Breaking News

ಬೆಳಗಾವಿ

ರಾಹುಲ್‌ ಗಾಂಧಿ ಕ್ಷಮೆ ಕೇಳಲಿ: ಕುಮಾರ ಹೀರೆಮಠ

ಬೆಳಗಾವಿ: ‘ಅಗ್ನಿಪಥ ಯೋಜನೆ ಕುರಿತಾಗಿ ಅವಹೇಳನಾಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಕ್ಷಣವೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಪೂರ್ವ ಸೈನಿಕರ ‌ಪ್ರಕೋಷ್ಠದ ರಾಜ್ಯ ಸಂಚಾಲಕ ಕುಮಾರ ಹೀರೆಮಠ ಒತ್ತಾಯಿಸಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆ ಆದರ್ಶ ಸೈನಿಕನನ್ನು ರೂಪಿಸುತ್ತದೆ. ಬಹಳಷ್ಟು ಯುವಕ-ಯುವತಿಯರು ಇದರ ಲಾಭ ಪಡೆದಿದ್ದಾರೆ. ಆದರೆ, ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಹುಲ್‌ ಗಾಂಧಿ ಈ ಯೋಜನೆ ವಿರೋಧಿಸಬಾರದು. ಇದರ …

Read More »

ಬೆಳಗಾವಿ: ನದಿಪಾತ್ರಗಳಿಗೆ ಭೇಟಿ ನೀಡಿದ DC; ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ: ‘ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ‌ ಉದ್ಭವಿಸಿಲ್ಲ. ಆದಾಗಿಯೂ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದಗಳನ್ನು ಪರಿಶೀಲಿಸಿದ ನಂತರ ಅವರು ಮಾಹಿತಿ ನೀಡಿದರು. ‘ಈಗಾಗಲೇ 26 ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್‌ಗಳನ್ನು ಕಾರವಾರದಿಂದ ತರಿಸಲಾಗುವುದು’ …

Read More »

ಮಹಾರಾಷ್ಟ್ರದಲ್ಲಿ ನಿರಂತರ ಮಳೆಗೆ ಕುಸಿದ ಆವಕ; ₹100ರ ಗಡಿ ತಲುಪಿದ ಟೊಮೆಟೊ ದರ

ಬೆಳಗಾವಿ: ನಗರದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಕನಿಷ್ಠ ₹80ರಿಂದ ₹100ರವರೆಗೆ ಮಾರಾಟವಾಗುತ್ತಿದೆ. ವಾರದ ಹಿಂದೆ ₹50ರಷ್ಟಿದ್ದ ದರ ಏಕಾಏಕಿ ಗಗನಮುಖಿ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಸಗಟು ವ್ಯಾಪಾರದಲ್ಲಿ ಎರಡು ವಾರಗಳ ಹಿಂದೆ 10 ಕೆ.ಜಿಯ ಒಂದು ಬುಟ್ಟಿಗೆ ₹600 ದರವಿತ್ತು. ವಾರದಿಂದಲೂ ದರ ಏರಿಸುತ್ತಲೇ ಇದ್ದಾರೆ. ಬುಧವಾರ ಬೆಳಿಗ್ಗೆ 10 ಕೆ.ಜಿಯ ಒಂದು ಟ್ರೇ ಟೊಮೆಟೊಗೆ ₹1000 ತೆಗೆದುಕೊಂಡಿದ್ದಾರೆ. ನಾವು ₹100ಕ್ಕೆ ಮಾರಿದರೂ ಹಾನಿ ಸಂಭವಿಸುತ್ತದೆ’ ಎಂದು …

Read More »

ಜಮೀನು ವರ್ಗಾವಣೆ: 15 ದಿನಗಳಲ್ಲಿ ವರದಿ‌ ನೀಡಿ

ಬೆಳಗಾವಿ: ನಗರದ ಕ್ಯಾಂಟೋನ್ಮೆಂಟ್‌ನ ವಸತಿ ಪ್ರದೇಶವನ್ನು ಮಹಾನಗರ ಪಾಲಿಕೆಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್ಮೆಂಟ್‌ ಬೋರ್ಡ್‌ನ ಒಟ್ಟು 1763.78 ಎಕರೆ ಜಾಗೆಯ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದ್ದಾರೆ.   ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ವಿಡಿಯೊ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕ್ಯಾಂಟೋನ್ಮೆಂಟ್‌ ಪ್ರದೇಶಗಳನ್ನು …

Read More »

ಸೌಹಾರ್ದದ ಮೊರಬದ ಮೊಹರಂ

ರಾಯಬಾಗ: ಜಾತಿಯ ಹಂಗಿಲ್ಲದೇ ಮನುಕುಲ ಒಂದೇ ಎಂಬ ಸಂದೇಶ ಸಾರಿ, ಸರ್ವಧರ್ಮಗಳ ಭಾವೈಕ್ಯದ ಕೊಂಡಿಯಾಗಿರುವ ಮೊಹರಂ ಹಬ್ಬ ಆಚರಣೆ ಆಧುನಿಕ ಯುಗದಲ್ಲೂ ಸ್ನೇಹ, ಭ್ರಾತೃತ್ವದ ಸಂಕೇತವಾಗಿ ನಡೆದುಕೊಂಡು ಬಂದಿದೆ. ಮೊರಬದಲ್ಲಿ ಮೊಹರಂ ಸರ್ವ ಧರ್ಮೀಯರು ಆಚರಿಸುವ ವೈಶಿಷ್ಟ್ಯಪೂರ್ಣ ಹಬ್ಬವಾಗಿದೆ.   ಇದಕ್ಕೆ ಅಲಾಯಿ ಹಬ್ಬ ಅಂತಲೂ ಹೆಸರು. ಮೊರಬ ಗ್ರಾಮದಲ್ಲಿ ಈ ಹಬ್ಬವನ್ನು ಉತ್ಸಾಹದಿಂದ ಆಚರಿಸುತ್ತಾರೆ. ಈ ಹಬ್ಬದಲ್ಲಿ ಚಿಣ್ಣರನ್ನು ನೋಡುವುದೇ ಒಂದು ಮಜವಾಗಿರುತ್ತದೆ. ಐದು ದಿನಗಳ ಕಾಲ ಕೂರಿಸಲಾಗುವ …

Read More »

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ’

ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ …

Read More »

ಘಟಪ್ರಭಾ | ಮೊಹರಂ: ಶಾಂತಿಯುತ ಆಚರಣೆಗೆ ಸಲಹೆ

ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …

Read More »

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು. *ಚಿಕ್ಕೋಡಿ ಜಿಲ್ಲೆ ರಚನೆ:* “ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು. *ಮಾಜಿ ಸಚಿವ ನಾಗೇಂದ್ರರ ಬಂಧನ:* “ಮುಂದಿನ ಕಾನೂನು ಪ್ರಕ್ರಿಯೆ …

Read More »

ಅಪಹರಣ: ಸಮಯಪ್ರಜ್ಞೆ ಮೆರೆದ ಬಾಲಕ

ಖಾನಾಪುರ: ಪಟ್ಟಣದಲ್ಲಿ ಶಾಲೆಗೆ ಹೋಗುವಾಗ ಬುಧವಾರ ಅಪಹರಣವಾಗಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದು ಸೇರಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಪಟ್ಟಣದ ಅಸೋಗಾ ರಸ್ತೆಯ ರೈಲು ನಿಲ್ದಾಣದ ಪೂರ್ವ ದಿಕ್ಕಿನ ಬಡಾವಣೆಯಲ್ಲಿ ವಾಸವಿದ್ದ ಆದಿತ್ಯ ಮಿಲಿಂದ ಶಿಂಧೆ (13) ಶಾಲೆಗೆ ಹೋಗಲು ರೈಲು ನಿಲ್ದಾಣದ ಬಳಿ ಬಂದಾಗ ಆತನ ಮೂಗಿಗೆ ಅಪರಿಚಿತರು ಹಿಂದಿನಿಂದ ಪ್ರಜ್ಞೆ ತಪ್ಪಿಸುವ ಔಷಧವಿರುವ ಕರವಸ್ತ್ರವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಬಾಲಕನನ್ನು …

Read More »

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಠಾಚಾರ ಸಹಿಸಲ್ಲ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು. ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ …

Read More »