Breaking News

ಬೆಳಗಾವಿ

ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ …

Read More »

ಮಾ.16ರಂದು ಶಿವಚರಿತ್ರ’ ಉದ್ಘಾಟನಾ ಸಮಾರಂಭ

ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Read More »

ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಡಿ.ಕೆ.ಶಿ. ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ:. ರಮೇಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಮಂತ್ರಿಯೋರ್ವರಿಗೆ ಡಿ.ಕೆ.ಶಿ ಕಾಂಗ್ರೆಸ್ ಸೇರ್ತಿಯಾ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಸಿಡಿ ರಾಜಕಾರಣ ಪ್ರಸ್ತಾಪಿಸಿದ್ದಾರೆ. ನಾವು ಯುದ್ಧ ಮಾಡುವವರು ಹೊರತು ಷಡ್ಯಂತ್ರ ಮಾಡುವವರಲ್ಲ. …

Read More »

ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ

ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ ‍ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …

Read More »

ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ

ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.     ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …

Read More »

ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ

ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು. ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ …

Read More »

ಬೆಳಗಾವಿ: ಮೂರು ಹೆಣ್ಣುಮಕ್ಕಳ ಹೆತ್ತಿದ್ದೇ ತಪ್ಪಾಯಿತೇ…

ಬೆಳಗಾವಿ: ‘ಗಂಡ ಸಾಲ ಮಾಡಿ ಓಡಿಹೋದ. ಸಾಲ ಕೊಟ್ಟವರು ದಿನವೂ ಕಾಡತೊಡಗಿದರು. ಎಳೆಯ ಮಕ್ಕಳು ಹಸಿವಿನಿಂದ ಅಳುತ್ತಿದ್ದವು. ಹೆಣ್ಣು ಹೆತ್ತಿದ್ದೇನೆ ಎಂಬ ಕಾರಣಕ್ಕೆ ಅತ್ತೆ-ಮಾವನೂ ದೂರ ಮಾಡಿದ್ದಾರೆ. ತವರಿನಲ್ಲೂ ಕಷ್ಟವಿದೆ. ಬದುಕು ಬೀದಿಗೆ ಬಿತ್ತು. ಈ ಜೀವ ಇಟ್ಟು ಇನ್ನೇನು ಮಾಡುವುದು ಎಂದು ಸಾಯಲು ಹೊರಟೆ. ನಾನು ಹೋದ ಮೇಲೆ ಮಕ್ಕಳು ಹಸಿವಿನಿಂದ ಸಾಯಬಾರದು ಎಂದು ಅವರಿಗೂ ಫಿನೈಲ್‌ ಕುಡಿಸಿದೆ…’ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ತಮ್ಮ …

Read More »

ಹಿಂಡಲಗಾ: ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ

ಬೆಳಗಾವಿ: ‘ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ಕ್ಲಾಸ್‌ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ …

Read More »

ಬೆಳಗಾವಿ| ಪ್ರತಿ ಮನೆಯಲ್ಲೂ ಹೆಣ್ಣಿಗೆ ಸಮಾನತೆ ಸಿಗಲಿ: ಕೃಷ್ಞಕುಮಾರ

ಬೆಳಗಾವಿ: ‘ಕೇವಲ ಭಾಷಣಗಳಲ್ಲಿ ಮಹಾ ಗ್ರಂಥಗಳಲ್ಲಿ ಮಹಿಳೆಯರಿಗೆ ಗೌರವ ನೀಡಿದರೆ ಸಾಲದು. ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಹೆಣ್ಣುಮಕ್ಕಳ ಜೊತೆಗೆ ಸಮಾಜದ ಎಲ್ಲ ಮಹಿಳೆಯರನ್ನು ಸೋದರಿಯರಂತೆ ಕಾಣಬೇಕು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಞಕುಮಾರ ಹೆಳಿದರು.   ಕೇಂದ್ರ ಕಾರಾಗೃಹದಲ್ಲಿ ಬುಧವಾರ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ತನ್ನ ಜೀವನದಲ್ಲಿ ಮಗುವಾಗಿ, ಮಗಳಾಗಿ, ಸಹೋದರಿಯಾಗಿ, …

Read More »