ರಾಯಚೂರು: ನಾಳೆಯಿಂದ ಜುಲೈ 22 ರವರೆಗೆ ರಾಯಚೂರು ನಗರ ಮತ್ತು ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ತುರ್ತು ಹಾಗೂ ಅಗತ್ಯ ಸೇವೆಗಳಾದ ಕಿರಾಣಿ , ಔಷಧಿ ಅಂಗಡಿ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆ ಸಂಪೂರ್ಣ ಬಂದ್ ಇರುತ್ತದೆ. ಜಿಲ್ಲೆಯ ಉಳಿದ ತಾಲೂಕುಗಳಾದ ದೇವದುರ್ಗ, ಲಿಂಗಸುಗೂರು, ಸಿರವಾರ, ಮಸ್ಕಿ ಹಾಗೂ ಮಾನ್ವಿಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಎಲ್ಲದಕ್ಕೂ ಅವಕಾಶ ಇದ್ದು …
Read More »ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್ಡೌನ್……….
ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …
Read More »ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,
ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …
Read More »ರಾಯಚೂರಿನ ಸರ್ಕಾರಿ ಕಚೇರಿಗಳಿಗೆ ಎದುರಾದ ಕೊರೊನಾ ಭೀತಿ
ರಾಯಚೂರು: ನಗರದ ಜಿಲ್ಲಾ ಪಂಚಾಯತ್ ಕಚೇರಿಗೆ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಕೊರೊನಾ ಸೋಂಕಿತನ ಸಂಪರ್ಕಿತನೋರ್ವ ಕಚೇರಿ ತುಂಬಾ ಓಡಾಡಿರುವ ವಿಷಯ ತಿಳಿದ ಬಳಿಕ ಕಚೇರಿ ಸಿಬ್ಬಂದಿ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪಂಚಾಯತಿ ಕಚೇರಿ ಹಾಗೂ ಆವರಣವನ್ನ ಡಿಸ್ ಇನ್ಫೆಕ್ಷನ್ ಮಾಡಲಾಗಿದೆ. ಸೋಂಕಿತನ ಸಂಪರ್ಕಿತ ಬಂದು ಹೋದಮೇಲೆ ರಾಸಾಯನಿಕ ಸಿಂಪಡಣೆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಚೇರಿಯ ಎಲ್ಲಾ ಕೊಠಡಿ, ಸಭಾಂಗಣದಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಅಗ್ನಿಶಾಮಕ …
Read More »ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’
ರಾಯಚೂರು: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರತಾಪಗೌಡ ಕೂಡಾ ಕಾರಣಿಕರ್ತರು. ‘ಮಸ್ಕಿ ಕ್ಷೇತ್ರದ ರೈತರು ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಸ್ಕಿ ತಾಲ್ಲೂಕು ಬುದ್ದಿನ್ನಿ ಗ್ರಾಮದಲ್ಲಿ ಬುಧವಾರ ಕೃಷ್ಣಾ ಜಲಭಾಗ್ಯ ನಿಗಮ ನಿಯಮಿತದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. 5-ಎ ಕಾಲುವೆಯು …
Read More »ಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ…………ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯ
ರಾಯಚೂರು: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದ್ದು, ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯ ಮಾಡಿದ್ದಾರೆ. ಸಿಂಧನೂರಿನ ಶ್ರೀಕೃಷ್ಣದೇವರಾಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಯಿಂದಾಗಿ ಈ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದ 1,2,3ನೇ ಕೊಠಡಿಯ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗಿದ್ದು, ಹಳೆಯ ಪಠ್ಯ ಕ್ರಮದ ಪ್ರಶ್ನೆ ಪತ್ರಿಕೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು. ಪರೀಕ್ಷೆ ಆರಂಭವಾಗಿ ಅರ್ಧಗಂಟೆ ಬಳಿಕ ಪ್ರಶ್ನೆ ಪತ್ರಿಕೆ …
Read More »ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದಕುಖ್ಯಾತ ಬೈಕ್ ಕಳ್ಳ
ರಾಯಚೂರು: ಬೈಕ್ ಕದ್ದು ಹುಚ್ಚನಂತೆ ನಟಿಸಿ ತಪ್ಪಿಸಿಕೊಳ್ಳುತ್ತಿದ್ದ ವಿಲಕ್ಷಣ ವರ್ತನೆಯ ಕುಖ್ಯಾತ ಬೈಕ್ ಕಳ್ಳನನ್ನು ನಗರದ ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 3.40 ಲಕ್ಷ ರೂ. ಬೆಲೆ ಬಾಳುವ 15 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಮಾನ್ವಿ ತಾಲೂಕಿನ ಹರವಿ ಗ್ರಾಮದ ತಾಯಪ್ಪ ಬಂಧಿತ ಆರೋಪಿ. ನೇತಾಜಿ ನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬೈಕ್ ಕದಿಯುವ ವೇಳೆ ಹುಚ್ಚನ ರೀತಿಯಲ್ಲಿ ವರ್ತನೆ …
Read More »ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ,ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟ……
ರಾಯಚೂರು: ಜಿಲ್ಲೆಯ ಸಾವಿರಾರು ರೈತರ ಜೀವನಾಡಿ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ. ಆದರೆ ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ ಎದುರಾಗಿದೆ. ನೂರಾರು ಕೋಟಿ ರೂಪಾಯಿ ಖರ್ಚುಮಾಡಿ ಅಧುನೀಕರಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ರಾಯಚೂರಿನ ದೇವದುರ್ಗ, ಲಿಂಗಸುಗೂರು ತಾಲೂಕುಗಳ ರೈತರ ಬದುಕಿನ ಚಿತ್ರಣವನ್ನೇ ಬದಲಿಸಿದ ನೀರಾವರಿಯ ಜೀವನಾಡಿಯಾದ ಕಾಲುವೆ ಇದಾಗಿದ್ದು, ಆಧುನೀಕರಣ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗುತ್ತಿದೆ. …
Read More »ರಾಯಚೂರಿನಲ್ಲಿ ಸೂರ್ಯಗ್ರಹಣ ವೀಕ್ಷಣೆ: ಬಿಸ್ಕೆಟ್ ತಿಂದು ಮೌಢ್ಯಕ್ಕೆ ಬ್ರೇಕ್……..
ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರಿಗಾಗಿ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿ, ಶಿಕ್ಷಣ ಕಿರಣ ಸಂಸ್ಥೆ, ಸೂರ್ಯ ಕಿರಣ ಸಂಸ್ಥೆಯಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಸೂರ್ಯಗ್ರಹಣ ವೇಳೆ ಮೂಢನಂಬಿಕೆ ಹಾಗೂ ಮೂಢ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರಿಗೆ ಬಿಸ್ಕೆಟ್ ನೀಡಲಾಗಿದೆ. ಗ್ರಹಣ ಕುರಿತ ವೈಜ್ಞಾನಿಕ ವಿಚಾರಗಳ ಮಾಹಿತಿ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ನೀಡುವ ಮೂಲಕ ಸೂರ್ಯಗ್ರಹಣ …
Read More »ರಾಯಚೂರಿನ ಅಂತರರಾಜ್ಯ ಚೆಕ್ಪೋಸ್ಟ್ನಲ್ಲಿ ವಸೂಲಿ ದಂಧೆ- ಹಣ ಕೊಟ್ರೆ ಎಲ್ಲರಿಗೂ ಎಂಟ್ರಿ……
ರಾಯಚೂರು: ಜಿಲ್ಲೆಯಲ್ಲಿ 50, 100 ರೂಪಾಯಿ ಆಸೆಗೆ ಅಂತರರಾಜ್ಯ ಚೆಕ್ಪೋಸ್ಟ್ನಲ್ಲಿನ ಸಿಬ್ಬಂದಿ ಕೊರೊನಾ ವೈರಸ್ ಹರಡಿಸುತ್ತಿದ್ದಾರಾ ಎನ್ನುವ ಆತಂಕ ಮೂಡಿದೆ. ಆಂಧ್ರ ಪ್ರದೇಶದಿಂದ ಬರುವವರು ಚೆಕ್ಪೋಸ್ಟ್ನಲ್ಲಿನ ಪೊಲೀಸರಿಗೆ 100 ರೂ. ಕೊಟ್ಟರೆ ಸಾಕು ಹೋಂ ಕ್ವಾರಂಟೈನ್ ಭೀತಿಯೇ ಇಲ್ಲ. ಕೊರೊನಾ ಹರಡುವಿಕೆ ತಡೆಗಾಗಿ ಮಾಡಿರುವ ಚೆಕ್ಪೋಸ್ಟ್ ಸಿಬ್ಬಂದಿಯೇ ರಾಯಚೂರಿನಲ್ಲಿ ಕೊರೊನಾ ಹರಡುವುದಕ್ಕೆ ಕಾರಣರಾಗುತ್ತಿದ್ದಾರೆ. ಜಿಲ್ಲೆಯ ಗಿಲ್ಲೆಸುಗೂರು ಚೆಕ್ಪೋಸ್ಟ್ನಲ್ಲಿ ಪೋಲೀಸರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿ ಕೃತ್ಯ ಈಗ ಬಟಾಬಯಲಾಗಿದೆ. …
Read More »