ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ …
Read More »ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು
ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಿರುಪತಿ ರಾಜಾರಾಮ ವಟಕರ್(50) ಮೃತರು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಜಾಂಬೋಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಜಾಂಬೋಟಿಯಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಶನಿವಾರದಿಂದ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಾಂಬೋಟಿಯಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಜಾಂಬೋಟಿ- ಪೀರಣವಾಡಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ- 54) ಕುಸಮಳಿ ಗ್ರಾಮದ ಹತ್ತಿರದ ಸೇತುವೆ ಹಳೆಯದಾಗಿದೆ. ಇದು ಸಂಚಾರಕ್ಕೆ ಯೋಗ್ಯವಾಗಿಲ್ಲ. ಅಲ್ಲದೇ ಜಾಂಬೋಟಿಯಿಂದ ಖಾನಾಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ …
Read More »ಸಿಬ್ಬಂದಿ ಕೊರತೆಗೆ ನಲುಗಿದ ಕೃಷಿ ಇಲಾಖೆ
ಬೆಳಗಾವಿ: ಬೇಸಾಯದಲ್ಲಿ ತಾಂತ್ರಿಕತೆ ಅಳವಡಿಕೆ, ಬೆಳೆ ವಿಮೆ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಕುರಿತು ರೈತರಿಗೆ ನಿಯಮಿತವಾಗಿ ಮಾಹಿತಿ ನೀಡಬೇಕಿದ್ದ ಮತ್ತು ಬೆಳೆಹಾನಿಯಂಥ ಸಂದರ್ಭ ತ್ವರಿತವಾಗಿ ರೈತರ ನೆರವಿಗೆ ನಿಲ್ಲಬೇಕಿದ್ದ ಕೃಷಿ ಇಲಾಖೆ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಜಿಲ್ಲೆಯಲ್ಲಿ ಕೃಷಿ ಇಲಾಖೆಗೆ ವಿವಿಧ ವೃಂದದ 498 ಹುದ್ದೆ ಮಂಜೂರಾಗಿವೆ. ಈ ಪೈಕಿ 205 ಮಂದಿಯಷ್ಟೇ ಕಾರ್ಯನಿರ್ವಹಿಸುತ್ತಿದ್ದಾರೆ. 293 ಹುದ್ದೆ ಹಲವು ವರ್ಷಗಳಿಂದ ಖಾಲಿ ಇವೆ. ಅದರಲ್ಲೂ ಮುಖ್ಯವಾಗಿ ಸಹಾಯಕ ಕೃಷಿ ಅಧಿಕಾರಿಗಳ(ಎಎಒ), …
Read More »ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಮುರಗೇಶ ಶಿವಪೂಜಿ
ಹುಕ್ಕೇರಿ: ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಿ ಜ್ಞಾನ ಬೆಳೆಸಿಕೊಂಡು ಪ್ರಬುದ್ಧ ನಾಗರಿಕರಾಗಬೇಕು. ಜತೆಗೆ ಪತ್ರಿಕೆಗಳಲ್ಲಿ ಬರುವ ಮಹತ್ವದ ಘಟನೆಗಳನ್ನು ಟಿಪ್ಪಣೆ ಮಾಡಿಕೊಂಡು, ವೈಯಕ್ತಿಕ ಬೆಳವಣಿಗೆಗೆ ಸದುಪಯೋಗ ಮಾಡಿಕೊಳ್ಳಿ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಘಟಕ ಅಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು. ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಪತ್ರಕರ್ತರ ಸಂಘ, ಸಮ್ಮೂರ ಬಾನುಲಿ ಸಮುದಾಯ ರೆಡಿಯೊ ಕೇಂದ್ರ, ಎಲ್ಲಾಪುರ ಹಾಗೂ ಸ್ಥಳೀಯ ಪತ್ರಕರ್ತರ ಬಳಗದ ಸಹಯೋಗದಲ್ಲಿ …
Read More »ಆಸ್ತಿಗಾಗಿ ನಡೆದಿತ್ತಾ ಡೆಡ್ಲಿ ಮರ್ಡರ್
ಬೆಳಗಾವಿ : ವ್ಯಕ್ತಿಯನ್ನು ಆಸ್ತಿ ವಿಚಾರವಾಗಿ ಕೊಲೆ ಮಾಡಿ ನಂತರ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣವನ್ನು ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ನಿವಾಸಿ ಮಾಣಿಕ ಕೇಶವ ಕದಮ್ ( 50 ) ರಸ್ತೆ ಮೇಲೆ ಸಂಚರಿಸುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು …
Read More »ಗ್ರಾಮಸ್ಥರ ; ಕಣ್ಣೀರು ತರಿಸುವ ಘಟನೆ
ಬೆಳಗಾವಿ : ತೀವ್ರವಾಗಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಗ್ರಾಮಸ್ಥರು ಕಟ್ಟಿಗೆಯ ಸ್ಟ್ರೇಚರ್ ನಲ್ಲಿ ಹಾಕಿ ಸುಮಾರು ಐದು ಕಿ.ಮೀಟರ್ ವರೆಗೆ ನಡೆದುಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಖಾನಾಪುರ ತಾಲೂಕಿನ ಅಂಗಾವ್ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಹರ್ಷದಾ ಘಾಡಿ ಎಂಬ ಮಹಿಳೆ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಖಾನಾಪುರ ಘಟ್ಟ ಪ್ರದೇಶದ ಕಾಡಂಚಿನಲ್ಲಿರುವ ಅಂಗಾವ್ ಗ್ರಾಮಕ್ಕೆ ರಸ್ತೆ ಸಂಪರ್ಕ ಸೇತುವೆ ಯಾವುದೂ ಇಲ್ಲ. ಮೋಬೈಲ್ ನೆಟ್ವರ್ಕ್ ಬೇಕಾದರೆ ಗ್ರಾಮದಿಂದ ಒಂದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾ ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …
Read More »0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ
ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು. ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ …
Read More »ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, ಜುಲೈ 19: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನ ಪರಿಷತ್ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್ ಜಬ್ಬರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು …
Read More »