ಬೆಳಗಾವಿ: ಗಡಿ, ಭಾಷೆಯ ಹೆಸರಿನಲ್ಲಿ ನಡೆಯುವ ಹಲವು ವಿವಾದಗಳ ಮಧ್ಯೆ ಬೆಳಗಾವಿ ಹಬ್ಬಗಳ ವಿಚಾರದಲ್ಲಿ ಸೌಹಾರ್ದತೆ ಮೆರೆಯುತ್ತಾ ಬಂದಿದೆ. ಇದಕ್ಕೆ ಹೊಸ ಉದಾಹರಣೆಯೆಂಬಂತೆ, ಈ ಬಾರಿ ಎಲ್ಲ ಧರ್ಮ, ಭಾಷೆಯವರು ಒಂದಾಗಿ ಗಣೇಶೋತ್ಸವ ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಗಣೇಶ ನಿಮಜ್ಜನೆ ಮೆರವಣಿಗೆಗೆ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಮುಂದೂಡಿದ್ದಾರೆ. 119 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ವೈಭವದ ಗಣೇಶೋತ್ಸವಕ್ಕೆ ಕುಂದಾನಗರಿ ಖ್ಯಾತಿಯ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಶ್ರದ್ಧಾ-ಭಕ್ತಿಯಿಂದ ಬರಮಾಡಿಕೊಂಡು, ಸಂತಸದಿಂದ …
Read More »ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು
ಬೆಳಗಾವಿ: ಗಣಪನ ಆಗಮನಕ್ಕೆ ಕುಂದಾನಗರಿ ಸಜ್ಜಾಗಿದ್ದು, ಭರದ ಸಿದ್ಧತೆಯಲ್ಲಿ ಜನರು ತೊಡಗಿದ್ದಾರೆ. ಮಾರುಕಟ್ಟೆ ಪ್ರದೇಶಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆದಿದೆ. ಇನ್ನು, ಪೂಜಾ ಸಾಮಗ್ರಿ ಖರೀದಿಗೆ ಜನ ಅಂಗಡಿಗಳಿಗೆ ಮುಗಿ ಬಿದ್ದಿರುವುದು ಇಂದು ಕಂಡು ಬಂತು. ಹೌದು.. ಇಡೀ ರಾಜ್ಯದಲ್ಲೇ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುತ್ತದೆ. ಈ ಸಲ ಸೆ.18ರಂದು ಕೆಲವರು ಚೌತಿ ಆಚರಿಸುತ್ತಿದ್ದರೆ ಮತ್ತೊಂದಿಷ್ಟು ಜನ 19ರಂದು ಆಚರಿಸಲು ಮುಂದಾಗಿದ್ದಾರೆ. ಹಾಗಾಗಿ ಭಾನುವಾರ ಬೆಳಗಾವಿಯ ಗಣಪತಿ ಗಲ್ಲಿ, ಖಡೇಬಜಾರ್, …
Read More »ಆಂಧ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಥಣಿಯ ಆರು ಮಂದಿ ಸಾವು; ಸ್ವಗ್ರಾಮದಲ್ಲಿ ನೆರವೇರಿತು ಅಂತ್ಯಕ್ರಿಯೆ
ಚಿಕ್ಕೋಡಿ : ಸೆಪ್ಟೆಂಬರ್ 15 ರಂದು ತಿರುಪತಿಯ ತಿಮ್ಮಪ್ಪನ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ಅಥಣಿ ತಾಲೂಕಿನ ಬಡಚಿ ಗ್ರಾಮದ ಭಕ್ತರ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಅವರ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ, ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿ ಐದು ಜನ ಸಾವು ಸಂಭವಿಸಿ 11 ಜನರಿಗೆ ಗಾಯಗಳಾಗಿತ್ತು. ಇದರಲ್ಲಿ ಮೂವರ ಸ್ಥಿತಿ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನ ಆಚರಣೆ
ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಆಚರಿಸಲಾಯಿತು. ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ಎಲ್ಲ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
Read More »ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿರುವ ಖಾಸಗಿ ಲಾಡ್ಜ್ ವೊಂದರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಯುವತಿಯರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕುಡಚಿ ಪಟ್ಟಣದ ಲಾಡ್ಜ್ದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸಿಇಎನ್ ಇನ್ಸ್‌ಪೆಕ್ಟರ್ ಬಿ ಆರ್ ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿ ಗುಜರಾತ್, ಪಶ್ಚಿಮ ಬಂಗಾಳ ಮೂಲದ ತಲಾ ಇಬ್ಬರು ಯುವತಿಯರನ್ನು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಕಾಮಗಾರಿಗಳನ್ನು ಪೂರ್ಣಗೊಳಿಸದ ಟೆಂಡರ್ ಕಂಪನಿಗಳಿಗೆ 21 ಕೋಟಿ ದಂಡ
ಬೆಳಗಾವಿ ನಗರದಲ್ಲಿ ಕಾಮಗಾರಿ ಕುರಿತಾಗಿ ಟೆಂಡರ್ ನೀಡಿದ ಕಂಪನಿಗಳು ನಿಯಮದ ಪ್ರಕಾರ ಕೆಲಸ ಮಾಡದ ಹಿನ್ನೆಲೆಯಲ್ಲಿ 21 ಕೋಟಿ ದಂಡ ನೀಡುವಂತೆ ಬೆಳಗಾವಿ ಮಹಾ ನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ನೋಟೀಸನ್ನು ರವಾನಿಸಿದ್ದಾರೆ . ಬೆಳಗಾವಿ ನಗರದಲ್ಲಿ ಸತತ 24 ಗಂಟೆಗಳ ಕಾಲ ಕುಡಿಯುವ ನೀರಿನ ಯೋಜನೆಯನ್ನು ಘನ ಸರ್ಕಾರ ಕಲ್ಪಿಸಿದೆ ಆದರೆ ಟೆಂಡರ್ ತೆಗೆದುಕೊಂಡ ಕಂಪನಿಗಳು ಕೆಲಸವನ್ನು ಪೂರ್ಣಗೊಳಿಸಿದೆ ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದೆ . ಈ ಕುರಿತು …
Read More »ಸಾಮಾಜಿಕ ಅನಿಷ್ಠಗಳಿಂದ ಸಮಾಜವನ್ನು ಮುಕ್ತಗೊಳಿಸಲು ಬಸವ ಧರ್ಮವೊಂದೇ ಪರಿಹಾರ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಬೆಳಗಾವಿ: ಬಸವ ಧರ್ಮ ಎಲ್ಲರನ್ನು ಪ್ರೀತಿಸುವ, ಅಪ್ಪಿಕೊಳ್ಳುವ, ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವ ಧರ್ಮ. ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗ ಭೇದವನ್ನು ತೊಡೆದು ಹಾಕಿದ ವಿಶಿಷ್ಠ ಧರ್ಮ ಎಂದು ಗದಗಡಂಬಳದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದಿಂದ, ಬೆಳಗಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳು ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ಮತ್ತು ರುದ್ರಾಕ್ಷಿಧಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭ …
Read More »ಕಡೋಲಿ ಗ್ರಾಮದಲ್ಲಿ ಪ್ರೌಡಶಾಲೆ ಸಶ್ಯ ಶಾಮಲಾ ಕಾರ್ಯಕ್ರಮ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿನ ಸರಕಾರಿ ಕನ್ನಡ ಮಾದ್ಯಮದ ಪ್ರೌಡಶಾಲೆ ಶಾಲೆಯಲ್ಲಿ ಜಿಲ್ಹಾ ಮಟ್ಟದ ಸಶ್ಯ ಶಾಮಲಾ ಕಾರ್ಯಕ್ರಮ ಜರುಗಿತು ಸಸಿಗೆ ನಿರು ಹಾಕುವ ಮುಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.ಶಾಲೆಯಲ್ಲಿನ ಕಾರ್ಯನಿರತ ಶಿಕ್ಷಕಿ ಶ್ರೀಮತಿ ಎಮ್ಮ.ಆಯ್.ಬುಳ್ಳಾ ಇವರಿಗೆ ಜಿಲ್ಹಾ ಆದರ್ಶ ಶಿಕ್ಷಕಿ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪ್ಲೊ ಕೆಪಿಸಿಸಿ ಸದಸ್ಯ ಮಲಗೌಡ ಅವರು ಮಾತನಾಡುತ್ತಾ ಇವತ್ತು ಇಡಿ ವಿಶ್ವದಲ್ಲಿಯೇ ಪರಿಸರ ರಕ್ಷಣೆ ಒಂದು ಗಂಭಿರ ಪ್ರಶ್ನೆಯಾಗಿದೆ …
Read More »ರೈಲಿನಲ್ಲಿ ಸಂಚರಿಸುತ್ತಿದ್ದ 8 ಪ್ರಯಾಣಿಕರು ಅಸ್ವಸ್ಥ, ಬಿಮ್ಸ್‌ಗೆ ದಾಖಲು
ಬೆಳಗಾವಿ: ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ 8 ಮಂದಿ ಯುವಕರು ಪ್ರಜ್ಞೆ ತಪ್ಪಿದ ಘಟನೆ ಸೋಮವಾರ ನಡೆದಿದೆ. ಅಸ್ವಸ್ಥರನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಾಬರಿಯಾದ ಸಹ ಪ್ರಯಾಣಿಕರು ಈ ವಿಚಾರವನ್ನು ತಕ್ಷಣ ರೈಲ್ವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥಗೊಂಡ ಎಲ್ಲರೂ ಉತ್ತರ ಪ್ರದೇಶದ …
Read More »