ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್‍ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್ ಮಾಲೀಕನೋರ್ವ ತನ್ನ ಅಂಗಡಿಯಲ್ಲಿನ ಮದ್ಯವನ್ನು ಹಿಂಬಾಗಿಲಿನಿಂದ ತಾನೇ ಕದ್ದು ಮಾರಾಟ ಮಾಡಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾನೆ ಇಲ್ಲಿನ ಕೋಹಿನೂರ್ ಬಾರ್ ಅಂಡ ರೆಸ್ಟೋರೆಂಟ್ ನಲ್ಲಿ ಮದ್ಯ ಹಾಗೂ ನಗದು ಹಣವನ್ನು ತೆಗೆಯುತ್ತಿದ್ದ ವೇಳೆ …
Read More »ರಾಯಚೂರು: ಕೊರೊನಾ ಭೀತಿಗೆ ತಾಯಿಯನ್ನ ಕಳೆದುಕೊಂಡು ತಬ್ಬಲಿಗಳಾದ ಮಕ್ಕಳು
ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜಿಲ್ಲೆಯ ಸಿಂಧನೂರಿಗೆ ಪ್ರಯಾಣಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಕೂಲಿಕಾರ್ಮಿಕ ಮಹಿಳೆ ಗಂಗಮ್ಮಳ ಇಬ್ಬರು ಮಕ್ಕಳು ಈಗ ದಿಕ್ಕುಕಾಣದ ತಬ್ಬಲಿಗಳಾಗಿದ್ದಾರೆ. ಮಕ್ಕಳಾದ ಮಂಜುನಾಥ್ ಹಾಗೂ ಪ್ರೀತಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ. ಬೆಂಗಳೂರಿನಿಂದ ಬರುವಾಗ ಬಳ್ಳಾರಿಯಲ್ಲಿ ಅನಾರೋಗ್ಯದಿಂದ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಗಂಗಮ್ಮ ಇಡೀ ಕುಟುಂಬಕ್ಕೆ ಆಸರೆಯಾಗಿದ್ದಳು. ಬೆಂಗಳೂರಿನ ಕೆಂಗೇರಿಯ ಗ್ಲೋಬಲ್ ವಿಲೇಜ್ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಗಂಗಮ್ಮಳಿಗೆ ಅಪಾರ್ಟ್ ಮೆಂಟ್ ಮಾಲೀಕರು ಯಾವುದೇ ಸಹಾಯ ಮಾಡಿಲ್ಲ. …
Read More »ರಾಮನವಮಿಗೆ ತಟ್ಟದ ಲಾಕ್‍ಡೌನ್ ಬಿಸಿ- ಮುಗಿಬಿದ್ದು ದರ್ಶನ ಪಡೆದ ರಾಮ ಭಕ್ತರು
ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಎಲ್ಲಾ ದೇವಾಲಯಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ರಾಮನವಮಿಗೆ ಮಾತ್ರ ಲಾಕ್‍ಡೌನ್ ಬಿಸಿ ತಟ್ಟಲಿಲ್ಲ. ಬೆಳಗ್ಗೆಯಿಂದ ರಾಮ ಭಕ್ತರು ನಿರಂತರವಾಗಿ ದರ್ಶನ ಪಡೆದಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರಲ್ಲಿ ಭಕ್ತರು ಯಾವ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಮುಗಿಬಿದ್ದು ದರ್ಶನ ಪಡೆದಿದ್ದಾರೆ. ಮಂದಿರದ ಮುಖ್ಯದ್ವಾರಕ್ಕೆ ಬೀಗ ಹಾಕಿದ್ದರೂ ಪಕ್ಕದ ಚಿಕ್ಕ ದ್ವಾರದಿಂದ ಭಕ್ತರ ಪ್ರವೇಶಕ್ಕೆ ಅರ್ಚಕರು ಅನುವು ಮಾಡಿಕೊಟ್ಟಿದ್ದಾರೆ …
Read More »ಬೆಂಗ್ಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವು- ಭಯಭೀತರಾಗಿರುವ ಗ್ರಾಮಸ್ಥರು
ರಾಯಚೂರು: ಬೆಂಗಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆ ಮೃತ ವ್ಯಕ್ತಿಯ ಮನೆ ಹತ್ತಿರ ಸುಳಿಯಲು ಗ್ರಾಮಸ್ಥರು ಹಾಗೂ ಸಂಬಂಧಿಕರು ಹೆದರಿಕೊಂಡಿರುವ ಘಟನೆ ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ತಳವಾರ (54) ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೇವದುರ್ಗದ ಸೋಮನಮರಡಿ ಗ್ರಾಮದಲ್ಲಿ ತನ್ನ ಮಗಳ ಮನೆಗೆ ಬಂದಿದ್ದರು. ಬಳಿಕ ತನ್ನ ಊರಾದ ಲಿಂಗಸುಗೂರಿನ ರೋಡಲಬಂಡಾಗೆ ಬಂದು ಎರಡು ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ವ್ಯಕ್ತಿ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾನೆಂದು ಭಾವಿಸಿರುವ …
Read More »ರಾಯಚೂರು: ಐದು ದಿನಗಳಿಂದ ಊಟಕ್ಕಾಗಿ ಪರದಾಡಿದ ಬೀದಿಬದಿಯ ಅಲೆಮಾರಿ
ರಾಯಚೂರು: ಐದು ದಿನಗಳಿಂದ ಊಟವಿಲ್ಲದೆ ಪರದಾಡಿದ ಬೀದಿಬದಿಯ ಅಲೆಮಾರಿ ವ್ಯಾಪಾರಿಗಳು ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಹೊಟ್ಟೆಪಾಡಿಗೆ ದುಡಿಯಲು ಬಂದ ಅಲೆಮಾರಿಗಳಿಗೆ ಕೆಲಸವಿಲ್ಲದೆ ಊಟವೂ ಇಲ್ಲದಂತಾಗಿದೆ. ಊಟ ನೀಡುವಂತೆ ಕೇಳಿಕೊಂಡು ತಹಶೀಲ್ದಾರ್ ಕಚೇರಿಗೆ ಮಹಿಳೆಯರು ನುಗ್ಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಐದಾರು ದಿನಗಳಿಂದ ವ್ಯಾಪಾರವೇ ಇಲ್ಲದಾಗಿ ಊಟವೂ …
Read More »ಜನರ ಓಡಾಟಕ್ಕೆ ಬ್ರೇಕ್ ಹಾಕಲು ಡ್ರೋಣ್ ಬಳಕೆ- ರಾಯಚೂರು ಪೊಲೀಸರ ಹೊಸ ಪ್ರಯತ್ನ
ರಾಯಚೂರು: ಎಷ್ಟು ಹೇಳಿದರೂ ಜನ ಹೊರಗಡೆ ಓಡಾಡುವುದನ್ನ ಕಡಿಮೆ ಮಾಡುತ್ತಿಲ್ಲ. ಹೀಗಾಗಿ ಜನರ ಓಡಾಟ ತಡೆಯಲು ರಾಯಚೂರಿನಲ್ಲಿ ಡ್ರೋಣ್ ಬಳಕೆ ಮಾಡಲಾಗುತ್ತಿದೆ. ರಾಯಚೂರು ಪೊಲೀಸರಿಂದ ವಿನೂತನ ಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಬಡಾವಣೆ, ಓಣಿಗಳಲ್ಲಿ ಜನ ಗುಂಪುಗುಂಪಾಗಿ ಸೇರುವುದನ್ನ ತಡೆಯಲು ಡ್ರೋಣ್ ಬಳಕೆ ಮಾಡಲಾಗುತ್ತಿದೆ. ಡ್ರೋಣ್ ಶಬ್ದಕ್ಕೆ ಹೆದರಿ ಜನ ಚದುರಿ ಹೋಗುತ್ತಿದ್ದಾರೆ. ಹೋಗದಿರುವವರನ್ನ ಪೊಲೀಸರು ಹಿಡಿದುಕೊಂಡು ಹೋಗುತ್ತಾರೆ. ಜಿಲ್ಲೆಯಲ್ಲಿ 50 ಚೆಕ್ ಪೋಸ್ಟ್ ಮಾಡಿದ್ದರೂ ಜನ ಸಂದಣಿ ನಿಯಂತ್ರಣವಾಗುತ್ತಿರಲಿಲ್ಲ. ಕೊರೊನಾ …
Read More »ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು.
ರಾಯಚೂರು: ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಪ್ರತಿ ವರ್ಷದಂತೆ ಹುಟ್ಟುಹಬ್ಬದ ದಿನ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಜಗ್ಗೇಶ್ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕೊರೊನಾ ಇದು ಮಾನವ ನಿರ್ಮಿತ ವೈರಾಣು. ಅಮೆರಿಕ, ರಷ್ಯಾ ಹಾಗೂ ಚೀನಾ ನಂಬರ್ ಒನ್ ಸ್ಥಾನಕ್ಕಾಗಿ ನಡೆದಿರುವ ಬಯೋಲಾಜಿಕಲ್ ವಾರ್ ಇದು. ಪ್ರಕೃತಿ ಆಗಾಗ ಇಂತಹ ರೋಗಗಳಿಂದ ಮಾನವನಿಗೆ …
Read More »ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ.
ರಾಯಚೂರು: ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಜಿಲ್ಲಾಧಿಕಾರಿ ಕಚೇರಿಯ ಆವಾಕ, ಜಾವಕ ವಿಭಾಗಗಳನ್ನ ಕಚೇರಿಯಿಂದ ಹೊರಕ್ಕೆ ಇಡಲಾಗಿದೆ. ವಾಹನ ಪಾರ್ಕಿಂಗ್ ಬಳಿ ಟೇಬಲ್ ಹಾಕಿಕೊಂಡು ಸಿಬ್ಬಂದಿ ಕುಳಿತಿದ್ದಾರೆ. ರಸ್ತೆಯಲ್ಲೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಬ್ಬಂದಿ ಮರದ ಕೆಳಗೆ ಫೈಲ್ ಗಳನ್ನ ಹಿಡಿದು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆದೇಶದ ಮೇರೆಗೆ ಎರಡು ವಿಭಾಗ ಕಚೇರಿಯಿಂದ ಹೊರಗೆ …
Read More »ಕರೊನಾ ವೈರಸ್ ಭೀತಿ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಪಂಚಾಮೃತ ವಿತರಣೆ ನಿಷೇಧಿಸಲಾಗಿದೆ.
ರಾಯಚೂರು: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಪಂಚಾಮೃತ ವಿತರಣೆ ನಿಷೇಧಿಸಲಾಗಿದೆ. ಸ್ವಚ್ಛತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಭಕ್ತರಿಗೆ ವಿತರಿಸುವ ಪಂಚಾಮೃತ ನಿಲ್ಲಿಸಲಾಗಿದೆ. ಎಲ್ಲ ವೃಂದಾವನಗಳಿಗೂ ಎಂದಿನಂತೆ ಪಂಚಾಮೃತಾಭೀಷೆಕ ನಡೆಯುತ್ತದೆ. ಆದರೆ ಶನಿವಾರದಿಂದ ಭಕ್ತರಿಗೆ ವಿತರಿಸುವುದನ್ನು ಮಾತ್ರ ನಿಲ್ಲಿಸಲಾಗಿದೆ. ಬೆಳಗ್ಗೆ ಹಾಗೂ ಸಂಜೆಯ ಪ್ರಸಾದ ಹಾಗೂ ದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ. ಜನತೆ ಮಠಕ್ಕೆ ಬರಬಾರದು ಎನ್ನುವ ವದಂತಿಗಳು ಹಬ್ಬುತ್ತಿವೆ. ಇದಾವುದಕ್ಕೂ ಕಿವಿಗೊಡದೆ, ಭಕ್ತರು ರಾಯರ ದರ್ಶನಕ್ಕೆ …
Read More »ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್‍ಗೂ ತಟ್ಟಿದ ಕೊರೊನಾ ಬಿಸಿ
ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ಇಂದಿರಾ ಕ್ಯಾಂಟೀನಿಗೂ ತಟ್ಟಿದ್ದು, ಪ್ರತಿ ದಿನ ನೂರಾರು ಜನರಿಂದ ತುಂಬಿರುತ್ತಿದ್ದ ಕ್ಯಾಂಟೀನ್ ಗಳು ಇಂದು ಜನರಿಲ್ಲದೆ ಬಣಗುಡುತ್ತಿವೆ. ಕೂಲಿ ಕಾರ್ಮಿಕರು, ಪ್ರಯಾಣಿಕರು, ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವುದರಿಂದ ಕ್ಯಾಂಟೀನಿಗೆ ಬರುವವರ ಸಂಖ್ಯೆ ಕೂಡ ಕಡಿಮೆಯಾಗಿದೆ. ರಾಜ್ಯಾದ್ಯಂತ ಬಂದ್ ಇರುವುದರಿಂದ ಜನ ಹೋಟೆಲ್ ಗಳಿಗೆ ಬರುವುದನ್ನು ಕಡಿಮೆ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ 9 ಗಂಟೆಗೆ 500 ಟೋಕನ್ ಗಳು ಖಾಲಿಯಾಗುತ್ತಿದ್ದವು ಆದರೆ ಇದೀಗ 50 …
Read More »