ಮಂಡ್ಯ: ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ರಾತ್ರಿ 8 ಗಂಟೆಗೆ ಸಲ್ಲುವ ಪುಷ್ಯ ನಕ್ಷತ್ರದಲ್ಲಿ ಚಾಲನೆ ಸಿಗಲಿದೆ. ಬೆಳಗ್ಗೆ 7:30ಕ್ಕೆ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಆಭರಣ ತೆರಳಿದ್ದು, ಬಿಗಿ ಭದ್ರತೆಯಲ್ಲಿ ಮಂಡ್ಯದಿದ ಮೇಲುಕೋಟೆಗೆ ರವಾನೆ ಮಾಡಲಾಗುತ್ತದೆ. ಬಳಿಕ ಲಕ್ಷ್ಮಿ …
Read More »ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮಂಡ್ಯ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ. ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ. ಭಾನುವಾರ …
Read More »ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ
ಮಂಡ್ಯ: ರಾಜ್ಯ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರಕ್ಕೆ ಮುಂದಾಗಿದ್ದಾರೆ. ಸಾವಿರಾರು ಕೋಟಿ ರೂ ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ …
Read More »ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.
ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. …
Read More »ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ …
Read More »K.R.S. ಬೃಂದಾವನದಲ್ಲಿ ಚಿರತೆ
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಮೀನುಗಾರಿಕಾ ಇಲಾಖೆಯ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂಂದಿಯ ಕಣ್ಣಿಗೆ ಬಿದ್ದಿದೆ. ತಕ್ಷಣ ಜಾಗೃತರಾದ ಭದ್ರತಾ …
Read More »ಆಯುಧ ಪೂಜೆಗೆ ಕೇವಲ 50 ರೂ. ಕೊಟ್ಟ ರಾಜ್ಯ ಸರ್ಕಾರ..!
ಮಂಡ್ಯ : ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಘಟಕಗಳಲ್ಲಿನ ಪ್ರತಿ ವಾಹನಕ್ಕೆ ತಲಾ 50 ರೂಪಾಯಿ. ವಿಭಾಗೀಯ ಕಾರ್ಯಗಾರಕ್ಕೆ 1000 ರೂಪಾಯಿ. ಪ್ರಾದೇಶಿಕ ಕಾರ್ಯಾಗಾರಕ್ಕೆ 2000 ರೂಪಾಯಿ ಹೀಗೆ ಆಯುಧ ಪೂಜೆಗಾಗಿ ಕೆಎಸ್‌ಆರ್‌ಟಿಸಿಗೆ ಸರ್ಕಾರ ಚಿಲ್ಲರೆ ಕಾಸು ಕೊಟ್ಟಿದೆ …
Read More »10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ
ಮಂಡ್ಯ :- 5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ. ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ …
Read More »ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ
ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ. ಲೋ ಬಿಪಿಯಿಂದಾಗಿ 45 ವರ್ಷದ ಕುಶಾಲ್ ಮೃತಪಟ್ಟಿದ್ದ. ಮಗನ ಸಾವಿನ ಸುದ್ದಿ ಕೇಳಿ ತಾಯಿ ಲಕ್ಷ್ಮಮ್ಮ(69) ಸಹ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ಮನೆಯಲ್ಲಿ ಟಿವಿ ನೋಡುವ ವೇಳೆ ಕುಶಾಲ್‌ಗೆ ಲೋ ಬಿಪಿ ಆಗಿದೆ. ರಕ್ತದೊತ್ತಡ ಕುಸಿದು ಒದ್ದಾಡುತ್ತಿದ್ದ ಕುಶಾಲ್‌ನನ್ನು ಸ್ಥಳೀಯರು ಮನೆಯ ಹೊರಗೆ ತಂದಿದ್ದಾರೆ. …
Read More »ಶಿಕ್ಷಣ ಕೇಂದ್ರಗಳೇ ಈಗ ಕೊರೊನಾ ಹಬ್..? ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಪಾಸಿಟಿವ್..!
ಮಂಡ್ಯ: ಕೊರೊನಾದ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್ಸ್ಪಾಟ್ ಕೇಂದ್ರವಾಗುತ್ತಿವೆಯಾ ಅನ್ನೋ ಅನುಮಾನ ಶುರುವಾಗಿದೆ. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ. ಸೋಂಕಿತರಿಗೆ ನಾಗಮಂಗಲ ಪಟ್ಟಣದ …
Read More »
Laxmi News 24×7