Breaking News

ರಾಯಚೂರು

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ ಕಂದಕೂರು ಬಳಿ ನಡೆದಿದೆ. ಮಾನ್ವಿ  ತಾಲೂಕಿನ ಕುರ್ಡಿ ಗ್ರಾಮದ ದಾಸರಿ ಉಮಾವತಿ (35), ದಾಸರಿ ರತ್ನಮ್ಮ (26) ಮಹೇಶ (24) ಮತ್ತು ಶಿವಾನಂದ (28) ಮೃತ ದುರ್ದೈವಿಗಳು. ಸಂಬಂಧಿಕರ ಮದುವೆಗೆ ತೆರಳಿದ್ದವರು ಮಧ್ಯಾಹ್ನ ಸ್ನಾನಕ್ಕೆ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಆಂಧ್ರಪ್ರದೇಶ ಕರ್ನಾಟಕ ಗಡಿ ಭಾಗದ ರಾಜೊಳ್ಳಿಬಂಡಾ …

Read More »

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

ರಾಯಚೂರು: ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ, ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ  ಗೆಲುವು ಖಚಿತ ಅಂತ ಮಾಜಿ ಸಚಿವ ಬಿ.ಶ್ರೀರಾಮುಲು  ಹೇಳಿದ್ದಾರೆ. ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಡಳಿತ ವ್ಯವಸ್ಥೆ ಸರಿಯಿಲ್ಲ ಅನ್ನೋದನ್ನ ಇದು ತೋರಿಸುತ್ತೆ. ರಾಜ್ಯ ಸರ್ಕಾರದ ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದಕ್ಕೆ ಅಸಮಾಧಾನದಲ್ಲಿದ್ದಾರೆ. ಎರಡು ಉಪಚುನಾವಣೆಯಲ್ಲಿ ಬಿಜೆಪಿ …

Read More »

ಪೊದೆಯಲ್ಲಿ ಮಲಗಲು ಸಹಕರಿಸದ ಮಹಿಳೆಯ ಕೊಲೆ, ಜೀವಾವಧಿ ಶಿಕ್ಷೆ

ರಾಯಚೂರ: ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಆದೇಶ ಹೊರಡಿಸಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಯರಡೋಣ ಗ್ರಾಮದ ಆರೋಪಿ ದೇವರಾಜ ಅಕ್ರಮ ಸಂಬಂಧ ಹೊಂದಿದ್ದ. ಇದೀಗ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಆರೋಪಿ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಮೃತ ಮಹಿಳೆ ಪತಿ ಮರಣ …

Read More »

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ರಾಯಚೂರು: 2024ರಲ್ಲಿ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಲಿಂಗಸುಗೂರು  ಪೀಠ ತೀರ್ಪು ನೀಡಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ಆರೋಪಿ ದೇವರಾಜ ವಿರುದ್ಧ ಆರೋಪಿ ಸಾಬೀತಾದ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ತೀರ್ಪು ನೀಡಿ, ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. …

Read More »

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

ರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ  ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಭಕ್ತರು ರಾಯರ ವೃಂದಾವನ ದರ್ಶನ ಪಡೆಯುತ್ತಿದ್ದಾರೆ. ಮಠದ ಯಾವುದೇ ಬಾಗಿಲು ಬಂದ್ ಮಾಡಿಲ್ಲ. ಆದ್ರೆ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಒಂದೆಡೆ ಹೋಳಿ ಹುಣ್ಣಿಮೆ ಹಾಗೂ ಇನ್ನೊಂದೆಡೆ ಚಂದ್ರ ಗ್ರಹಣ ಹಿನ್ನೆಲೆ ಭಕ್ತರ ಸಂಖ್ಯೆ ವಿರಳವಾಗಿದೆ. ಮಂತ್ರಾಲಯ ಮಠದಲ್ಲಿ  ಬೆಳಿಗ್ಗೆ ರಾಯರ ವೃಂದಾವನಕ್ಕೆ ಜಲಾಭಿಷೇಕ ಹೊರತು ಪಡಿಸಿ ಬೇರೆ ಪೂಜೆ, ನೈವೇದ್ಯ …

Read More »

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆಹಾನಿಯಾಗಿದೆ. ಹೆಚ್.ಸಿದ್ದಾಪುರ ಗ್ರಾಮದ ರೈತ ಕೃಷ್ಣಾಗೆ ಸೇರಿದ 7 ಎಕರೆ ಸಜ್ಜೆ ಬೆಳೆ ಸಂಪೂರ್ಣ ನೆಲಕ್ಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ನಷ್ಟದಿಂದ ರೈತ ಕಂಗಾಲಾಗಿದ್ದಾರೆ. ನೆಲಕ್ಕಚ್ಚಿದ ಬೆಳೆಯನ್ನ ಎತ್ತಿನಿಲ್ಲಿಸಿ ಉಳಿಸಿಕೊಳ್ಳಲು …

Read More »

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

ರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ ಪದವಿಗಳನ್ನ ಪ್ರದಾನ ಮಾಡಲಾಯಿತು. ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಇತರ ಗಣ್ಯರಿಗೆ ವಿವಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಡಾಕ್ಟರೇಟ್ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಟರಾದ ವಿನಯ್ ರಾಜಕುಮಾರ್, ಯುವರಾಜಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್ …

Read More »

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

ರಾಯಚೂರು: ಬಾಗಲಕೋಟೆಯಲ್ಲಿ  ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ  ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಯಚೂರಿನ  ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ …

Read More »

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

ರಾಯಚೂರು: ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದೆ. ಫೆ.18ರಿಂದ 24ರವರೆಗೆ ಏಳು ದಿನಗಳ ಕಾಲ ರಾಯರ ಪಟ್ಟಾಭಿಷೇಕ, ವರ್ಧಂತಿ ಉತ್ಸವಗಳು ಸೇರಿ ನಾನಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗುರುವೈಭವೋತ್ಸವಕ್ಕೆ ಇಂದು (ಫೆ.18) ಚಾಲನೆ ಸಿಕ್ಕಿದ್ದು, ನಾಳೆ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ ಜರುಗಲಿದೆ. ರಾಘವೇಂದ್ರ ತೀರ್ಥರ ಶಿಷ್ಯ ಯತಿ ಯೋಗಿಂದ್ರ ತೀರ್ಥರ ಪಾರ್ಥನೆಯಂತೆ ಮೂಲ ಪಾದುಕೆಗಳ ಪಟ್ಟಾಭಿಷೇಕ ನೆರವೇರಿಸಲಾಗುತ್ತದೆ. ಮಠದ ಪ್ರಸ್ತುತ ಪೀಠಾಧಿಪತಿ …

Read More »

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಕೈಯಲ್ಲಿ ಕೊಡಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಕಳೆದ 20 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ, ಜಾನುವಾರುಗಳು ಪರಿತಪಿಸುವಂತಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಕುಡಿಯುವ ನೀರು …

Read More »