Home / ಜಿಲ್ಲೆ / ಬೆಳಗಾವಿ (page 9)

ಬೆಳಗಾವಿ

ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನವಾಗಿದೆ ಎಂದು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಈರನಹಟ್ಟಿ ಗ್ರಾಮದ ಶ್ರೀ ಏಳುಮುಖ ದೇವಿ ದೇವಸ್ಥಾನ ಹಾಗೂ ಶ್ರೀ ಬಸವೇಶ್ವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ …

Read More »

ಬೈಲಹೊಂಗಲ: ಸಂಗೊಳ್ಳಿ ಉತ್ಸವಕ್ಕೆ ವೈಭವದ ತೆರೆ

ಸಂಗೊಳ್ಳಿ (ಬೈಲಹೊಂಗಲ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎರಡು ದಿನಗಳಕಾಲ ನಡೆದ ಸಂಗೊಳ್ಳಿ ರಾಯಣ್ಣ ಉತ್ಸವ-2024ಕ್ಕೆ ಗುರುವಾರ ವೈಭವದ ತೆರೆ ಬಿದ್ದಿತು. ಎರಡನೇ ದಿನ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕುಸ್ತಿ ಪಂದ್ಯಗಳನ್ನು ಕಂಡು ಜನ ರೋಮಾಂಚನಗೊಂಡರು.   ರಾಯಣ್ಣ ವೇದಿಕೆಯಲ್ಲಿ ಇಡೀ ದಿನ ನಡೆದ ಸಂಗೀತ, ಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳಿಗೆ ಮನಸೋಲದವರೇ ಇಲ್ಲ. ಬೆಳಿಗ್ಗೆ ಅಶೋಕ ಎಮ್ಮಿ ಅವರ ತಂಡ ಭಜನಾ ಪದಗಳನ್ನು ಪ್ರಸ್ತುತಪಡಿಸಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ಶ್ರೀ ನಿಂಗಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ:H.D.K.

ಬೆಳಗಾವಿ: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.   ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಚಿವರಾಗಿ ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಬೇಕು. ಇದು ಮುಗಿದು ಹೋಗಿರುವ ಸಂಗತಿ. ಮತ್ತೆ ಅದನ್ನು ಕೆಣಕುವುದು ಯಾಕೆ? ಬಹುಶಃ …

Read More »

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ!

ಬೆಳಗಾವಿ, ಜನವರಿ 2: ಕೊನೇ ಕ್ಷಣದಲ್ಲಿ ಮದುವೆಯೊಂದು (Marriage) ಮುರಿದುಬಿದ್ದು ವರ ಹಿಂಡಲಗಾ ಜೈಲುಪಾಲಾದ ವಿಚಿತ್ರ ವಿದ್ಯಮಾನವೊಂದು ಬೆಳಗಾವಿಯ (Belagavi) ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಅಷ್ಟಕ್ಕೂ ಮದುವೆ ಮುರಿದು ಬೀಳಲು, ವರ ಜೈಲುಪಾಲಾಗಲು ಕಾರಣವಾಗಿದ್ದು ಮತ್ತೇನೂ ಅಲ್ಲ; ವರದಕ್ಷಿಣೆ ಬೇಡಿಕೆ. ಪಟ್ಟು ಹಿಡಿದು ವರದಕ್ಷಿಣೆ ಬೇಡಿಕೆ ಇಟ್ಟಿದ್ದಕ್ಕೆ ಮದುವೆ ಮುರಿದುಬಿದ್ದ ವಿದ್ಯಮಾನ ಮೂರು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ಆಯೋಜನೆಯಾಗಿತ್ತು. ಈ ಮದುವೆಯ …

Read More »

ಚಿಕ್ಕೋಡಿ-ಮತ್ತೆ ಕೇಳುತ್ತಿದೆ ಅಖಂಡ ಭಾರತದ ಕೂಗು: ಈಶ್ವರಪ್ಪ

ಚಿಕ್ಕೋಡಿ: ದೇಶವನ್ನು ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಬಿಜೆಪಿ ಬಿಡಲ್ಲ. ಕಾಂಗ್ರೆಸ್‌ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು. ಜನೇವರಿ 22 ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.   ನಗರದಲ್ಲಿ ಶ್ರೀ ರಾಮಸೇನೆಯಿಂದ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಅಖಂಡ ಭಾರತ ನಿರ್ಮಾಣಕ್ಕೆ …

Read More »

ಬೆಳಗಾವಿ: ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್

ಬೆಳಗಾವಿ, ಜ.1: ತಾಳಿ ಕಟ್ಟುವ ಸಮಯದಲ್ಲಿ ಮದುವೆ ‌ಮುರಿದು ಬಿದ್ದ ಘಟನೆಬೆಳಗಾವಿ (Belagavi)ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ನಿವಾಸಿ ವರ ಸಚಿನ್ ಪಾಟೀಲ್ ಎಂಬವನೊಂದಿಗೆ ಯುವತಿಯೊಬ್ಬಳ ಮದುವೆ ನಿಶ್ಚಯವಾಗಿತ್ತು. ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪ ಕೂಡ ಬುಕ್ ಮಾಡಲಾಗಿತ್ತು. 2023ರ ಡಿಸೆಂಬರ್ 30 ರಂದು ನಡೆದ ಮದುವೆ ನಿಶ್ಚಿತಾರ್ಥ …

Read More »

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು. ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. …

Read More »

ದಲಿತ ಕಾಲೋನಿಗೆ ರಸ್ತೆ ಇಲ್ಲದೇ ರಾತ್ರಿಯಿಂದ ಧರಣಿ ಕುಳಿತ ಜನ

ಗದಗ, ಡಿಸೆಂಬರ್​ 28: ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ(road)ಇಲ್ಲದೇ ಜನರು ಪರದಾಡಿರುವಂತಹ ಘಟನೆ ನಡೆದಿದೆ. ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಕಾಲೋನಿ ಜನ ನಿನ್ನೆ ರಾತ್ರಿಯಿಂದ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Read More »