ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿದೆ. ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ. ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. …
Read More »ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….
ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …
Read More »ಮೊದಲ ಸಂಡೇ ಲಾಕ್‍ಡೌನ್ ಜಾರಿ ರಸ್ತೆಗಳು ಖಾಲಿ ಖಾಲಿ…………..
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊ ನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್‍ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿರಸ್ತೆಗಳು ಖಾಲಿ ಖಾಲಿಯಾಗಿವೆ. ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್‌ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ …
Read More »ಬೆಳಗಾವಿ :ಕೋವಿಡ್ ಔಷಧ ಪ್ರಯೋಗಕ್ಕೆ ಜೀವನರೇಖಾ ಆಸ್ಪತ್ರೆ ಆಯ್ಕೆ
ಬೆಳಗಾವಿ: ಕೋವಿಡ್ ಮಹಾಮಾರಿ ದೇಶದ ಎಲ್ಲ ಕಡೆ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದಿರುವ ಕೋವ್ಯಾಕ್ಸಿನ್ ಔಷಧಿ ಈಗ ಪ್ರಯೋಗಕ್ಕೆ ಸಿದ್ಧವಾಗಿದ್ದು, ಎಲ್ಲ ಅಂದುಕೊಂಡಂತೆ ಯಶಸ್ವಿಯಾದರೆ ಮುಂದಿನ ತಿಂಗಳು ಸಾರ್ವಜನಿಕರಿಗೆ ಲಭ್ಯವಾಗುವ ನಿರೀಕ್ಷೆ ಇದೆ. ಇದರ ಮಧ್ಯೆ ದೇಶದ 13 ಕಡೆಗಳಲ್ಲಿ ಜನರ ಮೇಲೆ ಇದರ ಪ್ರಯೋಗ ನಡೆಯಲಿದ್ದು, ಈ 13 ನಗರಗಳಲ್ಲಿ ಬೆಳಗಾವಿ ಸಹ ಆಯ್ಕೆಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಬೆಳಗಾವಿಯಲ್ಲಿ ಮುಂದಿನ ವಾರದಿಂದ …
Read More »ಬೆಳಗಾವಿ ಜಿಲ್ಲಾಡಳಿತಕ್ಕೆ ತಲೆನೋವಾಯ್ತು ಸೋಂಕಿತ ಮಹಿಳೆಯ ಟ್ರಾವೆಲ್ ಹಿಸ್ಟರಿ
ಬೆಳಗಾವಿ:ರಾಜ್ಯಾದ್ಯಂತ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮಹಾಮಾರಿ ವೈರಸ್ ಯಾರಿಗೆ, ಹೇಗೆ, ಯಾವಾಗ ತಲುಪುತ್ತದೆ ಎನ್ನುವುದೇ ತಿಳಿಯುವುದಿಲ್ಲ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ವ್ಯಾಪಕವಾಗಿ ಸೋಂಕು ಹೆಚ್ಚಳವಾಗುತ್ತಿದ್ದು, ಇದರ ತಡೆಗೆ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. ಏತನ್ಮಧ್ಯೆ ಬೆಳಗಾವಿಯಲ್ಲಿ ಬಳೆ ಮಾರುವ ಹೆಂಗಸಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಹೌದು, ಜಿಲ್ಲೆಯಲ್ಲಿ ಪ್ರತಿ ದಿನ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ …
Read More »ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.
ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ. ಜತೆಗೆ ಕಾಂಗ್ರೆಸ್ ನಲ್ಲಿ …
Read More »ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?
ಅಥಣಿ: ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ.. ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು …
Read More »ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಅದ್ದೂರಿಯಾಗಿ ಸ್ವಾಗತಿಸಿದರು. ಜುಲೇ 2 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದು,ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿ, …
Read More »ಬೆಳಗಾವಿ ನಗರದಲ್ಲಿ ಮನೆ ಮನೆಗೆ ತೆರಳಿ ಬಳೆ ತೊಡಿಸುವ ಮಹಿಳೆಗೆ ಕೊರೋನಾ
ಬೆಳಗಾವಿ: ಮನೆ ಮೆನೆಗೆ ತೆರಳಿ ಬಳೆ ತೋಡಿಸುತ್ತಿದ್ದ ಮಹಿಳೆಗೆ ಕೊರೋನಾ ಸೋಂಕು ಧೃಡಪಟ್ಟ ಬಳಿಕ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪರದಾಡುತ್ತಿದ್ದಾರೆ. 58 ವರ್ಷದ ಸೊಂಕೀತ ಮಹಿಳೆ ಪ್ರತಿ ದಿನ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ 200 ಕ್ಕೂ ಹೆಚ್ಚು ಮನೆಗಳ ಮಹಿಳೆಯರಿಗೆ ಬಳೆ ತೊಡೆಸಿದ್ದಾಳೆ ಎಂದು ತಿಳಿದು ಬಂದಿದ್ದು ಈ ಮಹಿಳೆಯ ಟ್ರಾವಲ್ ಹಿಸ್ಟರಿ ನೋಡಿ ಅಧಿಕಾರಿಗಳು ಹೈರಾನಾಗಿದ್ದಾರೆ. ಸೊಂಕು ತಗಲಿರುವ ಈ ಮಹಿಳೆ …
Read More »
Laxmi News 24×7