Breaking News

ಬೆಳಗಾವಿ

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕಡಬಿ ಗ್ರಾಮದಲ್ಲಿ 8 ನೇ ವರ್ಷದ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೊಟುರ ಶಿವಾಪುರ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ …

Read More »

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

ಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು ಮಾಡಿಕೊಂಡಿದ್ದೇನೆ, ನನ್ನ ದೇಹ ನೋಡಿ ಅಂತ ಎದೆ ಮೇಲಿನ ಕೂದಲು ಬೋಳಿಸಿಕೊಂಡು ಶರ್ಟ್ ಬಿಚ್ಚಿ ಕಾಲೇಜು ಯವತಿಯರ ಮುಂದೆ ನಿಂತುಕೊಳ್ಳೋದು ಖಂಡಿತ ತಪ್ಪು. ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದ ಬಾಳೇಶ್ ಹೆಸರಿನ ಯುವಕನಿಗೆ ಇಂಥ ತಪ್ಪು ಅರ್ಥಮಾಡಿಸಲು ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಇವನು ನನ್ನ ದೇಹ ಸಲ್ಮಾನ್ ಖಾನ್ ನಂತಿದೆ ಅಂತ …

Read More »

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಬೆಳಗಾವಿ: ಆಸ್ತಿ ಕಬಳಿಸಲು ಮಾಟಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಷ್ಠಿತ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಅವರು ತಮ್ಮ ಕುಟುಂಬದ ಸದಸ್ಯರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಉದ್ಯಮಿ ಶಶಿಕಾಂತ ಸಿದ್ನಾಳ, ಪತ್ನಿ ವಾಣಿ ಸಿದ್ನಾಳ ಹಾಗೂ ಪುತ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ ವಿರುದ್ಧ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಜಿ ಸಂಸದ ಎಸ್.ಬಿ. ಸಿದ್ನಾಳ ಅವರ ಪುತ್ರ …

Read More »

ಗೋಕಾಕ | ನಕಲಿ ನೋಟು ಪತ್ತೆ: ಐವರ ಬಂಧನ

ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ. ಈಚೆಗೆ ಬೆಳಗಿನ ಜಾವ ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.   ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ …

Read More »

ಬೆಳಗಾವಿ ಮಹಾನಗರ ಪಾಲಿಕೆ: ನಾಲ್ಕು ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳ 28 ಸದಸ್ಯ ಸ್ಥಾನಗಳಿಗೆ ಮಂಗಳವಾರ ಅವಿರೋಧ ಆಯ್ಕೆ ನಡೆಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ತಲಾ ಏಳು ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಮೂರು ಸಮಿತಿಗಳಿಗೆ ತಲಾ …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »

ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ. ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ. ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು …

Read More »

ಡೆಂಗ್ಯೂ ಜ್ವರಕ್ಕೆ ಓರ್ವ ಯುವಕ ಬಲಿ

ಬೆಳಗಾವಿ : ಬೆಳಗಾವಿಯ ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಶನಿವಾರ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾನೆ. ಪ್ರಸಾದ ಕಳೆದ ಕೆಲದಿನಗಳಿಂದ ಡೆಂಗ್ಯು ರೋಗಕ್ಕೆ ತುತ್ತಾಗಿದ್ದರು. ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರು ಅಜ್ಜಿ, ತಂದೆ, ಪತ್ನಿ, ಪುತ್ರನನ್ನು ಅಗಲಿದ್ದಾರೆ.

Read More »

ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ಬೆಳೆಸಿ:ಸವದಿ

ಅಥಣಿ: ‘ಗಿಡಗಳನ್ನು ಹಚ್ಚುವುದು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಬಾರದು. ಗಿಡಗಳನ್ನು ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಿಡ ಬೆಳೆಸುವುದರಿಂದ ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಸಹಕಾರಿಯಾಗುತ್ತದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಇಲ್ಲಿನ ಆರ್.ಎಚ್.ಕುಲಕರ್ಣಿ ಸಭಾಂಗಣದಲ್ಲಿ ಅಥಣಿ ಮತ್ತು ಕಾಗವಾಡ ತಾಲ್ಲೂಕು ಸಹಕಾರಿ ಸಂಘಗಳ ಹಾಗೂ ವಿವಿಧ ಉದ್ದೇಶಗಳ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಬ್ಯಾಂಕ್‌ಗಳ ಒಕ್ಕೂಟದ ಆಶ್ರಯದಲ್ಲಿ ಗ್ರಾಮ ಗ್ರಾಮಗಳಲ್ಲಿ ಸಹಕಾರ ಸಂಘಗಳ ಮುಖಾಂತರ 5,000 ಸಸಿಗಳ ವಿತರಣೆ …

Read More »

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಬೆಳಗಾವಿ: ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಕನ್ನಡ ಮಾಧ್ಯಮ ಶಾಲೆಗಳಿಗೆ ಗಡಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತ್ತ ತಾಲ್ಲೂಕಿನ ಬೋರಗಿ, ಕರಜಗಿ, ಭೇವರ್ಗಿ, ಬಾಲಗಾಂವ, ಅಂಕಲಗಿ, ಸಂಖ, ರಾವಳಗುಂಡವಾಡಿ, ಮೇಂಡಿಗೇರಿ ಗ್ರಾಮಗಳಲ್ಲಿನ ವಿವಿಧ ಕನ್ನಡ ಮಾಧ್ಯಮ ಶಾಲೆಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದರು. ಈ ಪ್ರದೇಶಗಳಲ್ಲಿನ ಕೆಲವು ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಮರಾಠಿ ಶಿಕ್ಷಕರನ್ನು ಕನ್ನಡ …

Read More »