ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …
Read More »ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು. *ಚಿಕ್ಕೋಡಿ ಜಿಲ್ಲೆ ರಚನೆ:* “ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು. *ಮಾಜಿ ಸಚಿವ ನಾಗೇಂದ್ರರ ಬಂಧನ:* “ಮುಂದಿನ ಕಾನೂನು ಪ್ರಕ್ರಿಯೆ …
Read More »ಅಪಹರಣ: ಸಮಯಪ್ರಜ್ಞೆ ಮೆರೆದ ಬಾಲಕ
ಖಾನಾಪುರ: ಪಟ್ಟಣದಲ್ಲಿ ಶಾಲೆಗೆ ಹೋಗುವಾಗ ಬುಧವಾರ ಅಪಹರಣವಾಗಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದು ಸೇರಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಪಟ್ಟಣದ ಅಸೋಗಾ ರಸ್ತೆಯ ರೈಲು ನಿಲ್ದಾಣದ ಪೂರ್ವ ದಿಕ್ಕಿನ ಬಡಾವಣೆಯಲ್ಲಿ ವಾಸವಿದ್ದ ಆದಿತ್ಯ ಮಿಲಿಂದ ಶಿಂಧೆ (13) ಶಾಲೆಗೆ ಹೋಗಲು ರೈಲು ನಿಲ್ದಾಣದ ಬಳಿ ಬಂದಾಗ ಆತನ ಮೂಗಿಗೆ ಅಪರಿಚಿತರು ಹಿಂದಿನಿಂದ ಪ್ರಜ್ಞೆ ತಪ್ಪಿಸುವ ಔಷಧವಿರುವ ಕರವಸ್ತ್ರವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಬಾಲಕನನ್ನು …
Read More »ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಠಾಚಾರ ಸಹಿಸಲ್ಲ: ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು. ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ …
Read More »ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಒಂದು ಕಳಂಕ;ಸತೀಶ್ ಜಾರಕಿಹೊಳಿ
ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …
Read More »ಅಥಣಿ ಬಿಜೆಪಿ ಲೀಡ್ ಪಡೆದಿದ್ದು ಖುಷಿ ಸಂಗತಿ ; ಸವದಿ ವಿರುದ್ಧ ಸಾಹುಕಾರ್ ಪರೋಕ್ಷ ವಾಗ್ದಾಳಿ
ಅಥಣಿ : ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷಕ್ಕೆ ಅಥಣಿ ಜನ ಲೀಡ್ ಕೊಟ್ಟಿದ್ದು ಖುಷಿ ವಿಚಾರ. ನಮ್ಮವರು ಒಳ್ಳೆಯ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಲೀಡ್ ಕಡಿಮೆ ಮಾಡಿ ಬಿಜೆಪಿಗೆ ಹೆಚ್ಚಿಸಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕಾಲೆಳೆದರು. ಬಿಜೆಪಿ ಕಾರ್ಯಕರ್ತರ ಭೇಟಿ ಹಿನ್ನಲೆಯಲ್ಲಿ ಅಥಣಿ ಪಟ್ಟಣಕ್ಕೆ ಆಗಮಿಸಿದ ರಮೇಶ ಜಾರಕಿಹೊಳಿ ಮಾತನಾಡಿ. ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಲೀಡ್ ಕಳೆದುಕೊಂಡಿಟ್ಟು …
Read More »ವಧು-ವರರ ಸಮಾವೇಶ 20ರಂದು
ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ. ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ. ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. …
Read More »ಗ್ಯಾರಂಟಿ’ ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ
ಕಾಗವಾಡ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು’ ಎಂದು ಕಾಗವಾಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜು ಕಾಗೆ ಹೇಳಿದರು. ಕಾಗವಾಡ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ‘ಐದು ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆವರೆಗೆ ಮಾತ್ರ …
Read More »ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ.
ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ. ಇಲ್ಲಿನ ಜನರು ಪಕ್ಕದ ಕಲಾದಗಿ, ಕಾಡರಕೊಪ್ಪ, ಲೋಕಾಪುರಕ್ಕೆ ತೆರಳಲು ನಿತ್ಯ ಯಾತನೆ ಅನುಭವಿಸುವಂತಾಗಿದೆ. ನಂದಿಹಾಳದಿಂದ ಅಕ್ಕಪಕ್ಕದ ಗ್ರಾಮಗಳು ಮತ್ತು ಹೊಲಗಳಿಗೆ ತೆರಳಲು ಇರುವುದು ಇದೊಂದೇ ರಸ್ತೆ. ಆದರೆ, ಜಿಟಿಜಿಟಿ ಮಳೆಯಾದರೂ ಅದು ಕೆಸರುಮಯವಾಗಿ ಮಾರ್ಪಡುತ್ತದೆ. ಅಪಾರ ಪ್ರಮಾಣದಲ್ಲಿ ಮಳೆನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತದೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಹೈರಾಣಾಗಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡದ …
Read More »ಡೆಂಗಿ: ಸಮಗ್ರ ಮಾಹಿತಿಗೆ ಸಂಸದ ಜಗದೀಶ ಶೆಟ್ಟರ್ ಸೂಚನೆ
ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. …
Read More »
Laxmi News 24×7