ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್
ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ …
Read More »ಶತಮಾನದ ಶಾಲೆಗಳಿಗೆ ‘ಕನ್ನಡದ ಬಣ್ಣ’
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಿರೇಬುದನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಾರುಗೊಪ್ಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಗಳೂರಿನ ‘ಕನ್ನಡ ಮನಸುಗಳು ಕರ್ನಾಟಕ’ ತಂಡದ ಸದಸ್ಯರು ಬಣ್ಣ ಬಳಿದು, ಹೊಸ ರೂಪ ನೀಡಿದ್ದಾರೆ. ಬಣ್ಣ ಹಚ್ಚಿದರೆ ಸಾಲದು, ಆವರಣ ವಿಶಿಷ್ಟವಾಗಿಸಲು ಶಾಲಾ ತರಗತಿ ಕೊಠಡಿಯ ಗೋಡೆಗಳ ಮೇಲೆ ಮಹಾನ್ ನಾಯಕರು, ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ರಚಿಸಿದ್ದಾರೆ. ನಲಿ-ಕಲಿ ತರಗತಿಗೆ ಪೂರಕ ಚಿತ್ರಗಳನ್ನು ಬಿಡಿಸಿದ್ದಾರೆ. …
Read More »171 ಶಾಲಾ ಕೊಠಡಿ ನಿರ್ಮಾಣ: ಹುಕ್ಕೇರಿ
ಚಿಕ್ಕೋಡಿ: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, …
Read More »ಈಜು ರಿಲೆ: ದಾಖಲೆ ಬರೆದ ತಾಯಿ-ಮಗ
ಬೆಳಗಾವಿ: ಇಲ್ಲಿನ ಸ್ವಿಮ್ಮರ್ಸ್ ಕ್ಲಬ್ ಮತ್ತು ಅಕ್ವೇರಿಯಸ್ ಸ್ವಿಮ್ ಕ್ಲಬ್‌ನ ಈಜುಪಟುಗಳಾದ ಜ್ಯೋತಿ ಕೋರಿ (ಹೊಸಟ್ಟಿ) ಹಾಗೂ ಅವರ ಪುತ್ರ ವಿಹಾನ್ ಜತೆಯಾಗಿ, ಕೆಎಲ್‌ಇ ಸಂಸ್ಥೆಯ ಸುವರ್ಣ ಜೆಎನ್‌ಎಂಸಿ ಈಜುಕೊಳದಲ್ಲಿ ಗುರುವಾರ ನಡೆದ ‘ನಾನ್‌ಸ್ಟಾಪ್ ಸ್ವಿಮ್ಮಿಂಗ್ ರಿಲೆ’ಯಲ್ಲಿ 12 ಗಂಟೆ, 22 ನಿಮಿಷ ಈಜಿ ಇಂಡಿಯಾ ಅಂಡ್ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದರು. 44 ವರ್ಷ ವಯಸ್ಸಿನ ಜ್ಯೋತಿ ಮತ್ತು …
Read More »8 ಮತಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ ಜಾರಕಿಹೊಳಿ
ಯಮಕನಮರಡಿ: ‘ಮತಕ್ಷೇತ್ರದಲ್ಲಿ ಕಳೆದ 15ವರ್ಷದಲ್ಲಿ ನನ್ನ ತಂದೆ ಸತೀಶ ಜಾರಕಿಹೊಳಿ ಬಹಳಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ 8 ಮತಕ್ಷೇತ್ರದಲ್ಲಿ ಅಭಿವೃದ್ದಿ ಮಾಡುವೆ’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಸಮೀಪದ ಉಳ್ಳಾಗಡ್ಡಿ ಖಾನಾಪೂರದ ರಾಷ್ಟ್ರೀಯ ಹೆದ್ದಾರಿ 4ರಿಂದ ಉ.ಖಾನಾಪೂರ ಗ್ರಾಮದ ಪ್ರಮುಖ ರಸ್ತೆ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ₹1ಕೋಟಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಉ.ಖಾನಾಪೂರ ಗ್ರಾಮದ ರೈತನಿಗೆ ಅಪ್ಪಣ್ಣಾ …
Read More »ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ …
Read More »ಬೆಳಗಾವಿ: ಉಪ ಆಯುಕ್ತರ ಕಾರಿಗೆ ನೋಟಿಸ್ ಪ್ರತಿ ಅಂಟಿಸಿದ ಸಂತ್ರಸ್ತ
ಬೆಳಗಾವಿ: ರಸ್ತೆ ನಿರ್ಮಾಣಕ್ಕಾಗಿ ಶಹಾಪುರದ ಹೈಬತ್ತಿ ಕಾಲೊನಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿಗೆ, ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆಯವರು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಂತ್ರಸ್ತರೊಬ್ಬರು ಇಲ್ಲಿನ ಪಾಲಿಕೆ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಉಪ ಆಯುಕ್ತರ ವಾಹನಕ್ಕೆ ನೋಟಿಸ್ ಪ್ರತಿ ಅಂಟಿಸಿದ ಪ್ರಸಂಗ ಮಂಗಳವಾರ ನಡೆಯಿತು. ‘ನಾನು ರಸ್ತೆ ನಿರ್ಮಾಣಕ್ಕಾಗಿ 5 ಗುಂಟೆ ಜಮೀನು ನೀಡಿದ್ದೇನೆ. ಆದರೆ, ಹಲವು ವರ್ಷಗಳಿಂದ ಪರಿಹಾರ ಕೊಡದೆ ಸತಾಯಿಸುತ್ತಿದ್ದಾರೆ. ನನಗೆ ₹75.96 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ …
Read More »ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ
ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ …
Read More »ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …
Read More »