ಬೆಳಗಾವಿ: ಬೆಳಗಾವಿ, ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ನಗರಗಳ ಸಾಲಿನಲ್ಲಿ ಅಗ್ರಸಾಲಿನಲ್ಲಿದೆ. ಕುಂದಾನಗರಿಯಲ್ಲಿ ಬದುಕು ಕಟ್ಟಿಕೊಳ್ಳುವವರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಅಧಿಕವಾಗಿದೆ. ಆದರೆ, ಕಳೆದ 18 ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು, ಬೆಳಗಾವಿ ಮಹಾನಗರದಲ್ಲಿ ಸ್ವಂತ ಸೂರಿನ ಕನಸು ಹೊತ್ತ ಮಧ್ಯಮ ವರ್ಗದವರ ಕನಸು ಕನಸಾಗಿಯೇ ಉಳಿದಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ …
Read More »ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…
ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …
Read More »ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.
ಹೊಸಪೇಟೆ (ಜೂ.18): ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಸಿಎಂ, ಹೈಕಮಾಂಡ್ ನವರು ನಿರ್ಣಯ …
Read More »ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು. 1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ …
Read More »ನದ ಶೆಡ್ಗೆ ಮಂಜೂರಾಗದ ಹಣ: ಪಂಚಾಯತ್ ಕಚೇರಿಯೊಳಗೆ ಎಮ್ಮೆ ಕಟ್ಟಿದ ರೈತ
ಚಿಕ್ಕೋಡಿ: ದನದಕೊಟ್ಟಿಗೆ ನಿರ್ಮಾಣದ ಹಣ ಮಂಜೂರಾಗದ ಹಿನ್ನೆಲೆ ಬೇಸತ್ತ ರೈತರೊಬ್ಬರು ಗ್ರಾಮ ಪಂಚಾಯತ್ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ಒಳಗೆ ಸತೀಶ ಕೋಳಿ ಎಂಬ ರೈತ ಎಮ್ಮೆ ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ‘ಕಳೆದ ವರ್ಷ ಗ್ರಾಮ ಪಂಚಾಯತ್ ವತಿಯಿಂದ ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಆದರೆ, ನಿರ್ಮಾಣ ಮಾಡಿ ವರ್ಷ ಕಳೆದರೂ …
Read More »ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲ
ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ವಿಷಪೂರಿತ ಆಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಖಾನಾಪುರದಲ್ಲಿರುವ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ 9 ತಿಂಗಳ ಬುನಾದಿ ತರಬೇತಿ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರಶಿಕ್ಷಣಾರ್ಥಿಗಳ ಪೈಕಿ 22 ಪ್ರಶಿಕ್ಷಣಾರ್ಥಿಗಳು ವಿಷಪೂರಿತ ಆಹಾರ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ವಾಂತಿ ಬೇಧಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ …
Read More »*ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,
ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ …
Read More »ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ…
ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ… ಬೆಳಗಾವಿಯ ಸಮರ್ಥ ನಗರದ ಸಾರ್ವಜನಿಕ ಗಣೇಶೋತ್ಸವ ಶ್ರೀ ಏಕದಂತ ಯುವಕ ಮಂಡಳದ ವತಿಯಿಂದ ಸಂಕಷ್ಟಿಯಂದು ಭವ್ಯ ಆರತಿಯೊಂದಿಗೆ ಪಾದ್ಯ ಮತ್ತು ಆಸನ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಗರಿಕ ರಜತ್ ಪಾಟೀಲ್, ಅವರು ಇದು ತಮ್ಮ ಗಣೇಶೋತ್ಸವ ಮಂಡಳದ 5 ನೇ ವರ್ಷವಾಗಿದ್ದು, ಈ ಬಾರಿಯೂ ಗಣೇಶೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಬೇಕು. ಅಲ್ಲದೆ, ಮಂಡಳದ ಅಧ್ಯಕ್ಷರು, ಕಡಿಮೆ …
Read More »ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ: ಕಠಿಣವಾದ ಪರಿಶ್ರಮ,ಶ್ರಧ್ದೆಯಿಂದ ಕಾಯಕದಲ್ಲಿ ತೋಡಗಿದರೆ ಯಶಸ್ಸು ನಿಶ್ಚಿತ,ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೇವೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ …
Read More »ಬೆಳಗಾವಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ವಿವಿಧ 5 ಪ್ರಕರಣಗಳಲ್ಲಿ ಒಟ್ಟು 15 ಜನರ ಬಂಧನ
ಬೆಳಗಾವಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ವಿವಿಧ 5 ಪ್ರಕರಣಗಳಲ್ಲಿ ಒಟ್ಟು 15 ಜನರ ಬಂಧನಬೆಳಗಾವಿಯ ವಿವಿಧ 5 ಪ್ರಕರಣಗಳಲ್ಲಿ ಒಟ್ಟು 15 ಜನರನ್ನು ಬಂಧಿಸಿದ ಪೊಲೀಸರು ಒಟ್ಟು 34,250 ರೂಪಾಯಿ ಮೌಲ್ಯದ 694 ಗ್ರಾಂ ಗಾಂಜಾ, ಒಂದು ಕಾರ್, ಒಂದು ಬೈಕ್ ಮತ್ತು 5 ಮೊಬೈಲ್’ಗಳನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ನಗರದ ಶೌರ್ಯ ಸರ್ಕಲ್ ಬಳಿ ಗಾಂಜಾ …
Read More »