ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್ ಪಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್, …
Read More »ನಿಯಂತ್ರಣಕ್ಕೆ ಬಾರದ ಅಕ್ರಮ ಚಟುವಟಿಕೆ
ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …
Read More »ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು
ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ. ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್ ದುರಸ್ತಿ, ಫಿಲ್ಟರ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …
Read More »ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ
ಬೆಳಗಾವಿ: ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …
Read More »ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ
ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …
Read More »ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …
Read More »ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ.
ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಅದು ಯಾವುದೇ ಕೆಲಸವಿರಲಿ. ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆಯು ಈಗಲೂ ನಮ್ಮ ಪೂರ್ವಜರಲ್ಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಏಕದಂತ ಉತ್ಸವ ಸಮೀತಿಯಿಂದ ಜರುಗಿದ ಮೂಡಲಗಿ ಮಹಾರಾಜ ಗಣೇಶನ …
Read More »3 ವರ್ಷದ ಬಾಲಕಿಯ ಅಪಹರಣ,ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ
ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ 7 ವರ್ಷಗಳ ಹಿಂದೆ ನಡೆದಿದ್ದ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ತನಿಖಾ ಅಂತಿಮ ಹಂತ ತಲುಪಿದ್ದು, ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರ ಸೆಪ್ಟೆಂಬರ್ 21ರಂದು, ಕುರುಬಗೋಡಿ ಹಾರೂಗೇರಿಯ ನಿವಾಸಿ ಸುಧಾ ಅಪ್ಪಾಸಾಬ ಸಣ್ಣಕ್ಕಿ ಅವರು ತಮ್ಮ 3 ವರ್ಷದ ಮಗಳ ನಾಪತ್ತೆ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …
Read More »ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?
ಬೆಳಗಾವಿ, ಸೆಪ್ಟೆಂಬರ್ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ …
Read More »