ಬೆಳಗಾವಿ: ‘ಕೊಲೆ ಆರೋಪಿ, ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ ನಡೆದಿದೆ. ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಬೇಕೋ, ಬೇರೆಡೆ ಕಳಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ’ ಎಂದರು. ‘ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿಚಾರವಾಗಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ …
Read More »ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್ ಏರಿಕೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ- ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ. ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ. …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಬಿಜೆಪಿ ಕಾರ್ಯಕರ್ತರ ಆಗ್ರಹ
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಘಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ …
Read More »ಕೊಲೆ ಪ್ರಕರಣ: ಎರಡು ವಿಶೇಷ ತಂಡ ರಚನೆ
ಬೆಳಗಾವಿ: ತಾಲ್ಲೂಕಿನ ಕರ್ಲೆ ಬಳಿ ವ್ಯಕ್ತಿಯೊಬ್ಬರ ಕೊಲೆ ಮಾಡಿದ ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡ ರಚಿಸಲಾಗಿದೆ. ಕರ್ಲೆ-ಬಾದರವಾಡಿ ರಸ್ತೆಯಲ್ಲಿ ಸೋಮವಾರ ಹೊರಟಿದ್ದ ಮೋಹನ ತಳವಾರ(55) ಅವರನ್ನು ದುಷ್ಕರ್ಮಿಗಳು ತಡೆದು, ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ‘ಮೋಹನ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಎರಡು ವಿಶೇಷ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ’ …
Read More »200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ
ಚನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. 200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ …
Read More »ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ನಮ್ಮ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವದ ದಿನದಂದು ಹುಟ್ಟಿ, ಗಣ ರಾಜ್ಯೋತ್ಸವದಂದು ಮರಣ ಹೊಂದಿದ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಇಂದಿಗೂ, ಎಂದೆಂದಿಗೂ ಅಮರ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಕಲ್ಲೊಳ್ಳಿ ಪ.ಪಂ ಕಚೇರಿಯ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಯಣ್ಣನಂತಹ ಕೆಚ್ಚದೆಯ ಶೂರರ ಜೀವನವು ಪ್ರತಿಯೊಬ್ಬ ವ್ಯಕ್ತಿಗೂ ಮಾದರಿಯಾಗಿದೆ ಎಂದು ತಿಳಿಸಿದರು. ಕಿತ್ತೂರು …
Read More »ಚಿಕ್ಕೋಡಿ: ಈ ಊರಿನ ಹೆಸರೇ ‘ಸೈನಿಕ ಮಲಿಕವಾಡ’; ಪ್ರತಿ ಮನೆಯಲ್ಲೂ ಇದ್ದಾರೆ ಸೈನಿಕ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲಿಕವಾಡ ಗ್ರಾಮವು ‘ಸೈನಿಕ ಮಲಿಕವಾಡ’ ಎಂದೇ ಹೆಸರಾಗಿದೆ. ಈ ಊರಿನ ಪ್ರತಿಯೊಂದು ಕುಟುಂಬದಲ್ಲೂ ಕನಿಷ್ಠ ಒಬ್ಬರು ಭಾರತೀಯ ಸೇನೆಯಲ್ಲಿದ್ದಾರೆ. ಸಿಆರ್‌ಪಿಎಫ್, ಬಿಎಸ್‍ಎಫ್, ಸಿಐಎಸ್‍ಎಫ್, ಎಸ್‍ಎಸ್‍ಬಿ ಸೇರಿ ವಾಯುಪಡೆ, ಭೂಸೇನೆ, ನೌಕಾಪಡೆಯಲ್ಲಿ ಇದ್ದಾರೆ. ಏಳು ದಶಕಗಳಿಂದ ಹೀಗೆ ಸೇನೆ ಸೇರಿದವರ ಸಂಖ್ಯೆ ಬಹಳ ದೊಡ್ಡದು. ಈಗಲೂ 150ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿದ್ದಾರೆ. 1965ರಲ್ಲಿ ಭಾರತ-ಚೀನಾ ಯುದ್ಧ, 1971ರಲ್ಲಿ ಭಾರತ- ಬಾಂಗ್ಲಾದೇಶ ಯುದ್ಧ ಮತ್ತು 1999ರಲ್ಲಿ ಕಾರ್ಗಿಲ್ …
Read More »ಬೈಲಹೊಂಗಲದ ಬಳಿ ಕ್ಯಾಂಟರ್ ಪಲ್ಟಿ: ಮೂರು ಕರು ಸಾವು
ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ. ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್‌ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ. ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್‌ನಲ್ಲಿ ಸಿಲುಕಿದ್ದ ಹಸುಗಳನ್ನು …
Read More »ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ
78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …
Read More »