Breaking News

ಯಾದಗಿರಿ

ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಮುಖ್ಯಮಂತ್ರಿಗಳೇ

ಯಾದಗಿರಿ: ನಮ್ಮ ಕೈ ಬಿಡಬೇಡಿ ಮುಖ್ಯಮಂತ್ರಿಗಳೇ, ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಅಂತ ಯಾದಗಿರಿ ಜಿಲ್ಲೆಯ ರೈತರೊಬ್ಬರು ತನ್ನ ಅಳಲನ್ನು ತೊಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಸೇರಿದಂತೆ ತಗ್ಗು ಪ್ರದೇಶದ ಮನೆಗಳಿ ಮಳೆ ನುಗ್ಗುತ್ತಿವೆ. ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತಿದ ಬೆಳೆ ನಾಶವಾಗಿದೆ. ಇದರಿಂದ ಕಂಗಾಲಾಗಿರುವ ಜಿಲ್ಲೆಯ …

Read More »

ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.

ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ………..

ಯಾದಗಿರಿ: ರಾಜಕಾರಣಿಗಳು ಬೇಕಾಬಿಟ್ಟಿಯಾಗಿ ದೊಡ್ಡ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ತಡೆಗೆ ಲಸಿಕೆ ಸಂಶೋಧನೆಯಾಗಿಲ್ಲ. ಹೀಗಿರುವಾಗ ಸಾಮಾಜಿಕ ಅಂತರವೇ ಮಹಾಮಾರಿ ತಡೆಗೆ ಆಯುಧವಾಗಿದೆ. ಇದನ್ನರಿತ ಗ್ರಾಮಸ್ಥರು ಕೊರೊನಾ ಬಂದ ಹಿನ್ನೆಲೆ ಹಳ್ಳಿ ಬಿಟ್ಟು ಜಮೀನು ಸೇರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಕೊರೊನಾಗೆ ಸದ್ಯ ಔಷಧಿ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ. ಮಾಸ್ಕ್ ಧರಿಸುವುದು, …

Read More »

ಕೊರೊನಾ ಸೋಂಕಿತ ಮಕ್ಕಳಲ್ಲಿ ನಗು ತರಿಸಿದ ಕೋವಿಡ್-19 ವೈದ್ಯ ………..

ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಕೊರೊನಾ ರುದ್ರ ತಾಂಡವಾಡುತ್ತಿದೆ. ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಿಗೆ ಕೋವಿಡ್ ಎಂಬ ಬೇತಾಳ ಬೆನ್ನು ಬಿದ್ದಿದ್ದಾನೆ. ಹೀಗಾಗಿ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 300ರ ಸಮೀಪ ಬಂದು ನಿಂತಿದೆ. ಈ 300ರಲ್ಲಿ ವೃದ್ಧರು, ಯುವಕರು, ಗರ್ಭಿಣಿ, ಬಾಣಂತಿಯರು ಹೀಗೇ ಎಲ್ಲಾ ವಯಸ್ಸಿನವರು ಇದ್ದಾರೆ. ಇದರ ಜೊತೆಗೆ ಹಾಲು ಕುಡಿಯುವ ಕಂದಮ್ಮಗಳಿಂದ 10 ವರ್ಷದ ವರೆಗಿನ ಮಕ್ಕಳು ಅತೀ ಹೆಚ್ಚಾಗಿರುವುದು, ಬಹಳಷ್ಟು ನೋವಿನ ಸಂಗತಿ.   ಜಿಲ್ಲೆಯಲ್ಲಿ ಇದುವರೆಗೆ 55ಕ್ಕೂ …

Read More »

ಈಜಲು ನದಿಗೆ ದುಮುಕಿದ ಯುವಕ ನಾಪತ್ತೆ…………

ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದಣ್ಣ ಗೊಂಡಿಕಾರ (35) ನಾಪತ್ತೆಯಾಗಿರುವ ಯುವಕ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಕಾರಣ ಇಬ್ಬರು ಸ್ನೇಹಿತರೊಂದಿಗೆ ಚಂದಣ್ಣ ಗ್ರಾಮದ ಹತ್ತಿರದ ಕೃಷ್ಣಾನದಿಗೆ ಈಜಲು ತೆರಳಿದ್ದ. ಮೂವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಚಂದಣ್ಣ ನದಿಯಿಂದ ಹೊರ ಬರದೆ ನಾಪತ್ತೆಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ …

Read More »

ಮಹಾರಾಷ್ಟ್ರದಿಂದ ಬಂದ ಮಕ್ಕಳಿಗೂ ಕೊರೊನಾ ಪಾಸಿಟಿವ್………

ಯಾದಗಿರಿ: ಮಹಾರಾಷ್ಟ್ರದಿಂದ ಯಾದಗಿರಿಗೆ ಬಂದಿರುವ ಇಬ್ಬರು ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿದೆ. ರೋಗಿ ಸಂಖ್ಯೆ-1733, 06 ವರ್ಷದ ಹೆಣ್ಣು ಮಗು ಮತ್ತು ರೋಗಿ ಸಂಖ್ಯೆ-1743, 09 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಮೊದಲ ಹಂತದ ಮಾಹಿತಿ ಸಂಗ್ರಹಣೆ ಸಂದರ್ಭದಲ್ಲಿ ಇಬ್ಬರು ಮಕ್ಕಳು ಮಹಾರಾಷ್ಟ್ರದಿಂದ ಬಂದಿರುವುದು ಎಂಬುದು ತಿಳಿದುಬಂದಿದೆ. ಇಬ್ಬರ ಸಮಗ್ರ ಟ್ರಾವೆಲ್ ಹಿಸ್ಟರಿ ಪತ್ತೆಗಾಗಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಸದ್ಯ ಇಬ್ಬರು …

Read More »

ಎರಡು ವರ್ಷದ ಮಗುವಿಗೆ ಕೊರೊನಾ- ಯಾದಗಿರಿಯಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ

ಯಾದಗಿರಿ: ತಾಲೂಕಿನಲ್ಲಿ ಇಂದು ಎರಡು ವರ್ಷದ ಗಂಡು ಮಗುವಿಗೂ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಜಿಲ್ಲೆಯ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 11ಕ್ಕೇರಿದೆ. ತಾಲೂಕಿನ ಚಿನ್ನಕಾರ ಗ್ರಾಮದ ಗುರುಮಿಠಕಲ್‍ನ ರೋಗಿ ನಂ.1,256 ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟದೆ. ಈ ಹಿನ್ನೆಲೆ ಮಗುವಿನ ತಂದೆ, ತಾಯಿಯರ ಸ್ಯಾಂಪಲ್ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮೇ 14ರಂದು ತಂದೆ ತಾಯಿ ಮಗುವಿನೊಂದಿಗೆ ಖಾಸಗಿ ವಾಹನದ ಮೂಲಕ ಮುಂಬೈನಿಂದ ಯಾದಗಿರಿಗೆ ಬಂದಿದ್ದರು. ಇವರೊಟ್ಟಿಗೆ …

Read More »

ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ತಡರಾತ್ರಿ ದಿಢೀರ್ ಪ್ರತಿಭಟನೆ………..

ಯಾದಗಿರಿ: ವಲಸೆ ಕಾರ್ಮಿಕರನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರನ್ನು ಪೊಲೀಸರು ಬಲವಂತವಾಗಿ ಚದುರಿಸಿದ ಘಟನೆ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ತಡರಾತ್ರಿ ಮಹಿಳೆಯರು ಮತ್ತು ಸ್ಥಳೀಯರಿಂದ ಈ ಪ್ರತಿಭಟನೆ ನಡೆದಿದೆ. ಪಟ್ಟಣದ ಪೋಸ್ಟ್ ಆಫೀಸ್ ಪಕ್ಕ ಸ.ಹಿ.ಪ್ರಾ ಶಾಲೆಯಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರಿಸಿದೆ. ಆದರೆ ಶಾಲೆಯ ಅಕ್ಕಪಕ್ಕದಲ್ಲಿ ಹೆಚ್ಚು ಜನವಸತಿ ಇರುವ ಹಿನ್ನೆಲೆ ಮತ್ತು ಕೆಲವೊಂದು ಮನೆಗಳು ಶಾಲೆಯ …

Read More »

ಕ್ವಾರಂಟೈನ್‍ನಲ್ಲಿರೋ ಮಗನಿಗಾಗಿ ಓಡೋಡಿ ಬುತ್ತಿತಂದ ತಾಯಿ……..

ಯಾದಗಿರಿ: ತಾಯಿ ಈ ಜಗದ ಕಾಣಿಸುವ ದೇವರು, ತಾನು ಹೆತ್ತ ಕೂಸುಗಳು ಮುದುಕರಾದ್ರು ತಾಯಿಗೆ ಅವರು ಯಾವಾಗಲೂ ಹಸುಗೂಸುಗಳೇ. ಇಂತಹ ತಾಯಿ ಹೃದಯ ಎಲ್ಲಕ್ಕಿಂತಲೂ ಶ್ರೇಷ್ಠ ಅನ್ನೋದು ಮತ್ತೊಮ್ಮೆ ನಿಜವಾಗಿದೆ. ಅಧಿಕಾರಿಗಳ ಮತ್ತು ಕೊರೊನಾ ಭೀತಿಯ ನಡುವೆಯೂ ಕ್ವಾರಂಟೈನ್ ನಲ್ಲಿ ತನ್ನ ಮಗ ಎರಡು ದಿನದಿಂದ ಉಪವಾಸವಿರುವುದನ್ನು ತಿಳಿದ ತಾಯಿಯೊಬ್ಬಳು, ಕ್ವಾರಂಟೈನ್ ಕೇಂದ್ರ ದತ್ತ ಓಡಿಬಂದು ಬುತ್ತಿತಂದು ಹೆತ್ತ ಕರಳಿನ ಮಹತ್ವವನ್ನು ತಿಳಿಸಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದ …

Read More »