Breaking News

ಮಂಡ್ಯ

ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್

ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28) ಮತ್ತು ತೊಪ್ಪನಹಳ್ಳಿಯ ಮಂಜು (30) ಎಂದು ಗುರುತಿಸಲಾಗಿದೆ. ಹಂತಕರು ಈ ಸ್ಥಳದಲ್ಲಿರುವ ಖಚಿತ …

Read More »

ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ​ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್​ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …

Read More »

ಇಂದು ಕಾವೇರಿಗೆ ಯಡಿಯೂರಪ್ಪ ಬಾಗಿನ – ಎರಡೆರಡು ದಾಖಲೆ ಬರೆಯಲಿದ್ದಾರೆ ಸಿಎಂ ಇವರಿಂದ ಪ್ರಕಟಿಸಲಾಗಿದೆ

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ …

Read More »

ಪಿಎಸ್‌ಎಸ್​ಕೆ ಸಕ್ಕರೆ ಕಾರ್ಖಾನೆಗೆ ಕೊನೆಗೂ ಕಾಯಕಲ್ಪ ; ನಿರಾಣಿ ಒಡೆತನದಲ್ಲಿ ವಿದ್ಯುಕ್ತ ಆರಂಭ

ಮಂಡ್ಯ: ಕಳೆದ ನಾಲ್ಕು ವರ್ಷಗಳ ಹಿಂದೆ ನಷ್ಟದಿಂದ ಸ್ಥಗಿತ ಗೊಂಡಿದ್ದ ಆಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್​ಎಸ್​ಕೆ ಸಕ್ಕರೆ ಕಾರ್ಖಾನೆಗೆ ಕೊನೆಗೂ ಕಾಯಕಲ್ಪ ದೊರೆತಿದೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಷುಗರ್ಸ್ ಒಡೆತನದಲ್ಲಿ ಇಂದು ಕಾರ್ಖಾನೆ ವಿದ್ಯುಕ್ತವಾಗಿ ಆರಂಭಗೊಂಡಿದೆ. ರಾಜ್ಯದ ಹಲವು ಮಠಾಧೀಶರು ಕಾರ್ಖಾನೆಯ ಉದ್ಘಾ ಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ ಶುಭಕೋರಿದ್ದಾರೆ. ಪಾಂಡವಪುರ ತಾಲೂಕಿನಲ್ಲಿರುವ ಪಿಎಸ್​ಎಸ್​ಕೆ ಸಕ್ಕರೆ ಕಾರ್ಖಾ ನೆ. ರಾಜ್ಯದಲ್ಲಿ ಪ್ರಪ್ರಥಮವಾಗಿ ಸ್ಥಾಪಿತವಾಗಿದ್ದ ಸಹಕಾರಿ …

Read More »

ಕೋವಿಡ್ ವಾರ್ಡ್ ನಿಂದಲೇ ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗೋದು ಬೇಡ’ ಎಂದು ಕೈ ಮುಗಿಯುತ್ತ ಕಾಮೇಗೌಡರು

ಮಂಡ್ಯ: ಕರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ತಮ್ಮ ಆರೋಗ್ಯ ಪರಿಸ್ಥಿತಿ ಕುರಿತು ಅವರೇ ಮಾತನಾಡಿದ್ದಾರೆ. ‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಗೃಹಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸ್ತೀನಿ ಎಂದು ಹೇಳಿದ್ದಾರೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ …

Read More »

ಭಗೀರಥ ಕಾಮೇಗೌಡರಿಗೆ ಕೊರೊನಾ ಪಾಸಿಟಿವ್……………

ಮಂಡ್ಯ: ಆಧುನಿಕ ಭಗೀರಥ ಎಂದೇ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಕಾಮೇಗೌಡರಿಗೆ ಕೊರೊನಾ ವೈರಸ್ ಬಂದಿದೆ. ಸ್ವತಃ ಖರ್ಚಿನಿಂದ ಕೆರೆಗಳನ್ನು ನಿರ್ಮಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಇಂದು ಧೃಡವಾಗಿದೆ.ಕಾಮೇಗೌಡರು ಕಳೆದ 15 ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆರಂಭದಲ್ಲಿ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಪಿಎಸ್‍ಎಸ್‍ಕೆಯಿಂದ ಕಬ್ಬು ತೆಗೆದುಕೊಂಡು ಹೋಗದಂತೆ ನಿರ್ಬಂಧ ಹಾಕುವಂತೆ ಮುರುಗೇಶ್ ನಿರಾಣಿ ಮನವಿ

ಮಂಡ್ಯ ಜಿಲ್ಲೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಮೀಸಲಿಟ್ಟಿರುವ ಕಬ್ಬನ್ನು ಇತರರು ತೆಗೆದುಕೊಂಡು ಹೋಗದಂತೆ ತಕ್ಷಣವೇ ಜಿಲ್ಲಾಡಳಿತ ನಿರ್ಬಂಧ ಹಾಕಬೇಕೆಂದು ಮಾಜಿ ಶಾಸಕ ಹಾಗೂ ನಿರಾಣಿ ಶುಗರ್ಸ್ ಲಿಮಿಟೆಡ್‍ನ ಅಧ್ಯಕ್ಷ ಮುರುಗೇಶ್ ನಿರಾಣಿ ಒತ್ತಾಯ ಮಾಡಿದ್ದಾರೆ. ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ವ್ಯಾಪ್ತಿಯ ಕಬ್ಬನ್ನು ಜಿಲ್ಲಾಡಳಿತ ಮೀಸಲಿಟ್ಟಿದೆ.ಆದರೆ ನಮಗೆ ಮೀಸಲಿಟ್ಟಿರುವ ವ್ಯಾಪ್ತಿಯಿಂದ ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ತೆಗೆದುಕೊಂಡು ಹೋಗುತ್ತಿವೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. …

Read More »

ಕೋರ್ಟ್ ಕಲಾಪವಿಲ್ಲ- ಬದುಕು ನಿರ್ವಹಣೆಗೆ ಪಾನಿಪುರಿ ಮಾರಲು ನಿಂತ ಹೈ ಕೋರ್ಟ್ ವಕೀಲ

ಮಂಡ್ಯ: ಕೊರೊನಾ ಮಹಮಾರಿಗೆ ಇಡೀ ದೇಶವೇ ನಲುಗಿದೆ. ಬಡವ, ಶ್ರೀಮಂತ ಎನ್ನದೆ ಅದೆಷ್ಟೋ ಜನ ಲಾಕ್‍ಡೌನ್‍ನಿಂದಾಗಿ ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗೆ ಕೋರ್ಟ್ ಕಲಾಪ ನಡೆಯದ ಕಾರಣ ಸಂಕಷ್ಟಕ್ಕೆ ಸಿಲುಕಿರುವ ಮಂಡ್ಯದ ವಕೀಲರೊಬ್ಬರು ಪಾನಿಪುರಿ ವ್ಯಾಪಾರ ಶುರುಮಾಡಿದ್ದಾರೆ.   ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದವರಾಗಿರುವ 30ವರ್ಷದ ಪ್ರತಾಪ್, ವೃತ್ತಿಯಲ್ಲಿ ಹೈಕೋರ್ಟ್ ವಕೀಲರು. ಕಳೆದ 6 ವರ್ಷಗಳಿಂದ ಹೈಕೋರ್ಟ್‍ನ ಹಿರಿಯ ವಕೀಲ ಉಮಾಕಾಂತ್ ಅವರ ಬಳಿ …

Read More »

ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ

ಮಂಡ್ಯ: ಇ-ತ್ಯಾಜ್ಯಗಳಿಂದ ತಾನು 600 ಡ್ರೋನ್​ಗಳನ್ನ ತಯಾರಿಸಿದ್ದೇನೆ. ಬಡತನದಿಂದ ಬೆಳೆದು ಮೇಲೆ ಬಂದಿದ್ದೇನೆ. ಅನೇಕ ಅಂತಾರಾಷ್ಟ್ರೀಯ ಡ್ರೋನ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದಿದ್ದೇನೆ. 87 ದೇಶಗಳಲ್ಲಿ ಕೆಲಸ ಆಫರ್ ಇದ್ದರೂ ತಾಯಿಗೋಸ್ಕರ ದೇಶದಲ್ಲೇ ಉಳಿದುಕೊಂಡಿದ್ದೇನೆ ಎಂದು ಸಖತ್ತಾಗಿ ಬಿಂಬಿಸಿಕೊಂಡಿದ್ದ ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ. ಸುದ್ದಿ ಜಾಲತಾಣವೊಂದು ಈತನದ್ದು ಬರೇ ಸುಳ್ಳಿನ ಕಂತೆಗಳು ಎಂದು ತನಿಖಾ ವರದಿಯಲ್ಲಿ ಬಟಾಬಯಲು ಮಾಡಿದೆ. ಈತನ ಹೆಸರು ಪ್ರತಾಪ್. ಮಂಡ್ಯ ಜಿಲ್ಲೆ …

Read More »

ಒಂದೂರಿನ ಶವ ಮತ್ತೊಂದು ಊರಲ್ಲಿ ………

ಮಂಡ್ಯ: ಮಹಾಮಾರಿ ಕೊರೊನಾದಿಂದ ಜನರು ಈಗಾಗಲೇ ಭಯಭೀತರಾಗಿದ್ದಾರೆ. ಇದೀಗ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ. ನಾಗರಾಜು (50) ಸಾವನ್ನಪ್ಪಿರುವ ವ್ಯಕ್ತಿ. ನಾಗರಾಜು ಮೂಲತಃ ಟಿ.ನರಸಿಪುರ ತಾಲೂಕಿನ ಮುಸುಕನಕೊಪ್ಪಲು ಗ್ರಾಮದವರು. ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಾಗುತ್ತಿದೆ. ಇದರಿಂದ ಗಾಬರಿಗೊಂಡು ನಾಗರಾಜು ಮಂಗಳವಾರ ಬೆಂಗಳೂರಿನಿಂದ ಹೊರಟ್ಟಿದ್ದಾರೆ. ಆದರೆ ತಮ್ಮ ಗ್ರಾಮಕ್ಕೆ ಹೋಗುವಷ್ಟಲ್ಲಿ ಕತ್ತಲಾಗುತ್ತದೆ ಎಂದು …

Read More »