ರಾಯಚೂರು: ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ‘ಭಾರತ್ ಜೋಡೋ’ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದವರು ಬೇರೆ ಕಡೆ ಹೋಗುತ್ತಾರೆ. ಆ ಪಕ್ಷದವರು ನಮ್ಮಲ್ಲಿಗೆ ಬರುತ್ತಾರೆ. ಚುನಾವಣೆ ಬಂದರೆ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ, ಯಾರು ಹೋಗುತ್ತಾರೆ, ಬರುತ್ತಾರೆ ಎಂಬದು ಗೊತ್ತಾಗಬೇಕಾದರೆ ಜನವರಿವರೆಗೂ ಕಾಯಬೇಕು …
Read More »ಯಾತ್ರೆಯಲ್ಲಿ ಮಂತ್ರಾಲಯ ರಾಯರ ದರ್ಶನ ಪಡೆದ ರಾಹುಲ್‌ಗಾಂಧಿ
ರಾಯಚೂರು: ಭಾರತ್ ಜೋಡೊ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುಕ್ಷೇತ್ರ ಮಂತ್ರಾಲಯಕ್ಕೆ ಗುರುವಾರ ತಲುಪಿದ್ದು, ಶ್ರೀರಾಘವೇಂದ್ರಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಮೂಲ ವೃಂದಾವನ ದರ್ಶನ ಪಡೆದು ‘ಪೂಜ್ಯಾಯ ರಾಘವೇಂದ್ರಾಯ..’ ಮಂತ್ರ ಉಚ್ಛರಿಸಿದ್ದು ವಿಶೇಷವಾಗಿತ್ತು. ಯಮ್ಮಿಗನೂರು ಮಾರ್ಗದಿಂದ ಸುಕ್ಷೇತ್ರಕ್ಕೆ ಸಂಜೆ ತಲುಪಿದ ರಾಹುಲ್‌ಗಾಂಧಿ ಅವರು ಮೊದಲು ಅತಿಥಿಗೃಹಕ್ಕೆ ಹೋಗಿ ಮಠದ ಸಂಪ್ರದಾಯದಂತೆ ಬಿಳಿಪಂಚೆ ಹಾಗೂ ಶಲ್ಯ ಧರಿಸಿ ಮಠದ ಕಡೆಗೆ ಬಂದರು. ಮಠದ ಆಡಳಿತಾಧಿಕಾರಿಗಳು ಹೂಮಾಲೆ …
Read More »ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್‌ವೈ ಹೆಸರು: ಬೊಮ್ಮಾಯಿ
ರಾಯಚೂರು: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿವೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಿಲ್ಲೆಸುಗೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಈಗಾಗಲೇ ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಏಮ್ಸ್ ಕುರಿತಾಗಿ ಮಾತನಾಡಲಿದ್ದೇನೆ. ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ …
Read More »ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್ನೋಟ್ನಲ್ಲಿತ್ತು ಈ ಕೊನೇ ಆಸೆ
ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್ನೋಟ್ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ …
Read More »ಬಸ್- ಲಾರಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿತು ಚಾಲಕನ ಸಮಯ ಪ್ರಜ್ಞೆ
ರಾಯಚೂರು: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ …
Read More »ಬಟ್ಟೆಯಲ್ಲೇ ಶೌಚ ಮಾಡಿದ್ದಕ್ಕೆ ಬಾಲಕನ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ, ಮಗುವಿನ ಸ್ಥಿತಿ ಗಂಭೀರ!
ರಾಯಚೂರು(ಸೆ.09): ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ (School Uniform) ಮಲವಿಸರ್ಜನೆ ಮಾಡಿರುವ ವಿಚಾರವಾಗಿ ಕೋಪಗೊಂಡ ಶಿಕ್ಷಕನೊಬ್ಬ ಮಗುವಿನ ಮೇಲೆ ಬಿಸಿನೀರು ಸುರಿದಿದ್ದಾನೆ. ಹೌದು ರಾಯಚೂರು (Raichuru) ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಘನಮಠೇಶ್ವರ ಗ್ರಾಮೀಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಿಗೆಪ್ಪ ಎಂಬಾತನೇ ಈ ರಾಕ್ಷಸ ಕೃತ್ಯ ಮೆರೆದ ವ್ಯಕ್ತಿ. ಸದ್ಯ ಬಿಸಿ ನೀರಿನ ದಾಳಿಗೊಳಗಾದ 2ನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಅಖಿತ್ ಸ್ಥಿತಿ ಗಂಭೀರವಾಗಿದೆ. …
Read More »ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ
ರಾಯಚೂರು: ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ …
Read More »ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ.
ರಾಯಚೂರು: ಒಬ್ಬರಿಂದ ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ. ಇನ್ನೊಬ್ಬರ ಧರ್ಮದ ಬಗ್ಗೆ ಅಗೌರವ ತೋರಿಸದೇ ನಮ್ಮ ಧರ್ಮ ಆಚರಿಸಬೇಕು. ಇದನ್ನು ಎಲ್ಲರೂ ಅರ್ಥೈಸಿಕೊಂಡು ಸೌಹಾರ್ದವಾಗಿ ಬಾಳಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳವರ 351ನೇ ಉತ್ತರಾರಾಧನೆ ನಿಮಿತ್ತ ಶ್ರೀ ಪ್ರಹ್ಲಾದರಾಜರ ಮಹಾರಥೋತ್ಸವಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ನಾವೆಲ್ಲ ಹಿಂದೂಗಳು. ಸನಾತನ ಭಾರತೀಯ ಹಿಂದೂ …
Read More »ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ
ರಾಯಚೂರು: ಮಂತ್ರಾಲಯದಲ್ಲಿ ಭಕ್ತರ ಆರಾಧ್ಯದೈವ, ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಶುಕ್ರವಾರ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿ ವರ್ಷ ಮಧ್ಯಾರಾಧನೆ ದಿನ ರಾಯರಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಾನದಿಂದ ಶೇಷವಸ್ತ್ರ ಬರುವ ಸಂಪ್ರದಾಯವಿದೆ. ಈ ಬಾರಿ ಪೂರ್ವಾರಾಧನೆ ದಿನ ತಮಿಳುನಾಡಿನ ಶ್ರೀರಂಗಂ ದೇವಸ್ಥಾನದಿಂದ ಶ್ರೀ ರಂಗನಾಥ ಸ್ವಾಮಿಯ ಶೇಷವಸ್ತ್ರಗಳನ್ನು ರಾಯರ ಆರಾಧನೆಗೆ ತಂದಿದ್ದು ವಿಶೇಷವಾಗಿತ್ತು. ಪೂರ್ವಾರಾಧನೆ ನಿಮಿತ್ತ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ಬೆಳಗಿನ …
Read More »ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ
ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ. ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …
Read More »