Breaking News

ಮಂಡ್ಯ

ಪಾಂಡವಪುರ ಪುರಸಭೆಯಿಂದ ಕರೊನಾ ಶವಯಾತ್ರೆ

  ಮಂಡ್ಯ ಜಿಲ್ಲೆ ಪಾಂಡವಪುರ: ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಇಲ್ಲಿನ ಪುರಸಭೆ ಅಧಿಕಾರಿಗಳು ಬುಧವಾರ ಕರೊನಾ ಶವಯಾತ್ರೆ ನಡೆಸಿ ಸಾರ್ವಜನಿಕ ರಲ್ಲಿನ ಭಯ ಹೋಗಲಾಡಿಸುವ ಪ್ರಯತ್ನ ನಡೆಸಿದರು. ಪುರಸಭೆ ಕಚೇರಿ ಆವರಣದಿಂದ ಬೆಳಿಗ್ಗೆ 12 ಗಂಟೆಗೆ ಪ್ರಾರಂಭವಾದ ಶವಯಾತ್ರೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಕರೊನಾ ಸೋಂಕು ತಡೆಗಟ್ಟಲು ಯಾರೂ ಮನೆಯಿಂದ ಹೊರಗೆ ಬರಬಾರದು. ಬಂದರೆ‌ ಸೋಂಕು ತಗಲುವ ಸಾಧ್ಯತೆ ಗಳಿವೆ …

Read More »

ಕಾರಿನಲ್ಲಿ ಮದ್ಯ ಸಾಗಣೆ ಮೂವರ ಬಂಧನ

  ಮಂಡ್ಯ ಜಿಲ್ಲೆ ನಾಗಮಂಗಲ: ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ 5 ಬಾಕ್ಸ್ ಬಿಯರ್ ಬಾಟಲ್ ಪತ್ತೆಯಾಗಿವೆ ಕೆ.ಎ-53 ಎಂಬಿ 6899 ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮಧ್ಯ ಪತ್ತೆಯಾಗಿದ್ದು. ಅಕ್ರಮವಾಗಿ ಮಧ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ಮಾಕಳ್ಳ್ಳಿ ಗ್ರಾಮದ ಹರೀಶ್ ಗೌಡ, ಸಂದೀಪ್, ಹಾಗೂ ಸೋಮಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗಮಂಗಲ …

Read More »

ತೋಟಗಾರಿಕಾ ಇಲಾಖೆಯ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತೋಟಗಾರಿಕಾ ಇಲಾಖೆಯ ವತಿಯಿಂದ ಹಾಪ್‌ಕಾಮ್ಸ್ ದರದಲ್ಲಿ ಹಣ್ಣು-ತರಕಾರಿ ಮಾರಾಟ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ: ಪಟ್ಟಣದ ತೋಟಗಾರಿಕಾ ಇಲಾಖೆಯ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತೋಟಗಾರಿಕಾ ಇಲಾಖೆಯ ವತಿಯಿಂದ ಹಾಪ್‌ಕಾಮ್ಸ್ ದರದಲ್ಲಿ ಹಣ್ಣು-ತರಕಾರಿ ಮಾರಾಟ ಮಾಡುವ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೀಡಲಾದ ಹಾಪ್‌ಕಾಮ್ಸ್ ಪಾಸ್‌ಗಳನ್ನು ತಹಸೀಲ್ದಾರ್ ಎಂ.ಶಿವಮೂರ್ತಿ ಅವರು ವಿತರಣೆ ಮಾಡಿದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಸಾರ್ವಜನಿಕರಿಗೆ ಹಾಪ್ ಕಾಮ್ಸ್ ದರದಲ್ಲಿ ಅಂದರೆ ಯೋಗ್ಯ ಕೈಗೆಟಕುವ ದರದಲ್ಲಿ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ತಳ್ಳುವ ಗಾಡಿಯಲ್ಲಿ ಮಾರಾಟ ಮಾಡಲು ಮುಂದೆ …

Read More »

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.

ಉಪವಾಸ ವ್ರತವನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸುವ ರಂಜಾನ್ ಹಬ್ಬವನ್ನು ಅವರವರ ಮನೆಯಲ್ಲಿಯೇ ಆಚರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮಂಡ್ಯ ಕೃಷ್ಣರಾಜಪೇಟೆ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಮುಸ್ಲಿಂ ಬಂಧುಗಳು ವಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು, ಆರೋಗ್ಯತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಬೇಕು. ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. …

Read More »

ಕೊರೋನಾ ವಿರುದ್ಧ ಹೋರಾಟಕ್ಕಾಗಿ ತನ್ನ ಮದುವೆ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ;

ಮಂಡ್ಯ‌(ಏ.18): ಕೊರೋನಾ ಆತಂಕ ಹೆಚ್ಚಾದ ಹಿನ್ನೆಲೆ, ದೇಶಾದ್ಯಂತ ಲಾಕ್​ಡೌನ್ ಜಾರಿಯಾಗಿದೆ. ಮಹಾಮಾರಿ ಕೊರೋನಾಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಲಾಕ್​ಡೌನ್ ನಡುವೆ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ವರ್ಗಗಳ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹಗಲಿರುಳು ಎನ್ನದೆ ಕುಟುಂಬಸ್ಥರಿಂದ ದೂರ ಉಳಿದು ದೇಶದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಡ್ಯದಲ್ಲಿ ದಕ್ಷ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ. ಹೌದು, ಮಳವಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಫೇಸ್ ಬುಕ್ ಪ್ರೀತಿ ನಂತರ ಮದುವೆ ಇದೀಗ ಆತ್ಮಹತ್ಯೆ

ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಒಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ ಪೀಡಿಸುತ್ತಿದ್ದನಂತೆ.. ನಿನ್ನೆ ಮಧ್ಯಾಹ್ನ ಅಂಜು ಆದಿತ್ಯನೊಂದಿಗೆ ಜಗಳವಾಡಿಕೊಂಡಿದ್ರು. ಜಗಳವಾಡಿದ ನಂತರ ಆದಿತ್ಯ ಮಗುವಿಗೆ ಹಾಲು ಹಾಗೂ ದಿನಸಿ …

Read More »

ಕೆ.ಆರ್.ಪೇಟೆ ಪಟ್ಟಣದ ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಗ್ರಾಮದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ: ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಿ, ಮಾನವ ಜೀವ ಸಂಕುಲವನ್ನು ಉಳಿಸಬೇಕೆಂದು ಹಾರೈಸಿ ಕೆ.ಆರ್.ಪೇಟೆ ಪಟ್ಟಣದ ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಗ್ರಾಮದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ವಿಶ್ವದಾದ್ಯಂತ ಕೊರೋನಾ ಅಟ್ಟಹಾಸವು ಎಲ್ಲೆ ಮೀರಿದೆ. ನಿತ್ಯ ಸಾವಿರಾರು ಮಂದಿ ಕೊರೋನಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಲಕ್ಷಾಂತರ ಮಂದಿ ರೋಗ ಪೀಡಿತರಾಗುತ್ತಿದ್ದಾರೆ ಹಾಗಾಗಿ ಕೊರೋನಾ ಮಹಾಮಾರಿಯನ್ನು ಹೋಗಲಾಡಿ ಮಾನವ ಸಂಕುಲವನ್ನು ಉಳಿಸಬೇಕೆಂದು ಗ್ರಾಮಸ್ಥರು ತಾಯಿ ಮಾರಮ್ಮ …

Read More »

ಮಂಡ್ಯದಲ್ಲಿ ರೈತ ಮಹಿಳೆಯಿಂದ 10 ಸಾವಿದ ದೇಣಿಗೆ

ಮಂಡ್ಯ ಜಿಲ್ಲೆ ದಬ್ಬೇಘಟ್ಟ ಗ್ರಾಮದ ನಿವಾಸಿ ರೈತ ಮಹಿಳೆ ಶಾರದಮ್ಮ ರವರು ಕೃಷಿ ಚಟುವಟಿಕೆ ಹಾಗೂ ಹೈನುಗಾರಿಕೆ ಯಿಂದ ಸಂಕಷ್ಟಕ್ಕೆಂದು ಉಳಿತಾಯ ಮಾಡಿದ್ದ ಹತ್ತು ಸಾವಿರ ಹಣವನ್ನು ಮುಖ್ಯಮಂತ್ರಿಗಳ ಕೊರೋನೊ ಪರಿಹಾರ ನಿಧಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ಅವರನ್ನು ಬೇಟಿ ಮಾಡಿದ ಶಾರದಮ್ಮ ಮತ್ತು ಅವರ ಸುಪುತ್ರ ಭರತ್ ಮಾಸ್ತಿ ಅವರು ಹತ್ತು ಸಾವಿರ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರ …

Read More »

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ! ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ …

Read More »

ಮಂಡ್ಯ ಜಿಲ್ಲೆ ಸಂವಿಧಾನಶಿಲ್ಪಿ, ಭಾರತರತ್ನ, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಧೀಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತ್ಯೋತ್ಸವ

ಮಂಡ್ಯ ಜಿಲ್ಲೆ ಸಂವಿಧಾನಶಿಲ್ಪಿ, ಭಾರತರತ್ನ, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಧೀಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತ್ಯೋತ್ಸವವನ್ನು ಕೊರೋನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು ರಾಜ್ಯದ ಪೌರಾಡಳಿತ, ರೇಷ್ಮೆ ಹಾಗೂ ಪೌರಾಡಳಿತ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ …

Read More »