Breaking News

ಬೆಳಗಾವಿ

ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’

ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್‌ಪಿ ಸಾಮರ್ಥ್ಯದ ಮೂರು ಮೋಟಾರ್‌ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.   ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್‌ಗಳ …

Read More »

ನೀರು ಕೊಟ್ಟು, ರಸ್ತೆ ಕಿತ್ತುಕೊಂಡರು

ಸವದತ್ತಿ: ನಿರಂತರ ನೀರು (24X7) ಪೂರೈಕೆಗಾಗಿ ಪಟ್ಟಣದ ಬಹುಪಾಲು ರಸ್ತೆಗಳನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಮೇಲೆ ಮತ್ತೆ ರಸ್ತೆ ದುರಸ್ತಿ ಮಾಡಿಲ್ಲ. ಇದೇ ಪರಿಸ್ಥಿತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲೂ ತಲೆದೋರಿದೆ. ಕೊರಕಲು ರಸ್ತೆಗಳಿಂದ ಜನ ಬೇಸತ್ತುಹೋಗಿದ್ದಾರೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೊಬ್ಬರ ನೆಪ ಹೇಳಿಕೊಂಡು ದಿನ ಕಳೆಯುತ್ತಿದ್ದಾರೆ. ಸುಪ್ರಸಿದ್ಧ ಪ್ರೇಕ್ಷಣೀಯ ಸ್ಥಾನ ಯಲ್ಲಮ್ಮನ ಗುಡ್ಡವನ್ನು ಸುತ್ತವರಿದು ಸವದತ್ತಿ ಪಟ್ಟಣ ಹಾಗೂ ಗ್ರಾಮಗಳಿವೆ. ವಿಶಾಲವಾಗಿ ಹರಿದ ಮಲಪ್ರಭೆಯಿಂದ ಸಾಕಷ್ಟು ನೀರಿನ …

Read More »

ಗೋಡೆಗಳಲ್ಲಿ ಅರಳಿದ ಕಲಾಕೃತಿ

ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ ಗೋಡೆಗಳಲ್ಲಿ ರಾಣಿ ಚನ್ನಮ್ಮ ಹಾಗೂ ಇತಿಹಾಸ ಬಿಂಬಿಸುವ ಕೆಲವು ಸನ್ನಿವೇಶ, ಚಿತ್ರಗಳು ಜೀವ ಪಡೆದಿದ್ದು, ಕಿತ್ತೂರು ಕಳೆಗಟ್ಟಿದೆ.   ಇಲ್ಲಿನ ಕೋಟೆ ಆವರಣದಲ್ಲಿ ಅ. 23ರಿಂದ 25 ರ ವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಕಲಾಕೃತಿಗಳು ಜೀವತಳೆದಿವೆ. ಅಶ್ವಾರೂಢ ಚನ್ನಮ್ಮನ ಪ್ರತಿಮೆಗೆ …

Read More »

ಎಚ್‌ಐವಿ ತಡೆಗಟ್ಟುವಿಕೆ ಜಾಗೃತಿಗಾಗಿ ಮ್ಯಾರಥಾನ್

ಬೆಳಗಾವಿ: ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದಲ್ಲಿ ಶನಿವಾರ ‘ರೆಡ್ ರನ್’ ರಾಜ್ಯಮಟ್ಟದ 5 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮನ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಉಮಾ ಬುಗ್ಗಿ ಸ್ಪರ್ಧೆಗೆ ಚಾಲನೆ ನೀಡಿದರು. …

Read More »

ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮರುಪರಿಶೀಲಿಸಬೇಕು: ಮಹಾಂತೇಶ ಕವಟಗಿಮಠ

ಬೆಳಗಾವಿ: ‘ಎಚ್‌.ಕಾಂತರಾಜ ಆಯೋಗ ಕೈಗೊಂಡ 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಅದನ್ನು ಮರುಪರಿಶೀಲಿಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‌ಜಾತಿ ಗಣತಿ ಮಾಡಬೇಕಾದರೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಆದರೆ, ಕಾಂತರಾಜ ಆಯೋಗವು ಮನೆ-ಮನೆಗೆ ತೆರಳದೆ, ಸಾಮೂಹಿಕವಾಗಿ ಕೆಲವೇ ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ಕೈಗೊಂಡಿದೆ. ಈ ವರದಿ …

Read More »

ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …

Read More »

ಅಕ್ಟೋಬರ್‌ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ

ಬೆಳಗಾವಿ: ಜಿಲ್ಲೆಯಲ್ಲಿ ಅಕ್ಟೋಬರ್‌ 21ರಿಂದ ನವೆಂಬರ್ 20ರ ವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ರಾಜೀವ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ನಡೆದ ಲಸಿಕಾಕರಣದ ಜಿಲ್ಲಾ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.   ‘ಜಿಲ್ಲೆಯಾದ್ಯಂತ ಲಸಿಕೆದಾರರು ಮಾಲೀಕರ ಮನೆ- ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆಯನ್ನು ಉಚಿತವಾಗಿ ಹಾಕಲಿದ್ದಾರೆ. 20ನೇ …

Read More »

ನೇತ್ರ ತಪಾಸಣಾ ಶಿಬಿರ

ರಾಮದುರ್ಗ: ರಾಮದುರ್ಗದ ಅಂಧತ್ವ ನಿವಾರಣ ಸಂಸ್ಥೆ, ಗುರು ಮಹಿಪತಿರಾವ್‌ ನೇತ್ರ ಸೇವಾ ಸಂಸ್ಥೆ, ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ರಾಮದುರ್ಗದ ಸಾರ್ವಜನಿಕ ಆಸ್ಪತ್ರೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಅ.19 ರಂದು ಬೆಳಿಗ್ಗೆ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರವನ್ನು ಇಲ್ಲಿನ ಪ್ಯಾರಿಬಾಯಿ ಪಾಲರೇಶಾ ಕಣ್ಣಿನ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.   ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರ ತನಕ ತಪಾಸಣೆ ನಡೆಸಿ, ಅಗತ್ಯ …

Read More »

ಮಹಾರಾಷ್ಟ್ರ ಚುನಾವಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದ ₹2.73 ಕೋಟಿ ಹಣ ವಶ

ಬೆಳಗಾವಿ: ದಾಖಲೆಗಳಿಲ್ಲದೇ ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ₹2.73 ಕೋಟಿ ಹಣವನ್ನು ಬೆಳಗಾವಿ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್‌ ವಾಹನದಲ್ಲಿ ಈ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್‌ ಆಯುಕ್ತಾಲಯಕ್ಕೆ ದೊರೆತಿತ್ತು. ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಮಾರ್ಗದರ್ಶನದಲ್ಲಿ, ಸಿಸಿಬಿ ಇನ್‌ಸ್ಪೆಕ್ಟರ್‌ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »