ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!! ಬಾಕ್ಸ್: ಕಬ್ಬು ಪೊರೈಸಿದ ರೈತರಿಗೆ ಸನ್ಮಾನ್/ಸಂತೋಷ ಜಾರಕಿಹೊಳಿ ನೇತೃತ್ವದಲ್ಲಿ ಆಯೋಜನೆ/ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅನ್ನದಾತರು. ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ಕಾರ್ಖಾನೆಗೆ ಕಬ್ಬು ಪೊರೈಸುತ್ತಿರುವ ರೈತರಿಗೆ ಇಂದು ಸನ್ಮಾನಿಸಿ ಗೌರವಿಸಲಾಯಿತು. ಈ ವರ್ಷದ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗೆ ಅವಶ್ಯಕತೆ ಇರುವಷ್ಟು ಕಬ್ಬುಗಳನ್ನು ರೈತರು ಪೊರೈಸಿದಕ್ಕೆ ಕಾರ್ಖಾನೆಯ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.ಆದ್ದರಿಂದ …
Read More »ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಬೆಳಗಾವಿಯ ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಬೆಳಗಾವಿಯ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಡುವಿನ ಅಂತಿಮ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಪಂದ್ಯದ ನಂತರ ಶ್ರೀ ಮಹೇಶ ಜಾಧವ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಯಾವುದೇ ಕ್ರೀಡಾಕೂಟದ ಉದ್ದೇಶ ಕೇವಲ ಗೆಲುವು – ಸೋಲು ಅಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಈ ಪಂದ್ಯಾವಳಿಯಲ್ಲಿ ವಿಜೇತರಾಗಿ ಆಯ್ಕೆಯಾದ ವಿಟಿಯು …
Read More »ಮೂರೇ ವರ್ಷದಲ್ಲಿ 13 ಸರ್ಕಾರಿ ಹುದ್ದೆ ಪಡೆದ ಬೆಳಗಾವಿ ಯುವತಿ ಈಗೇನು ಮಾಡುತ್ತಿದ್ದಾರೆ?
ಕೇವಲ ಮೂರು ವರ್ಷದಲ್ಲಿ 13 ನೌಕರಿ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದ ಗ್ರಾಮೀಣ ಭಾಗದ ಬಡ ಕುಟುಂಬದ ಪ್ರತಿಭೆ ಸದ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆ ಜೊತೆಗೆ ಕೆಎಎಸ್ ಮಾಡುವ ಕನಸು ನನಸಾಗಿಸಿಕೊಳ್ಳಲು ಸದ್ಯ ಸತತ ಅಧ್ಯಯನದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಡವರ್ಗದ ರೈತ ಕುಟುಂಬದಲ್ಲಿ ಜನಿಸಿದ ಗ್ರಾಮೀಣ …
Read More »ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಅಥಣಿ: ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ರಮೇಶ ಜಾರಕಿಹೊಳಿ ಅವರು ಜಾರಿಗೊಳಿಸುತ್ತಾರೆ. ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು ಜಲ ಸಂಪನ್ಮೂಲ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇಂದು ಖಾತೆ …
Read More »ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ.
ಬೆಂಗಳೂರು: ಸರೋಜಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಬಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿದೆ. ಇತ್ತ …
Read More »ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?
ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …
Read More »ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …
Read More »ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …
Read More »ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?
ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …
Read More »19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ
ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …
Read More »