Breaking News

ಬೆಳಗಾವಿ

ಡೆಂಗಿ: ಸಮಗ್ರ ಮಾಹಿತಿಗೆ ಸಂಸದ ಜಗದೀಶ ಶೆಟ್ಟರ್ ಸೂಚನೆ

ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಕ್ತದಾನ.

ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಕ್ತದಾನ. ಯರಗಟ್ಟಿ : ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದ ಕೊರತೆ ಉಂಟಾಗುವ ಸಾಧ್ಯತೆ ಇರುತ್ತದೆ, ಆದಕಾರಣ ಯುವ ನಾಯಕ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ನೂರಾರು ಅಭಿಮಾನಿಗಳು ರಕ್ತದಾನವನ್ನು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ

Read More »

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ದೂಧಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಲಭ್ಯದ ಅಗಿರುವ ಮಾಹಿತಿಯ ಪ್ರಕಾರ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣ 62 ಸಾವಿರ ಕ್ಯೂಸೆಕ್ಸ್ ದಾಟಿದೆ. ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 21 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. …

Read More »

ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿ‌ಕುಣಿತದ ಸದ್ದು

ಬೈಲಹೊಂಗಲ: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ವಕ್ಕುಂದದ ಸುತ್ತಲಿನ …

Read More »

ಕಾರ್‌ ಅಡ್ಡಗಟ್ಟಿ ₹10 ಲಕ್ಷ ಕಳವು

 ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳ ಬಳಿ ಕಾರ್‌ ಅಡ್ಡಗಟ್ಟಿ ₹10 ಲಕ್ಷ ಕಸಿದ ಕಳ್ಳರು ಪರಾರಿಯಾಗಿದ್ದಾರೆ. ಬೆಳಗಾವಿ ಶಾಸ್ತ್ರೀನಗರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಮಿತ್ ಅಶೋಕ ಪೇರಿವಾಲ ಅವರು ಶಿವಮೊಗ್ಗದ ಮಿತ್ರರಿಗೆ ₹10 ಲಕ್ಷ ಕೊಡಲು, ತಮ್ಮ ಅಂಗಡಿಯ ಕೆಲಸಗಾರ ಚಂದನಾಥ ರಾಮೇಶ್ವರ ಸಿದ್ ಹಾಗೂ ಸುನೀಲ ರಾಜಕುಮಾರ ಪ್ರಜಾಪತ್ ಅವರನ್ನು ಕಳುಹಿಸಿದ್ದರು. ಅವರು ಸಾಗುತ್ತಿದ್ದ ಕಾರ್‌ ಅಡ್ಡಗಟ್ಟಿದ ಕಳ್ಳರು ಹಣ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ …

Read More »

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ :

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …

Read More »

ಚಿಕ್ಕೋಡಿ | ನೀರಿಲ್ಲದೇ ಸಸ್ಯೋತ್ಪಾದನೆ ಕುಸಿತ; ಅರಣ್ಯೀಕರಣಕ್ಕೆ ಅಡೆತಡೆ

ಚಿಕ್ಕೋಡಿ: ತಾಲ್ಲೂಕಿನ ಜೈನಾಪುರ ಹಾಗೂ ಚಿಂಚಣಿ ಗ್ರಾಮಗಳಲ್ಲಿ ಅರಣ್ಯ ಇಲಾಖೆಯು ನರ್ಸರಿಗಳ ಮೂಲಕ ಪ್ರತಿ ವರ್ಷ ಸಾವಿರಾರು ಸಸಿಗಳ ಉತ್ಪಾದನೆ ಮಾಡುತ್ತಲಿದೆ. 2023-24ರ ಸಾಲಿನಲ್ಲಿ ಸರ್ಮಪಕವಾಗಿ ಮಳೆ ಇಲ್ಲದೇ ಬೇಡಿಕೆಗೆ ತಕ್ಕಷ್ಟು ಸಸಿಗಳ ಉತ್ಪಾದನೆ ಮಾಡಲು ಸಾಧ್ಯವಾಗಿಲ್ಲ. ಇದೀಗ ಸಮರ್ಪಕವಾಗಿ ಮಳೆಯಾಗಿದ್ದರೂ ಬೇಡಿಕೆಗೆ ತಕ್ಕಷ್ಟು ಸಸಿಗಳ ಲಭ್ಯತೆ ಇಲ್ಲದೇ ಅರಣ್ಯೀಕರಣ ಮಾಡಲು ಹಿನ್ನೆಡೆಯಾಗಿದೆ. 3 ಎಕರೆ ಪ್ರದೇಶ ವ್ಯಾಪ್ತಿಯಲ್ಲಿಯ ಜೈನಾಪುರ ನರ್ಸರಿಯಲ್ಲಿ 2023ರಲ್ಲಿ 45 ಸಾವಿರ ಸಸಿಗಳ ಉತ್ಪಾದನೆ ಮಾಡಲಾಗಿತ್ತು, ಆದರೆ …

Read More »

ಶಿವಸಾಗರ ಸಕ್ಕರೆ ಕಾರ್ಖಾನೆ ಮಾರಾಟ: ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿರುವುದನ್ನು ವಿರೋಧಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಗುರುವಾರ ಬೆಳಿಗ್ಗೆಯಿಂದ ಸಂಜೆತನಕ ಕಾರ್ಖಾನೆ ಎದುರು ಪ್ರತಿಭಟನೆ ಮಾಡಿದರು. ಗುರುವಾರ ನೂರಾರು ಷೇರುದಾರರು ಹಾಗೂ ರೈತರು ಕಾರ್ಖಾನೆಯ ಗೇಟ್ ಎದುರು ಪ್ರತಿಭಟನೆ ಆರಂಭಿಸಿದರು. ಕಾರ್ಖಾನೆಯ ಪ್ರಾರಂಭಕ್ಕೆ ಬೆಳಗಾವಿ, ಬಾಗಲಕೋಟೆ, ಮತ್ತು ಧಾರವಾಡ ಜಿಲ್ಲೆಯ ರೈತರು ಷೇರು ಖರೀದಿ ಮಾಡಿದ್ದರಿಂದ ಆರಂಭವಾಗಿದೆ. …

Read More »