Breaking News

ಬೆಳಗಾವಿ

ಚುನಾವಣಾ ಅಕ್ರಮ ತಡೆಗೆ 24X7 ಹದ್ದಿನ ಕಣ್ಣು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ಕಣ್ಣಿಡಲು ಹಾಗೂ ಅಕ್ರಮ ಚಟುವಟಿಕೆ ತಡೆಯಲು ತಂಡಗಳು 24X7 ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ ಪಾಳಿಯಲ್ಲಿ ಕೆಲಸ ಮಾಡು ಮೂರು ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಮತ್ತು ವಿವಿಧ ತಂಡಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಯಾವುದೇ ರೀತಿಯ ಅಕ್ರಮ ಅಥವಾ …

Read More »

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »

ಯಲ್ಲಮ್ಮನಗುಡ್ಡದಲ್ಲಿಎರಡೇ ತಿಂಗಳಲ್ಲಿ ₹1.81 ಕೋಟಿ ಕಾಣಿಕೆ ಸಂಗ್ರಹ

ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್‌ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …

Read More »

ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು

ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು ರಾಯಬಾಗ ತಾಲೂಕೀನ ಬಸ್ತವಾಡ ಗ್ರಾಮಸಲ್ಲಿ ಶ್ರೀ ಅರಣ್ಯ ಸಿದ್ದೇಶ್ವರ ಜಾತ್ರೆಯು ವಿಜೃಂಭಣೆಯಿಂದ ನಡೆಯಿತು ಈ ಜಾತ್ರೆಯ ಅಂಗವಾಗಿ ಬೇರೆ ಬೇರೆ ಗ್ರಾಮಗಳಿಂದ ಪಲ್ಲಕ್ಕಿ ಗಳು ದೇವಸ್ಥಾನದ ಆವರಣಕ್ಕೆ ಆಗಮಿಸಿದವು ಭಕ್ತರು ಭಂಡಾರದ ಒಡೆಯನಿಗೆ ಭಂಡಾರ ಹಾರಿಸಿ ಭಕ್ತಿಸೇವೆ ಅರ್ಪಿಸಿದರು   ಹರಕೆ ಹೊತ್ತ ಭಕ್ತರು ದೇವರ ಆಶೀರ್ವಾದದಿಂದ ಹರಕೆ ಫಲ ಈಡೇರಿದ ನಂತರ ಹತ್ತು ಜನ ಭಕ್ತರು ಸಿದ್ದಪ್ಪ …

Read More »

ಪರಿಹಾರಕ್ಕಾಗಿ ಟವರ್ ಏರಿದ ರೈತರು

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಗಿ ಗ್ರಾಮದ ಆರು ಜನ ರೈತರು ಮಳೆಯಿಂದಾದ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮೊಬೈಲ್‌ ಟವರ್‌ ಏರಿ ಕುಳಿತುಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಮಲ್ಲಪ್ಪ ಬಿರಾದಾರ, ಸಿದ್ದು ಶಿಂಧೆ, ಯಲ್ಲಪ್ಪ ಬೆಳ್ಳುಬ್ಬಿ, ಮುನಿಕ ಗುರಚಿ, ಜ್ಞಾನದೇವ ಮಳಿಕ ಹಾಗೂ ಚಿರಾವ ಮೊಹಿತೆ ಟವರ್ ಏರಿದವರು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. …

Read More »

ಗಂಡು ಮಗು ಜನಿಸಲಿಲ್ಲವೆಂದು ನೆರೆಮನೆಯ ಗಂಡು ಮಗುವನ್ನು ಕೊಲೆಗೈದ ಮಹಿಳೆಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ: ಗಂಡು ಮಗು ಜನಿಸಲಿಲ್ಲವೆಂದು ಹತಾಶೆಗೊಂಡು ಸಂಬಂಧಿಕರ ಗಂಡು ಮಗುವನ್ನು ನೀರಿನ ಬ್ಯಾರಲ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪಿ ಮಹಿಳೆಗೆ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.   ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಜಯಶ್ರೀ ಬಾಹುಬಲಿ ಅಲಾಸೆ ಎಂಬ ಮಹಿಳೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕಳೆದ ದಿ.24-8-2018 ರಂದು ಶೇಡಬಾಳ ಗ್ರಾಮದ ಕುರುಬರ ಗಲ್ಲಿಯ ರಾಜು ತಾತ್ಯಾಸಾಬ ಅಲಾಸೆ ಎಂಬುವವರ …

Read More »

‘ನಮಗೆ ಮದರಸಾಗಳು ಬೇಕಿಲ್ಲ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

ಬೆಳಗಾವಿ: ‘ನಮಗೆ ಮದರಸಾಗಳು ಬೇಕಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿ ವೈದ್ಯರು, ಎಂಜಿನಿಯರ್‌ಗಳು ಮತ್ತು ವೃತ್ತಿಪರರನ್ನು ಸೃಷ್ಟಿಸುವ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಬೇಕು’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರ್ಮಾ ಹೇಳಿದರು.   ಇಲ್ಲಿನ ಶಹಾಪುರದ ಶಿವಾಜಿ ಉದ್ಯಾನ ಬಳಿ ಗುರುವಾರ ನಡೆದ ‘ಶಿವಚರಿತ್ರೆ’ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಸ್ಸಾಂನಲ್ಲಿರುವ ಎಲ್ಲ ಮದರಸಾಗಳನ್ನು ಶೀಘ್ರ ಮುಚ್ಚಲು ನಿರ್ಧರಿಸಿದ್ದೇನೆ’ ಎಂದೂ ಹೇಳಿದರು. ‘ಕಮ್ಯುನಿಸ್ಟ್ ಇತಿಹಾಸಕಾರರು ಇಡೀ ದೇಶವೇ ಔರಂಗಜೇಬನ ಕೈಯಲ್ಲಿತ್ತು …

Read More »

ಎಸ್‌.ಯಡಿಯೂರಪ್ಪ ಅವರ ಆಪ್ತ ಮೋಹನ ಲಿಂಬಿಕಾಯಿ ಕಾಂಗ್ರೆಸ್‌ ಸೇರ್ಪಡೆ

ಬೆಳಗಾವಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರಾಗಿದ್ದ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ನಗರದಲ್ಲಿ ಗುರುವಾರ ಕಾಂಗ್ರೆಸ್‌ ಸೇರಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.   ನಂತರ ಮಾತನಾಡಿದ ಮೋಹನ, ‘ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದೆ. ಅಲ್ಲಿ ಕಾರ್ಯಕರ್ತರಿಗೆ ಬೆಲೆ ಉಳಿದಿಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ …

Read More »

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಟಿಕೆಟ್ ಆಕಾಂಕ್ಷಿಗಳ ಮಹತ್ವದ ಸಭೆ

ಬೆಳಗಾವಿ: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.   ಬೆಳಗಾವಿ ಧಾರವಾಡ ಗದಗ ಹಾವೇರಿ ಸೇರಿದಂತೆ 10 ಜಿಲ್ಲೆಗಳ …

Read More »