Breaking News

ಮೈಸೂರ್

ದಸರಾ ದೀಪಾಲಂಕಾರ 2025: ಆಕರ್ಷಕ ಹಾಗೂ ವಿನೂತನವಾಗಿರಲಿ – ಕೆ. ಎಂ. ಮುನಿಗೋಪಾಲ್‌ ರಾಜು

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ, ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿ ವಹಿಸಿ, ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕ ಕೆ. ಎಂ. ಮುನಿಗೋಪಾಲ್‌ ರಾಜು ಅವರು ಸಲಹೆ ನೀಡಿದ್ದಾರೆ. ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ …

Read More »

ಕಾಂಗ್ರೆಸ್​ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ

ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …

Read More »

ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್​ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ

ಮೈಸೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಿದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯವರು ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕುಂಭಮೇಳದ ದುರ್ಘಟನೆ ನಡೆದಾಗ ಯಾರಾದರೂ ಪ್ರಧಾನಿಯನ್ನು ರಾಜೀನಾಮೆ ಕೇಳಿದರಾ? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ? ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದರು. ಜೂನ್​ …

Read More »

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

ಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನೀತಿ ಆಯೋಗದ ಸಭೆಗೆ ಸಿಎಂ ಹಾಗೂ ಸಂಬಂಧಿಸಿದವರು ಗೈರಾಗಿದ್ದ ವಿಚಾರವಾಗಿ ಭಾನುವಾರ ಮಾಧ್ಯಮಗಳಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದರು. ಸಭೆಗೆ ಗೈರಾಗಿದ್ದ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು. ಸಭೆಗೆ ಗೈರಾಗುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ತಮಿಳುನಾಡು ಸಿಎಂ …

Read More »

ನನಗೆ ಮೈಸೂರು ಸ್ಯಾಂಡಲ್​ ಸೋಪ್​ ರಾಯಭಾರಿಯಾಗುವ ಆಸೆ ಇಲ್ಲ: ಯದುವೀರ್

ಮೈಸೂರು:‌ ಮೈಸೂರು ಸ್ಯಾಂಡಲ್ ಸೋಪಿಗೆ ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ ಎಂದು ರಾಜವಂಶಸ್ಥರು, ಬಿಜೆಪಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. “ಮೈಸೂರು ಸ್ಯಾಂಡಲ್ ಸೋಪಿಗೆ ಸೂಕ್ತ ರಾಯಭಾರಿ ಎಂದರೆ ನಮ್ಮ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬ್ರ್ಯಾಂಡೂ ನಮ್ದೇ ಬ್ರ್ಯಾಂಡು ಅಂಬಾಸಿಡರು ನಮ್ಮವ್ರೇ ‘ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವಾಗಿ, ನಗರದ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು”ರಾಜಮನೆತನ ಕಮರ್ಷಿಯಲ್ ಆಗಿ …

Read More »

ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!

ಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ …

Read More »

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು.

ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ. ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ …

Read More »

ಅರಮನೆಗೆ ಜನರ ಲಗ್ಗೆ

ಮೈಸೂರು: ವಿಜಯದಶಮಿ ಮೆರವಣಿಗೆ ವೀಕ್ಷಣೆ ಪಾಸ್‌ ಇದ್ದವರನ್ನು ಅರಮನೆ ಆವರಣದೊಳಗೆ ಬಿಡಲು ಸಾಕಷ್ಟು ಹೊತ್ತು ಕಾಯಿಸಿದ್ದಲ್ಲದೆ, ಎಲ್ಲ ಆಸನಗಳು ಭರ್ತಿಯಾಗಿವೆ ಎಂದು ಗೇಟ್‌ನಲ್ಲಿನ ಸಿಬ್ಬಂದಿ ತಿಳಿಸಿದ್ದರಿಂದ ಇಲ್ಲಿನ ವರಾಹ ದ್ವಾರದ ಬಳಿ ಶನಿವಾರ ಜನರು ಹಾಗೂ ಪೊಲೀಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು.   ಪ್ರವೇಶ ಗೊಂದಲದಿಂದ ಆಕ್ರೋಶಗೊಂಡ ಜನರು ವರಾಹ ದ್ವಾರದ ಗೇಟ್‌ ತಳ್ಳಿ ಒಳ ನುಗ್ಗಿದರು. ಅರಮನೆ ಉದ್ಯಾನದ ಗುಲಾಬಿ ತೋಟದಲ್ಲೆಲ್ಲಾ ಅಡ್ಡಾದಿಡ್ಡಿಯಾಗಿ ಓಡಾಡಿದರು. ಭದ್ರತಾ ಸಿಬ್ಬಂದಿಯೂ …

Read More »

ದಸರಾ ವೇಳೆಯೇ ಮೈಸೂರು ರಾಜಮನೆತನಕ್ಕೆ ಮತ್ತೊಂದು ಕುಡಿ, ದುಪ್ಪಟ್ಟಾಯ್ತು ಸಂಭ್ರಮ

ಮೈಸೂರು ರಾಜವಂಶಸ್ಥರಾದ ಒಡೆಯರ್‌ ಅವರಿಂದಾಗಿ ದಸರಾ ಜಗದ್ವಿಖ್ಯಾತಿಯಾಗಿದೆ. ಹಬ್ಬದ ಸಮಯದಲ್ಲೇ ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ದಂಪತಿ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ದಸರಾ ಹೊತ್ತಲ್ಲೇ ಒಡೆಯರ್‌ ಕುಟುಂಬದಲ್ಲಿ ಡಬಲ್‌ ಧಮಾಕಾದ ಸಂಭ್ರಮ ಮನೆಮಾಡಿದೆ.   ಯದುವೀರ್ ಹಾಗೂ ಪತ್ನಿ ರಾಣಿ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು …

Read More »

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ. ‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ …

Read More »