ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ …
Read More »ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ
ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ ಬುಧವಾರ ತಡರಾತ್ರಿ ಸಂಭವಿಸಿದೆ. ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ ಸೇರಿದ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬೈಲಹೊಂಗಲದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು. ’11 ಎಕರೆಯಲ್ಲಿ ಬೆಳೆದಿದ್ದ ಸೋಯಾಬೀನ್ ಕಾಯಿಗಳನ್ನು ಒಂದೆಡೆ ರಾಶಿ ಮಾಡಿ ಇಟ್ಟಿದ್ದೆವು. ಇದರಿಂದ ಸುಮಾರು ₹5 ಲಕ್ಷ ಕೈಗೆಟುಕಬಹುದು ಎಂದು ಅಂದಾಜಿಸಿದ್ದೆವು. ಆದರೆ, …
Read More »ಸಮೃದ್ಧ ಕೃಷಿ: ಭರಪೂರ ಆದಾಯ
ಬೆಳಗಾವಿ: ಕೃಷಿ ರಂಗದಲ್ಲಿ ಸದಾ ಪ್ರಯೋಗಶೀಲರಾದ ನಿಪ್ಪಾಣಿ ತಾಲ್ಲೂಕಿನ ಸೌಂದಲಗಾ ಗ್ರಾಮದ ರೈತ ಸಂಜಯ ಶಿಂತ್ರೆ ಅವರ ಹೊಲಕ್ಕೆ ಕಾಲಿಟ್ಟರೆ ಸಾಕು; ಹತ್ತಾರು ಬಗೆಯ ಬೆಳೆಗಳ ದರ್ಶನವಾಗುತ್ತದೆ. ಕಬ್ಬು, ಹೂವು, ಹಣ್ಣು, ಎಲೆಗಳು, ಈರುಳ್ಳಿ ಹೀಗೆ… ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತ, ಸಮಗ್ರ ಕೃಷಿಯಲ್ಲಿ ಅವರು ಖುಷಿ ಕಾಣುತ್ತಿದ್ದಾರೆ. ಜತೆಗೆ, ತಾಳೆ ಕೃಷಿಯೂ ಉತ್ತಮ ಆದಾಯ ನೀಡುತ್ತಿದೆ. ‘ನಾನು 18 ಎಕರೆ ಜಮೀನು ಹೊಂದಿದ್ದೇನೆ. ಯಾವುದೇ …
Read More »ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ
ಬೆಳಗಾವಿ: ‘ಪ್ರಭಾಕರ ಕೋರೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ನಾಲ್ಕು ದಶಕಗಳಾಗಿವೆ. ಅವರ ನಿಷ್ಕಲ್ಮಶ ಸೇವೆ ದಕ್ಷಿಣ ಕರ್ನಾಟಕ ಭಾಗಕ್ಕೂ ಗೊತ್ತಾಗಬೇಕು. ಎಲ್ಲ ಶಾಸಕರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾರಂಭ ಮಾಡಲಾಗುವುದು’ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಗುರುವಾರ ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಡವರಿಗಾಗಿ ಸರ್ಕಾರಗಳು ಎಷ್ಟು ಕಾಳಜಿ ತೋರುತ್ತವೆಯೋ, ಅಷ್ಟೇ ಕಾಳಜಿ ಕೆಎಲ್ಇ …
Read More »ಎಸ್ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಬೆಳಗಾವಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಎಸ್ಡಿಎ ರುದ್ರಣ್ಣ ಯಡವನ್ಣವರ ಆತ್ಮಹತ್ಯೆ ಪ್ರಕರಣದಲ್ಲಿ, ತಹಶೀಲ್ದಾರ್ ಸೇರಿದಂತೆ ಮೂವರೂ ಆರೋಪಿಗಳಿಗೆ ಗುರುವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ. ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್ಡಿಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರುದ್ರಣ್ಣ ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ತಮ್ಮ …
Read More »ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು
ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು. ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು …
Read More »ಚಿಕ್ಕೋಡಿ: ಕೆಎಲ್ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನ ಆಚರಣೆ
ಚಿಕ್ಕೋಡಿ: ‘ಲಿಂಗಾಯತ ಸಮಾಜ ಉಚಿತವಾಗಿ ಅನ್ನದಾಸೋಹ ಮಾಡುವ ಮೂಲಕ ಹೆಸರಾಗಿದ್ದು, ಕೆಎಲ್ಇ ಸಂಸ್ಥೆ 300ಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಮೂಲಕ ನಾಡಿಗೆ ಜ್ಞಾನ ದಾಸೋಹ ಮಾಡುತ್ತಿದೆ’ ಎಂದು ಸಾಹಿತಿ ರಾಮಕೃಷ್ಣ ಮರಾಠೆ ಹೇಳಿದರು. ಪಟ್ಟಣದ ಬಿ.ಕೆ ಕಾಲೇಜಿನಲ್ಲಿ ಹಮ್ಮಿಕೊಂಡ 109ನೇ ಕೆಎಲ್ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ‘ಶಿಕ್ಷಣ, ವೈದ್ಯಕೀಯ, ಸಮಾಜ ಸೇವೆಯಲ್ಲಿ ಕೆಎಲ್ಇ ಸಂಸ್ಥೆ ತನ್ನದೇ ಆದ ಕೊಡುಗೆಯನ್ನು ದೇಶ ವಿದೇಶಗಳಲ್ಲಿ ನೀಡುತ್ತಿದೆ’ ಎಂದರು. …
Read More »John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
ಗದಗ: ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು ಹಾಗೂ ಗೌರವದಿಂದ ಇರಬೇಕಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ನಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದ್ದು, ಪ್ರಹ್ಲಾದ್ ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ …
Read More »ಖಾವಿಧಾರಿಗಳಿಂದ ದೇಹದಾನ ಜಾಗೃತಿ
ಬೆಳಗಾವಿ: ಜಿಲ್ಲೆಯಲ್ಲಿ ಕೆಲವು ಮಠಾಧೀಶರು ಧರ್ಮ ಪ್ರಸಾರದ ಜತೆಗೆ ದೇಹದಾನದ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ‘ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ. ಮೌಢ್ಯದಿಂದ ಹೊರಬನ್ನಿ’ ಎಂದು ಕರೆ ಕೊಟ್ಟಿದ್ದಾರೆ. 2017ರಲ್ಲಿ ಇಲ್ಲಿನ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, 2019ರಲ್ಲಿ ರಾಮದುರ್ಗ ತಾಲ್ಲೂಕಿನ ನಾಗನೂರಿನ ಗುರುಬಸವ ಮಠದ ಬಸವಪ್ರಕಾಶ ಸ್ವಾಮೀಜಿ ದೇಹದಾನ ಮಾಡುವುದಾಗಿ ವಾಗ್ದಾನ ಮಾಡಿದ್ದಾರೆ. 2011ರಲ್ಲಿ ಮುನವಳ್ಳಿಯ ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ ನೇತ್ರದಾನ, 2019ರಲ್ಲಿ ನಾಗನೂರಿನ ಬಸವಗೀತಾ ತಾಯಿ ಚರ್ಮ ಮತ್ತು ನೇತ್ರದಾನ ಮಾಡುವುದಾಗಿ ವಾಗ್ದಾನ ಮಾಡಿದ್ದಾರೆ. ಇದರಿಂದ ಪ್ರೇರಣೆಗೊಂಡ …
Read More »ಬೆಳಗಾವಿ: ಮೂವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಮೂರು ಕಡೆ ಮೂವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ನಡೆಸಿದರು. ಸದ್ಯ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾಗಿರುವ ವೆಂಕಟೇಶ ಮಜುಂದಾರ್ ಅವರ ಬೆಳಗಾವಿ ಮನೆ ಮೇಲೆ ದಾಳಿ ನಡೆದಿದೆ. ಈ ಮೊದಲು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿದ್ದ ವೆಂಕಟೇಶ ಇಲ್ಲೂ ಮನೆ ಖರೀದಿಸಿದ್ದಾರೆ. ಗೋವಿಂದ ಹನುಮಂತಪ್ಪ ಭಜಂತ್ತಿ ಅವರ ಮನೆ ಇನ್ನೊಂದೆಡೆ, ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಶಿವಪ್ಪ ಅವರ …
Read More »