ಬೆಳಗಾವಿ – ಕಳೆದ ಎರಡು ದಿನಗಳಿಂದ ಬೆಳಗಾವಿ ನಿರಾಳವಾಗುತ್ತಿದೆ, ಪೋಲೀಸರ ಬಿಗಿ ಲಾಕ್ ಡೌನ್,ಜಿಲ್ಲಾಡಳಿತದ ಕ್ವಾರಂಟೈನ್ ಕಾರ್ಯಚರಣೆಯ ಪರಿಣಾಮವಾಗಿ ಬೆಳಗಾವಿಗೆ ಬಿಗ್ ರಿಲೀಫ್ ಸಿಗುತ್ತಿದೆ . ಇಂದು ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಕಲಬುರಗಿಯ ಐದು ಪಾಸಿಟೀವ್ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿದ್ದು ಭಾನುವಾರ,ಸೋಮವಾರ ಬೆಳಗಾವಿ ಪಾಲಿಗೆ ಕೊಂಚ ನೆಮ್ಮದಿ ನೀಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸರಪಳಿ ಕಳಚಿ ಬೀಳುವತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Read More »ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ
ಚಿಕ್ಕೋಡಿ -ಚಿಂಚಲಿ ಪಟ್ಟಣದಲ್ಲಿ ಕಟ್ಟಡವೊಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ. ಕೊರೊನಾ ಭಯಕ್ಕೆ ರಾತ್ರೋರಾತ್ರಿ ಮಾನೆಗಳನ್ನ ಖಾಲಿ ಮಾಡುತ್ತಿರುವ ಜನ ಹತ್ತಿರದ ತೋಟಗಳಲ್ಲಿ ಟೆಂಟ್ ಹಾಕಿಕೊಂಡು ಇರಲು ನಿರ್ಧರಿಸಿದ್ದಾರೆ. ಚಿಂಚಲಿ ಪಟ್ಟಣದ ಭಕ್ತಿ ನಿವಾಸದಲ್ಲಿ 44 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮಾಯಕ್ಕಾ ದೇವಸ್ಥಾನದ ಭಕ್ತಿನಿವಾಸದ ಸುತ್ತಲೂ ಇರುವ 40 ಕ್ಕೂ ಹೆಚ್ಚು ಕುಟುಂಬಗಳು ಮನೆ ಖಾಲಿ ಮಾಡಿವೆ. ಕುಡಚಿ …
Read More »ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯ,ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಮೂಡಲಗಿ: ಇಲ್ಲಿನ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗಮಠದ ಪೀಠಾದಿಪತಿ, ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ನಮನವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …
Read More »ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …
Read More »ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಹೋಗುತ್ತಿರುವಾಗಎರಡು ಲಾರಿಗಳು ಡಿಕ್ಕಿ
ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ …
Read More »(ಬೆಳಗಾವಿ):ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರುನ್ನುಪೊಲೀಸರು ಬಂಧಿಸಿದ್ದಾರೆ.
ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು …
Read More »ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ: ಸಚಿವ ರಮೇಶ್ ಜಾರಕಿಹೊಳಿ ಆರೋಪ
ಬೆಳಗಾವಿ: ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಅಂಗಡಿಗಳು ಕಳ್ಳತನವಾಗುತ್ತಿವೆ. ಇಲ್ಲಿ ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಅದನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ …
Read More »ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಸೇವೆಯಿಂದ ವೈರಸ್ ಹರಡುವಿಕೆ ತಡೆ: ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ
ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ ಆಹಾರ ವಸ್ತುಗಳ …
Read More »ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.
ಅಥಣಿ: ಎಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ರೂ ಗ್ರಾಮಗಳಿಗೆ ಭೇಟಿ ನೀಡದೆ ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಅತಿಥಿ ಗೃಹದಲ್ಲಿ ಇಂದು ಈ ವಿಚಾರವಾಗಿ ಮಾತನಾಡಿದ ಅವರು, ಕೊರೊನಾ ಜಾಗೃತಿಗಾಗಿ ಗ್ರಾಮಗಳಿಗೆ ಭೇಟಿ ನೀಡಿದರೆ ನನ್ನ ಜತೆ ಹಲವಾರು ಜನರು ಸೇರುವುದರಿಂದ ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಜನರಿಗೆ ಉಪಯೋಗ ಆಗಬೇಕು ಹೋರತು ನಮ್ಮಿಂದ ತೊಂದರೆ ಆಗಬಾರದು …
Read More »ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ …
Read More »