Breaking News

ಬೆಳಗಾವಿ

ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು,ಬ್ರೇಡ್‌, ಬಿಸ್ಕತ್ತು ವಿತರಣೆ

ಹುಕ್ಕೇರಿ:ಸ್ಥಳೀಯ ಗುಡಸ ಗ್ರಾಮದ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮೀತಿಯ ತಾಲೂಕ ಅಧ್ಯಕ್ಷರಾದ ರವೀಂದ್ರ ಬಡಿಗೇರ ಅವರು ಮಹಾಮಾರಿ ಕೊರೋನ ರೋಗ ತಡೆಗಟ್ಟಲು ಪ್ರತಿನಿತ್ಯ ಪ್ರಾಣದ ಹಂಗಿಲ್ಲದೇ ಹೋರಾಡುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು, ಬ್ರೇಡ್‌, ಬಿಸ್ಕತ್ತುಗಳು ಕೊಟ್ಟು ವಿತರಿಸಿದರು‌. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ.ರಾಜ್ಯ ಉಪಾಧ್ಯಕ್ಷರಾದ ಸಿದ್ದಾರೋಡ ಬಡಿಗೇರ. ಮಹೇಶ್ ಪತ್ತಾರ.ಬಸವರಾಜ ಬಡಿಗೇರ.ಆಶಾ-ಅಂಗನವಾಡಿ ಕಾರ್ಯಕರ್ತೆಯರು,ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.

Read More »

ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ

ಚಿಕ್ಕೋಡಿ: ಕರ್ತವ್ಯ ಮುಗಿಸಿ ಊರಿಗೆ ತೆರಳುತ್ತಿದ್ದ ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ. ಮೃತ ಪೇದೆ ರಮೇಶ ನಾಯಿಕ(೨೫) ಎಂದು ಗುರ್ತಿಸಲಾಗಿದೆ. ಈತನು ಕರ್ತವ್ಯ ಮುಗಿಸಿ ದ್ವಿಚಕ್ರ ವಾಹನದ ಮೂಲಕ ತನ್ನ ಊರು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮಕ್ಕೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ನಾಗರಮುನ್ನೋಳ್ಳಿ ಗ್ರಾಮ ವ್ಯಾಪ್ತಿಯ ಬೆಳಗಲಿ ಕ್ರಾಸ್ …

Read More »

ಬೆಳಗಾವಿ: ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು

ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …

Read More »

ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ

  ಅಥಣಿ :ತನ್ನ ಜಮೀನ ಪಕ್ಕ ಇರುವ ರಸ್ತೆಯನ್ನ ರಾತೋರಾತ್ರಿ ಜೆಸಿಬಿ ಮೂಲಕ ತಗೆದು ಬಂದ್ ಮಾಡಿದ ವ್ಯಕ್ತಿ ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ ಚಿಕ್ಕೂಡ ಗ್ರಾಮದ ಗೌಡಪ್ಪಾ ರಾಮತೀರ್ಥ ಎಂಬಾತ ರಸ್ತೆ ಬಂದ ಮಾಡಿ ಉದ್ದತನ ಮೆರೆದ ವ್ಯಕ್ತಿ ಎರಡು ತಾಲೂಕಿನ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಶ ಪಡಿಸಿ‌ ಬಂದ್ ಮಾಡಿದ ಗೌಡಪ್ಪಾ ಅಥಣಿ ತಾಲೂಕಿನ ಚಿಕ್ಕೋಡಿ ಹಾಗೂ …

Read More »

ಅನುಮತಿ ಇಲ್ಲದೇ ರಾಜ್ಯಕ್ಕೆ ಪ್ರವೇಶಿಸಿದ್ ಸೋಂಕಿತ ಗರ್ಭಿಣಿ ಪತಿ, ಸಹೋದರ ಹಾಗೂ ಕಾರು ಚಾಲಕನ ಮೇಲೆ ಕೇಸ್: ಡಾ.ಎಸ್.ಬಿ. ಬೊಮ್ಮನಹಳ್ಳಿ

ಬೆಳಗಾವಿ- ಮುಂಬೈನಿಂದ ಬೆಳಗಾವಿಗೆ ಮರಳಿದ ಗರ್ಭಿಣಿಗೆ ಕೊರೊನಾ ಸೋಂಕು ತಗಲಿರುವದು ಇಂದು ಗುರುವಾರ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 114ಕ್ಕೇರಿಕೆಯಾಗಿದೆಮೇ 3ರಂದು ಮುಂಬೈದಿಂದ ಮರಳಿದ್ದ 7 ತಿಂಗಳ ಗರ್ಭಿಣಿಗೆ ಕೊರೊನಾ ಸೊಂಕು ತಗುಲಿದೆ ಗರ್ಭಿಣಿ ಎಂಬ ಕಾರಣಕ್ಕೆ ಮಹಿಳೆಗೆ ಹೋಮ್ ಕ್ವಾರಂಟೈನ್‌ಗೆ ಅವಕಾಶ ನೀಡಿಲಾಗಿತ್ತು ಆರೋಗ್ಯ ಇಲಾಖೆ ಹೋಮ್ ಕ್ವಾರಂಟೈನ್ ಗೆ ಅವಕಾಶ ನೀಡಿತ್ತು ಎಂದು ತಿಳಿದು ಬಂದಿದೆ. ಬೆಳಗಾವಿ ಸದಾಶಿವ …

Read More »

ಬೆಳಗಾವಿಯಲ್ಲಿ ಮತ್ತೆ ಕೊರೋನಾ ಅಟ್ಯಾಕ್.ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ

ಬೆಳಗಾವಿಯ ಸದಾಶಿವ ನಗರದ ತುಂಬು ಗರ್ಭಿಣಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ ಹೀಗಾಗಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ ಕೆಲ ದಿನಗಳ ಹಿಂದೆ ಈ ಮಹಿಳೆ ಮುಂಬೈಯಿಂದ ಬೆಳಗಾವಿಗೆ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಗೊತ್ತಾಗಿದೆ   ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖೆಯ 981ಕ್ಕೇರಿದಂತಾಗಿದೆ. ಬೆಂಗಳೂರಿನಲ್ಲಿ 5, ಮಂಡ್ಯ, ಗದಗ, ಬೀದರ್ ನಲ್ಲಿ ತಲಾ 4, …

Read More »

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ- ಶಿಕ್ಷಕ ಅಮಾನತು………..

ಚಿಕ್ಕೋಡಿ: ಏಳನೇ ತರಗತಿ ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅಸಭ್ಯವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದ್ದು, ಶಿಕ್ಷಕನನ್ನು ಅಮಾನತು ಮಾಡಿ ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನಿಡುತ್ತಿದ್ದ ಎಂದು ಶಾಲಾ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದರು. ದೂರು ಪರಿಶಿಲಿಸಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 1966 ರ ನಿಯಮ 3 (1) ಉಲ್ಲಂಘನೆ ಅಡಿಯಲ್ಲಿ …

Read More »

ಚಿಕನ್ ತರಲು ಹೋದ ವೃದ್ಧ ನಾಪತ್ತೆ- ಕುಟುಂಬಸ್ಥರಲ್ಲಿ ಆತಂಕ

ಚಿಕ್ಕೋಡಿ (ಬೆಳಗಾವಿ): ಚಿಕನ್ ತರಲು ಹೋದ ವೃದ್ಧನೋರ್ವ ನಾಪತ್ತೆಯಾಗಿರುವ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದ್ದು, ಕುಟುಂಬಸ್ಥರಲ್ಲಿ ಆತಂಕ ಶುರುವಾಗಿದೆ. ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಪ್ಪ ತಿಪ್ಪಣ್ಣ ಭಜಂತ್ರಿ (80) ಕಾಣೆಯಾದ ವೃದ್ಧ. ರಾಮಪ್ಪ ಅವರು ಏಪ್ರಿಲ್ 28ರಂದು ಸಂಜೆ 4 ಗಂಟೆ ಸುಮಾರಿಗೆ ಸೈಕಲ್ ತೆಗೆದುಕೊಂಡು ಬೂದಿಹಾಳ ಗ್ರಾಮಕ್ಕೆ ಹೋಗಿ ಚಿಕನ್ ತರುತ್ತೇನೆ ಎಂದು ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಮರಳಿ ಬಂದಿಲ್ಲ. ಎಲ್ಲಿದ್ದಾರೆ ಎನ್ನುವ ಸುಳಿವು ಕೂಡ …

Read More »

ಕಿತ್ತೂರು : ಜೀವ ಬೆದರಿಕೆಯೊಡ್ಡಿದ್ದ ೫ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ…..

ಕಿತ್ತೂರು : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಅನ್ನಪೂರ್ಣಾ ಅಂಗಡಿ ಅವರ ಮೇಲೆ ಸೋಮವಾರ ತಡರಾತ್ರಿ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ್ದ ೫ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಅಬ್ದುಲ್ಲಾ ಇಮಾಮ್‌ಹುಸೇನ ಮುಜಾವ. ಸಮೀರ ಮಹಮ್ಮದ ರಫೀಕ ಮುಜಾವರ, ಸರ್ಪರಾಜ್ ಲಿಯಾಖತ್ ಮುಜಾವರ, ಸುಹೇಲ್ ಕುತುಬುದ್ದೀನ್ ಇಮಾಮನವರ ಹಾಗೂ ದಸ್ತಗೀರ ಮಕ್ತುಂಸಾಬ್ ಇಮಾಮನವರ ಬಂಧಿತ ಆರೋಪಿಗಳು. ಆರೋಪಿಗಳ ಮೇಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು  ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.

Read More »