Breaking News

ಬೆಳಗಾವಿ

ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ

ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

Read More »

ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಲಕ್ಷ್ಮಣ ಸವದಿ ಹೇಳಿಕೆ

ಪಕ್ಷ ನನಗೆ ಮೋಸ ಮಾಡುವುದಿಲ್ಲ. ಶೇ 99ರಷ್ಟು ನನಗೆ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸವಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಪಂಚಮಸಾಲಿ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಕ್ಷ್ಮಣ ಸವದಿಚಿಕ್ಕೋಡಿ : ಅಥಣಿಯಲ್ಲಿ ರಾಜಕೀಯ ವಾತಾವರಣ ಬದಲಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಎಂದು ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ …

Read More »

ಬಿಜೆಪಿ ಟಿಕೆಟ್ ವಿಚಾರ ಕತ್ತಿ ಕುಟುಂಬದವರೇ ತೀರ್ಮಾನಿಸಲಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಮೊದಲ ಪಟ್ಟಿ ಪ್ರಕಟಿಸಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಆದರೆ ಬಿಜೆಪಿ ಮಾತ್ರ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.   ಇದರ ಮಧ್ಯೆ ಸಚಿವರಾಗಿದ್ದ ಉಮೇಶ್ ಕತ್ತಿ ಪ್ರತಿನಿಧಿಸುತ್ತಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವನ್ನು ಕತ್ತಿ ಕುಟುಂಬದವರೇ ತೀರ್ಮಾನಿಸಲಿ ಎಂಬ ಅಭಿಪ್ರಾಯವನ್ನು …

Read More »

ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …

Read More »

ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ

ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …

Read More »

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …

Read More »

ಬೆಳಗಾವಿ ಉತ್ತರದಲ್ಲಿ ಮುಗಳಿ ಹಾಳ ಅವರ್ ಭರ್ಜರಿ ಪ್ರಚಾರ ಇಬ್ಬರ ಜಗಳದಲ್ಲಿ 3ನೆ ಯವರಿಗೆ ಲಾಭ ಆಗುವ ಸಾಧ್ಯತೆ?

ಬೆಳಗಾವಿ: ವಿಧಾನ ಸಭಾ ಚುನಾವಣೆ ಬರುತ್ತಿದ್ದಂತೆ ಎಲ್ಲಾಕಡೆ ಪ್ರಚಾರ ಜೋರಾಗಿಯೇ ಇದೆ ಒಂದು ಕಡೆ ಬಿಜೆಪಿ ಯಲ್ಲಿ ಒಳ ಜಗಳ ಇದ್ದರೆ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಇಲ್ಲಿ ಜೆಡಿಎಸ್ ನಿಂದ ಮುಗಳಿಹಾಳ ಅವರು ಸ್ಪರ್ಧೆಗೆ ರೆಡಿ ಆಗಿದ್ದಾರೆ ಇವಾಗಿನಿಂದಲೆ ಕ್ಷೇತ್ರಗಳಲ್ಲಿ ತಮ್ಮ ಪ್ರಚಾರ ವನ್ನಾ ಪ್ರಾರಂಭ ಮಾಡಿದ್ದಾರೆ ಬೆಳಗಾವಿ ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ರೈತ ಸಂಘದ ಚುನಪ್ಪ ಪೂಜಾರಿ ಅವರು ಕೂಡ ಸಾಥ್ ನೀಡಿದ್ದಾರೆ ವಿಧಾನ ಸಭೆ …

Read More »

ಬುಧವಾರ ಮತ್ತಷ್ಟು ನಗದು ಹಣ ವಶ

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. …

Read More »

ದಾಖಲೆ‌ ಇಲ್ಲದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಬೆಳಗಾವಿ: ದಾಖಲೆ‌ ಇಲ್ಲದೇ ಸಾಗಿಸುತ್ತಿದ್ದ 40 ಲಕ್ಷ ರೂ ಮೌಲ್ಯದ ಚೆನ್ನಾಭರಣವನ್ನು ಖಾನಾಪುರ ತಾಲೂಕಿನ ನಂದಗಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 21.25 ಲಕ್ಷ ರೂ.‌ಮೌಲ್ಯದ 395 ಗ್ರಾಂ‌ ಚಿನ್ಮಾಭರಣ ಹಾಗೂ 19 ಲಕ್ಷ ರೂ.‌ಮೌಲ್ಯದ 28 ಕೆ.ಜಿ. ಬೆಳ್ಳಿಯ ಆಭರಣ, ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೆಳಗಾವಿಯ ಹಲವು ಕಡೆಗಳಲ್ಲಿ …

Read More »

ಚುನಾವಣಾ ಆಯೋಗದ‌ ಮಾರ್ಗಸೂಚಿ ಪ್ರಕಾರ ಜಿಲ್ಲೆಯ 18ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ EVM ರವಾನೆ :ನಿತೇಶ್ ಪಾಟೀಲ

ಬೆಳಗಾವಿ : ಪ್ರಥಮ ರ್ಯಾಂಡಮೈಜೇಷನ್ ಬಳಿಕ ಕ್ಷೇತ್ರವಾರು ಹಂಚಿಕೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ಚುನಾವಣಾ ಆಯೋಗದ‌ ಮಾರ್ಗಸೂಚಿ ಪ್ರಕಾರ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ ರವಾನೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿ ಇರುವ ಭಾರತ ಚುನಾವಣಾ ಆಯೋಗದ ಇವಿಎಂ ಉಗ್ರಾಣದಲ್ಲಿ ಇರುವ ಇವಿಎಂ ಗಳನ್ನು ರ್ಯಾಂಡಮೈಜೇಷನ್ ಪ್ರಕಾರ ಆಯಾ ಕ್ಷೇತ್ರಗಳಿಗೆ ರವಾನಿಸುವ ಪ್ರಕ್ರಿಯೆಯನ್ನು ಬುಧವಾರ (ಏ.5) ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. …

Read More »