೆ ಎದುರು ಪೌರ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕರ ಪ್ರತಿಭಟನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಬಲ ಸೂಚಿಸಿದರು. ಪಾಲಿಕೆ ಎದುರು ಧರಣಿ ಕುಳಿತು ಪರಿಹಾರಕ್ಕೆ ಆಗ್ರಹಿಸಿದರು. ಜು. 19 ರಂದು ತ್ಯಾಜ್ಯ ವಿಲೇವಾರಿ ಮಾಡುವ ವೇಳೆ ವಾಹನ ಮೇಲಿಂದ ಬಿದ್ದ ಪೌರ ಕಾರ್ಮಿಕ ಪ್ರಾಣ …
Read More »ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರು, ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಈ ರೀತಿ ಸಮಸ್ಯೆ ಉಂಟಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ. ಗೋಕಾಕ ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಚಲಾಯಿಸುವುದೊಂದೆ ಅವರ ಗುರಿಯಾಗಿದೆ. ಹೇಗಾದರು ಮಾಡಿ ದಿನ ದೂಡುತ್ತಿದ್ದಾರೆ. ಜನರ ಸಮಸ್ಯೆ ಪರಿಹರಿಸಲು ಇವರಿಗೆ ಇಂಟರೆಸ್ಟ್ ಇಲ್ಲವಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. …
Read More »ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದ: ರಮೇಶ ಜಾರಕಿಹೊಳಿ ಅವರು
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಭಿನಂದಿಸಿದರು. ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದರು. ಗೋಕಾಕ …
Read More »ಕೊರೊನಾ ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ಬುಡಾ ಕಚೇರಿ ಸೀಲ್ ಡೌನ್
ಬೆಳಗಾವಿ: ಜಿಲ್ಲೆಯಲ್ಲಿ ಜೂನ್ ಅಂತ್ಯದಿಂದ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತಲಿದ್ದು, ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಇಂಜಿನೀಯರ್ ಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಬುಡಾ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕ …
Read More »ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, ಅಥಣಿ 15, ಸಂಕೇಶ್ವರದಲ್ಲಿ 1 ಪ್ರಕರಣ ದೃಢಪಟ್ಟಿದೆ. ಚಿಕ್ಕೋಡಿಯಲ್ಲಿ ಒಂದು ವರ್ಷ ಹಾಗೂ 8 ವರ್ಷದ ಗಂಡು ಮಕ್ಕಳಲ್ಲಿ ಸಹ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26 ಆಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 618. ಇನ್ನೂ 2079 ಜನರ ಗಂಟಲು ದ್ರವದ ವರದಿ ಬರಬೇಕಿದೆ.
Read More »
Laxmi News 24×7