ಬೆಂಗಳೂರು: ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕ್ವಾಂರಂಟೈನ್ ನಲ್ಲಿರುವ ತಬ್ಲೀಗಿ ಸದಸ್ಯರು ವೈದ್ಯಕೀಯ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ಉಳುಗಿಳಿದ್ದಾರೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ ಸಂಪೂರ್ಣ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಕ್ವಾಂರಂಟೈನ್ ನಲ್ಲಿರುವ ಸದಸ್ಯರು ವೈದ್ಯಕೀಯ ಸಿಬ್ಬಂದಿಗೆ ಜತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಚಿಕಿತ್ಸೆ ನೀಡುವ ವೈದ್ಯರ ಮೇಲೆ ಉಗುಳಿದ್ದಾರೆ ಅಂತಾ ಸೋಮವಾರ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, …
Read More »ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ
ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …
Read More »ಜನಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಲ್ಲಿ ಪ್ರತಿದಿನ ಮನೆಗಳಿಗೆ ಭೇಟಿ ಬರಿ ಭಾಷಣ ಮಾಡಿ ಹೋಗುವುದಲ್ಲ: ರಮೇಶ ಜಾರಕಿಹೊಳಿ
ಮೂಡಲಗಿ: ಕೊರೋನಾ ಇಡೀ ಪ್ರಪಂಚಾದಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ನಿರ್ಮೂಲನೆ ಮಾಡುವಂತ ಕೆಲಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಸೋಮವಾರ ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೋನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ …
Read More »ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ:ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ …
Read More »ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ ಮೇಲೆ ಎಫ ಐ ಆರ್ ದಾಖಲು
ಬೆಳಗಾವಿ- ಟೂರಿಸ್ಟ್ ವೀಜಾ ಪಡೆದು ಬೆಳಗಾವಿಯಲ್ಲಿ ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾ ಜಮಾತಿನ ಹತ್ತು ಸದಸ್ಯರ ಮೇಲೆ ಪ್ರತ್ಯೇಕವಾಗಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಇಂಡೋನೇಶಿಯಾ ಮೂಲದ ಹತ್ತು ಜನ ಟೂರಿಸ್ಟ್ ವೀಜಾ ಪಡೆದು,ದೆಹಲಿಯ ಧರ್ಮ ಸಭೆಯಲ್ಲಿ ಭಾಗವಹಿಸಿ,ಬೆಳಗಾವಿಗೆ ಬಂದಿದ್ದರು ಕಾನೂನಿನ ಪ್ರಕಾರ ಅವರು ಮಿಶ್ನರಿ ವೀಸಾ ಪಡೆಯಬೇಕಾಗಿತ್ತು ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ …
Read More »“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …
Read More »18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ
ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …
Read More »ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ :ಬಿ.ಸಿ.ಪಾಟೀಲ್
ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯದ ಕೊಂಡಿಯಾಗಿರುವ ಗಡಿ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆ ಬಂದರು …
Read More »ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇಶನೂರು ಗ್ರಾಮದಲ್ಲಿನ ಯುವಕ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಇಲ್ಲಿನ ಮೀರಸಾಬ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕದಡುವಂತಹ ವಿಡಿಯೋವಂದನ್ನು ಮಾಡುವ ಮೂಲಕ ಹರಿಬಿಟ್ಟಿದ್ದನು. ಆದ ಕಾರಣ ಗ್ರಾಮಸ್ಥರು, ಮುಖಂಡರು, ತಾಲ್ಲೂಕ ಪಂಚಾಯಿತಿ ಕಚೇರಿಯಲ್ಲಿ ಕೂಡಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ ಪಾಟೀಲ್, ಗ್ರಾಮದ ಮುಖಂಡರು ಯುವಕನನ್ನು ಕರೆದೊಯ್ದು ಥಳಿಸಿದ್ದಾರೆ. …
Read More »ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುವ ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪ ಹಚ್ಚುವುದರಿಂದ ಕೊರೊನಾ ಸೋಂಕು ಹೋಗುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತಾರೆ. ಜನರನ್ನು ಒಂದೆಡೆ ಸೇರಿಸುವಂತಹ ಟಾಸ್ಕ್ ಗಳನ್ನು ನೀಡುತ್ತಾರೆ. ಮುಂದೆ ಯಾವ ಟಾಸ್ಕ್ ನೀಡುತ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು. ಕೊರೊನಾ ಸೋಂಕು …
Read More »