Breaking News

ಯಾದಗಿರಿ

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ  ಮಲ್ಲಿಕಾರ್ಜುನ ಮುತ್ಯಾಗೆ  ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು …

Read More »

ಯುಪಿಎಸ್ಸಿ : ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ ಯುಪಿಎಸ್ಸಿ ಸಿವಿಲ್‌ ಸರ್ವೀಸ್ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆ

ಯಾದಗಿರಿ :ಯುಪಿಎಸ್ಸಿ (ಯೂನಿಯನ್‌ ಪಬ್ಲಿಕ್‌ ಸರ್ವೀಸ್‌ ಕಮೀಶನ್‌) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷಾ (ಸಿವಿಲ್‌ ಸರ್ವೀಸ್‌) ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಶುಕ್ರವಾರ (ಮಾ.6) ಪ್ರಕಟಗೊಂಡಿದ್ದು, ಅಖಿಲ ಭಾರತ ಮಟ್ಟದಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆಯಾಗಿ, ಹೆಮ್ಮೆಗೆ ಪಾತ್ರರಾಗಿದ್ದಾರೆ. ಯಾದಗಿರಿಯ ಸಂದೀಪ್ ಬಾಡದ್‌ ರಾಜ್ಯದಲ್ಲಿ 2ನೇ ಹಾಗೂ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್‌, ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್‌, ಬಸವರಾಜ್‌ ಜವಳಿ 664ನೇ …

Read More »

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಯಾದಗಿರಿ: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ …

Read More »

ಪ್ರಚೋದನಕಾರಿ ಭಾಷಣ; ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

  ಯಾದಗಿರಿಯ ಗುರುಮಠಕಲ್‌ನಲ್ಲಿ ನಡೆದ ಶಿವಾಜಿ ಜಯಂತಿ ಸಭೆಯಲ್ಲಿ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪೊಲೀಸರು ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಒಂದು ಕೋಮಿನ ವಿರುದ್ಧ ಟೀಕೆ, “ಗಾಂಧೀಜಿ ಪಾಕಿಸ್ತಾನದ ಪಿತಾಮಹ’ ಎಂಬ ವಿವಾದಿತ ಹೇಳಿಕೆ ಹಾಗೂ ಪ್ರಚೋದನಾತ್ಮಕ ಮಾತುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗುರುಮಠಕಲ್ ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196, …

Read More »

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

ಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲಾಗಿದೆ. ಶಿವಾಜಿ ಜಯಂತಿಯಲ್ಲಿ ಶಾಸಕ ಬಸನಗೌಡ ಪಾಟೀಲ ಭಾಷಣದ ವಿಡಿಯೋ ಈಗ ವೈರಲ್ ಆಗಿದೆ. ಫೆಬ್ರುವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ …

Read More »

ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಸ್ವಕುಳಿಸಾಳಿ ಸಮುದಾಯದ 12 ಕುಟುಂಬಗಳಿಗೆ ತಮ್ಮದೇ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದ್ದು, ಕಳೆದ ಎಂಟು ವರ್ಷಗಳಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಸಮುದಾಯಕ್ಕೆ ಸೇರಿದ ಸಂಘದ ಆಸ್ತಿ ಹಾಗೂ ಆದಾಯದ ಲೆಕ್ಕ ಕೇಳಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಹಿಷ್ಕೃತ ಕುಟುಂಬಗಳು ಆರೋಪಿಸಿವೆ. ಶಹಾಪುರದಲ್ಲಿರುವ ಜೀಹ್ವೆಶ್ವರ ಕಲ್ಯಾಣ ಮಂಟಪ ಹಾಗೂ …

Read More »

ಶೇಂಗಾ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು

ಯಾದಗಿರಿ: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ ಹಾಗೂ ಕಮಿಷನ್ ಏಜೆಂಟ್​ಗಳ ವಿರುದ್ಧ ಪ್ರತಿಭಟನೆ ನಡೆಸಿ …

Read More »

ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಯಾದಗಿರಿ  ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ …

Read More »

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಯಾದಗಿರಿ, ಮಾರ್ಚ್​ 05: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​​ ಅವರಿಗೆ ಜಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರುಪುರ ಠಾಣೆ ಪೊಲೀಸರು (Surapur Police) ತಡರಾತ್ರಿ ಬಂಧಿಸಿದ್ದಾರೆ. ಮೊಹಮ್ಮದ್ ರಸೂಲ್ ಕಡ್ದಾರೆ (45) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್​ನಲ್ಲಿ ಕೂಲಿ ಮಾಡುತ್ತಿದ್ದನು. ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ …

Read More »

ಯಾದಗಿರಿ ಮತ್ತು ಕಲಬುರಗಿಯ ಬಂಧಿತ ಪಿಎಫ್‌ಐ ನಾಯಕರನ್ನು ನ್ಯಾಯಾಂಗ ಬಂಧನ

ಯಾದಗಿರಿ/ಕಲಬುರಗಿ: ಯಾದಗಿರಿ ಮತ್ತು ಕಲಬುರಗಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದ ಪಿಎಫ್ಐ ಮುಖಂಡರನ್ನು ನ್ಯಾಯಾಂಗ ವಶಕ್ಕೆ ನೀಡಲು ತಾಲೂಕು ದಂಡಾಧಿಕಾರಿ‌ಗಳು ಆದೇಶ ಹೋರಡಿಸಿದ್ದಾರೆ. ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ ಮಜರ್ ಹುಸೇನ್ , ಮಿಲ್ಲತ್ ನಗರದ ಇಸಾಮೊದ್ದಿನ್ ಇಬ್ಬರ ಮನೆ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸಿ, ನಂತರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬಳಿಕ ಕಲಬುರಗಿ ತಾಲೂಕು ದಂಡಾಧಿಕಾರಿ ಪ್ರಕಾಶ ಕುದರಿ ಅವರ ಮುಂದೆ ಇಬ್ಬರನ್ನು …

Read More »