ಬೆಳಗಾವಿ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೇರೊಂದು ಪಕ್ಷದಲ್ಲಿ ಇದ್ದುಕೊಂಡು ಅವರು ಸಿಎಂ ಆಗುತ್ತಾರೆ, ಇವರು ಸಿಎಂ ಆಗ್ತಾರೆ ಅಂತಾ ಹೇಳುವುದು ಸರಿಯಲ್ಲ. ಬಿಜೆಪಿ ಹೈಕಮಾಂಡ್ ರಮೇಶ ಅವರಿಗೆ ಕಡಿವಾಣ ಹಾಕಲಿ ಎಂದಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ ವಿಚಾರವಾಗಿ …
Read More »ಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ
ಬೆಳಗಾವಿ: ನಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ನವೀಕರಣಗೊಳಿಸಲಾಗುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಕಚೇರಿ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಿ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಇಂಜಿನೀಯರ್ ಚಂದು ಮುನ್ನವಳ್ಳಿಮಠ, ಮಹೇಶ …
Read More »ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಭಾನುವಾರ ಶಾಸಕಾಂಗ ಸಭೆ ಕರೆದಿದೆ: bsy
ಬೆಂಗಳೂರು,ಫೆ.13- ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಭಾನುವಾರ ಶಾಸಕಾಂಗ ಸಭೆ ಕರೆದಿದೆ. ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಕೆಲವು ಶಾಸಕರು ಕೈಕೊಡಬಹುದೆಂಬ ಭೀತಿಯೂ ಒಳಗೊಳಗೆ ಕಾಡುತ್ತಿದೆ. ಹೀಗಾಗಿ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.
Read More »ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ
ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಶಾಸಕರ ಗೃಹ ಕಚೇರಿಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿದ ಮಹಾಂತೇಶ ಮಗದುಮ್ ಶಾಸಕರಿಗೆ ಕೃತಜ್ಞೆಗಳನ್ನು ಸಲ್ಲಿಸಿದರು. ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭಿವೃದ್ಧಿಗೆ …
Read More »ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ. ಶುಭಂ ಗಜಾನನ ಹನ್ನೂರಕರ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಸೂರ್ತೆ ಗ್ರಾಮದವನಾಗಿರುವ ಶುಭಂ ತನ್ನ ತಂದೆಗೆ ಹೊಸ ಜಾಕೆಟ್ ಕೊಡುವಂತೆ ಹೇಳಿದ್ದಾನೆ. ಇದಕ್ಕೆ ತಂದೆ ಗಜಾನನ ನಾನು ಬೆಳಗಾವಿಯಲ್ಲಿ ಖರೀದಿ ಮಾಡಿಕೊಂಡು ಬರುತ್ತೇನೆ. ಆನ್‍ಲೈನಲ್ಲಿ ಖರೀದಿಸಬೇಡ ಎಂದು ತಿಳಿಸಿದ್ದಾ ಎಂದಿನಂತೆ ಬೆಳಗ್ಗೆ ತಂದೆ ಗಜಾನನ ಉದ್ಯಮಬಾಗದ ಕಾರ್ಖಾನೆಗೆ ಕೆಲಸಕ್ಕೆ ಎಂದು …
Read More »ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …
Read More »ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ
ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …
Read More »ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ
ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …
Read More »ಗೋಕಾಕ್ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಗೋಕಾಕ್ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.
Read More »