Breaking News

ಬೆಳಗಾವಿ

ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …

Read More »

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

  ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು. ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು

Read More »

ರಾಯಬಾಗ ,ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆಅಬಕಾರಿ ಇಲಾಖೆ ದಾಳಿ….

ಚಿಕ್ಕೋಡಿ : ರಾಯಬಾಗ ಹಾಗೂ ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದ್ವಿಚಕ್ರದ ವಾಹನ, ಟಾಟಾ ಇಂಡಿಗೋ ಕಾರ್,ಕಳ್ಳಭಟ್ಟಿ ಸರಾಯಿ ಸೇರಿ ಸುಮಾರು 4 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಗುರುವಾರ ವಶ ಪಡಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್ ಹಿರೇಮಠರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತ ಬಸವರಾಜ್ ಸಂದಿಗವಾಡ್, ಅಬಕಾರಿ ಇನ್ಸ್ಪೆಕ್ಟರ್ ಬಸವರಾಜ್ ಕರಾಮಣ್ಣವರ್ ಇವರು …

Read More »

ಮದ್ಯ ಸಾಗಾಟ ಮಾಡುತ್ತಿದ್ದಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಗಳಖೋಡ: ಲಾಕಡೌನ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಪ್ರತ್ಯೇಕ ದಾಳಿಯಲ್ಲಿ ಬಂಧಿಸಿದ್ದಾರೆ. ಶಾಸಕ ಕಾರ್ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳಿಂದ ಒಟ್ಟು ರೂ 15.635 ಮೌಲ್ಯದ ಮಧ್ಯ ಹಾಗೂ ಎರಡು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಿಣೆಯ ಗ್ರಾಮದ ಬಳಿ ಬೋಲೆರೋ …

Read More »

ಕೊರೋನಾ ವೈರಸ ತಡೆಗಟ್ಟುವಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತಿರುವ ಕೊರೋನಾ ಸ್ವಯಂ ಸೇವಕರು

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳೆದೊಂದು ತಿಂಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಬೆಟಗೇರಿ ಗ್ರಾಮದ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ …

Read More »

ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ.:ಸುರೇಶ ಅಂಗಡಿ

ಬೆಳಗಾವಿ: ಕೊರೊನಾ ಸೋಂಕಿತರು ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ. ನಾವೇಕೆ ತೆಲೆ ಕೆಡಿಸಿಕೊಳ್ಳಬೇಕಿಗ ? ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯಲ್ಲಿ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಮಾಧ್ಯಮದವರ ಪ್ರಶ್ನೇಗೆ ಸಚಿವರು ಉತ್ತರಿಸಿದ್ದಾರೆ. ಅಂತರ ಕಾಯ್ದುಕೊಳ್ಳದಿದ್ರೆ ಹೇಗೆ ಆರೋಗ್ಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಜತೆಗೆ ಯಾವ ನಂಬರ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ತಿಳಿಸಿ, ಅವರನ್ನು ಇಲ್ಲಿಯೇ …

Read More »

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಸಾವಿರ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.

Read More »

ಬೆಳಗಾವಿಯಲ್ಲಿ ಮತ್ತೆ 2 ಪಾಸಿಟಿವ್ ಕೇಸ್ ಪತ್ತೆ ಆಗಿವೆ. ಸೊಂಕಿತರ ಸಂಖ್ಯೆ 45ಕ್ಕೇರಿದೆ

ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮೈನಸ್ ಆಗುತ್ತಲೇ ಇದೆ.ಆದ್ರೆ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಗೆ ಆಘಾತ ತಂದಿದೆ. ಇಂದು ಬಿಡುಗಡೆಯಾದ ಹೆಲ್ತ್ …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ 

ಬೆಳಗಾವಿ – ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಬೆಳಗಾವಿ ಜಿಲ್ಲಾ ಔದ್ಯೋಗಿಕ ಸಹಕಾರ ಬ್ಯಾಂಕಿನ ಮಾಜಿ ನಿರ್ದೇಶಕ ಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ ಹೊಂದಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪತ್ನಿಮತ್ತು ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.  ಇಂದು ಸಂಜೆ ಖಾಸಬಾಗ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಡಗಾವಿ, ಖಾಸಬಾಗದ ಅನೇಕ ಗಣ್ಯರು ಪಾಲ್ಗೊಂಡಿದ್ದರು.        1982 ರ ಗೋಕಾಕ ಚಳವಳಿಯಿಂದ ಇತ್ತೀಚಿನವರೆಗಿನ ಎಲ್ಲ ಕನ್ನಡ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅವರು ಬೆಳಗಾವಿ …

Read More »