Breaking News

ರಾಯಚೂರು

ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ

ರಾಯಚೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ನೇತಾಜಿ ನಗರದ ಮನೆಯೊಂದರಲ್ಲಿ ನಡೆದಿದೆ. ಶಂಕುದ್ದೀನ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯಲ್ಲಿದ್ದ ಅಂಜುಮ್, ನಪೀಜಾ ಬಾನು ಹಾಗೂ ಪದ್ಮಾವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ದಲಿತ ಕುಟುಂಬದ ಮೇಲೆ ಹಲ್ಲೆ : ಪೊಲೀಸರ ನಡೆ ಖಂಡಿಸಿ ಇಂದು …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »

ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು – ಪೊಲೀಸರ ಮಧ್ಯೆ ವಾಗ್ವಾದ; ಪಿಎಸ್‌ಐ ಕಾಲರ್ ಎಳೆದು ಹಲ್ಲೆ ಮಾಡಿದ ಶಾಸಕರ ಪುತ್ರ

ರಾಯಚೂರು: ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್​ ರಾಜ್​​ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್‌ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ.   ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ …

Read More »

ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು.   ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್‌ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ …

Read More »

ಧರ್ಮದಲ್ಲಿ ರಾಜಕೀಯ ಸಲ್ಲದು: ಸುಬುಧೇಂದ್ರ ಶ್ರೀ

ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು.   ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು. ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ …

Read More »

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ‌ಸರ್ವೇಗಳು ಕೂಡ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಆಗ್ತಾ ಇವೆ. ಇದರ ಬೆನ್ನಲ್ಲೇ ರಾಯಚೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಅಭ್ಯರ್ಥಿಯ ರಾಜಕೀಯ ಭವಿಷ್ಯ ನುಡಿದಿದ್ದಾನೆ ಓರ್ವ ವ್ಯಕ್ತಿ. ಹೌದು, ನಾಗರ ಹಾವು ಹಿಡಿದು ಕುತ್ತಿಗೆಗೆ ಹಾಕೊಂಡು ಚುನಾವಣಾ ಭವಿಷ್ಯ ನುಡಿದ್ದಾನೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ …

Read More »

14 ತಿಂಗಳ ಮಗುವಿನ ನೇತ್ರದಾನ: ಮಗನ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ರಾಯಚೂರು ದಂಪತಿ

ರಾಯಚೂರು: 14 ತಿಂಗಳ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.   ಗೆಜ್ಜಲಗಟ್ಟಾ ಗ್ರಾಮದ ನಿವಾಸಿ, ಗಣಿ ಕಂಪನಿ ನೌಕರ ಅಮರೇಗೌಡ ಕಾಮರೆಡ್ಡಿ ಮತ್ತು ವಾಣಿ ದಂಪತಿಯು ತಮ್ಮ ಮೂರನೇ ಪುತ್ರ 14 ತಿಂಗಳ ಬಸವಪ್ರಭುವಿನ ಎರಡೂ ಕಣ್ಣುಗಳನ್ನು ರಾಯಚೂರಿನ ನವೋದಯ ಮೆಡಿಕಲ್​ ಕಾಲೇಜಿಗೆ ದಾನ …

Read More »

ಹತ್ತಿ ಕಟಾವಿಗೂ ಕೊಡಬೇಕು ಪೊಲೀಸರ ರಕ್ಷಣೆ!

ರಾಯಚೂರು: ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾದುದು. ಸಾರ್ವಜನಿಕವಾಗಿ ಎಷ್ಟೇ ಟೀಕೆ ವ್ಯಕ್ತಪಡಿಸಿದರೂ, ಪೊಲೀಸರಿಲ್ಲದ ಸಮಾಜವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ವಿವಿಧ ಸಂದರ್ಭಗಳಲ್ಲಿ ಸೂಕ್ತ ಬಂದೋಬಸ್ತ್​​ ಮಾಡಿ, ಭದ್ರತೆ ಒದಗಿಸುವ ಕೆಲಸ ಮಾಡುತ್ತಾರೆ.   ಗಣ್ಯ ವ್ಯಕ್ತಿಗಳ ಭೇಟಿ, ಸಮಾವೇಶ, ಗಲಭೆ ಮುಂತಾದ ಸಂದರ್ಭದಲ್ಲಿ ಅಗತ್ಯಕ್ಕನುಗುಣವಾಗಿ ಅಗತ್ಯವಿದ್ದಾಗ ಸೂಕ್ತ ಭದ್ರತೆ ಪೊಲೀಸ್ ಇಲಾಖೆಯಿಂದ ಲಭಿಸುತ್ತದೆ. ಆದರೆ ಇದೀಗ ರಾಯಚೂರಿ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರೊಬ್ಬರು ವಿಶೇಷ ಬಂದೋಬಸ್ತ್​​ ವ್ಯವಸ್ಥೆ ಮಾಡಿ …

Read More »

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ …

Read More »

ಅಕ್ರಮಕ್ಕೆ ಅಧಿಕಾರಿಗಳ ನೆರವು ಚಿಲುಮೆ ಆಯಪ್‌ ರೂಪಿಸಿದ್ದ ವ್ಯಕ್ತ ವಿಚಾರಣೆ

ಬೆಂಗಳೂರು: ಮತದಾರರ ದತ್ತಾಂಶ ಕಳವು ಆರೋಪ ಹೊತ್ತಿರುವ ‘ಚಿಲುಮೆ’ ಸಂಸ್ಥೆಯ ಅಕ್ರಮಕ್ಕೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೆಲವು ವಲಯ ಅಧಿಕಾರಿಗಳೇ ಬೆಂಬಲವಾಗಿದ್ದರು ಎನ್ನುವ ಅಂಶ ಪೊಲೀಸ್‌ ತನಿಖೆಯಿಂದ ಹೊರಬಿದ್ದಿದೆ.   ‘ಚಿಲುಮೆ’ ಸಮೀಕ್ಷಾ ತಂಡವು ಬೆಂಗಳೂರಿನ ಬಹುತೇಕ ವಿಧಾನ ಸಭಾ ಕ್ಷೇತ್ರಗಳ ಸಮೀಕ್ಷೆ ನಡೆಸಿದ್ದು, ಅದಕ್ಕೆ ಬಿಬಿಎಂಪಿಯ ವಲಯದ ಕಂದಾಯ ಅಧಿಕಾರಿಗಳು (ಆರ್‌ಒ) ಹಾಗೂ ಸಿಬ್ಬಂದಿ ನೆರವು ನೀಡಿ ದ್ದರು. ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಈ ಸಂಸ್ಥೆಗೆ ಅಧಿಕಾರಿಗಳೇ …

Read More »