Breaking News

ಶಿವಮೊಗ್ಗ

ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ…

ಶಿವಮೊಗ್ಗ: ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್‍ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ …

Read More »

ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಬಂದ ಕಾರಣ ಕೂಲಿ ಕಾರ್ಮಿಕರಿಗೆ ಒಂದೆಡೆ ಕೂಲಿ ಕೆಲಸವಿಲ್ಲ, ಇನ್ನೊಂದೆಡೆ ಕೂಲಿ ಇಲ್ಲದೆ ಜೀವನ ಸಾಗಿಸುವುದೇ ಕಷ್ಟವಾಗಿದೆ. ಆದರೆ ಇಂತಹ ಸಮಯದಲ್ಲಿಯೂ ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳು ಆರಂಭವಾಗಿವೆ. ಅದರಂತೆ ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಹೀಗಾಗಿ …

Read More »

ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸ….

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ. ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ …

Read More »

ನಾಳೆಯಿಂದ ಮದ್ಯದಂಗಡಿಗಳು ಓಪನ್ – ಒಬ್ಬರಿಗೆ ಎಷ್ಟು ಕ್ವಾಟರ್ ಎಣ್ಣೆ? ನಿಯಮ ಏನು?

ಶಿವಮೊಗ್ಗ: ನಾಳೆಯಿಂದ ಕಂಟೈನ್‍ಮೆಂಟ್ ಜೋನ್‍ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್‍ಡೌನ್ ನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರವೂ ಕೆಲ ನಿಮಗಳು ಮತ್ತು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಒಂದು ದಿನಕ್ಕೆ ಒಬ್ಬರಿಗೆ ಇಂತಿಷ್ಟೇ ಮದ್ಯ ನೀಡಬೇಕು ಎಂದು ನಿಗದಿ ಮಾಡಿದೆ. ಪ್ರತಿಯೊಬ್ಬ …

Read More »

ಶಿವಮೊಗ್ಗ:ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ …

Read More »

ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………

ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …

Read More »

ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.

ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಶ್ರಮದಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಎಂಬಿಬಿಎಸ್ ವೈದ್ಯರ …

Read More »

ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾನ್ ಹತ್ತಿ ಎಂದ ಪೊಲೀಸರು……..

ಶಿವಮೊಗ್ಗ: ವಾಕಿಂಗ್ ಹಾಗೂ ಆಟವಾಡಲು ಬಂದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ಇದ್ದಕ್ಕಿದ್ದಂತೆ ಬನ್ನಿ ವ್ಯಾನ್ ಹತ್ತಿ ಎಂದು ಕರೆದೊಯ್ದಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರ ಮಾಡುತ್ತಿದ್ದವರನ್ನು ನಗರದ ಒಳಾಂಗಣ ಕ್ರೀಡಾಂಗಣದ ಆವರಣಕ್ಕೆ ಕರೆತಂದು ಡಿಸಿ ಶಿವಕುಮಾರ್, ಎಸ್‍ಪಿ ಶಾಂತರಾಜ್ ಪಾಠ ಮಾಡಿದ್ದಾರೆ. ಇನ್ನೂ ವಿಶೇಷವೆಂದರೆ ಇದಕ್ಕೂ ಮುನ್ನ ಟೀ, ಬಿಸ್ಕೆಟ್ ನೀಡಿ ಆರೈಕೆ ಮಾಡಿದ್ದಾರೆ. ವಿವಿಧ ಬಡಾವಣೆಗಳಿಂದ ಸುಮಾರು 300ಕ್ಕೂ ಹೆಚ್ಚು ಜನ ವಾಕಿಂಗ್‍ಗೆ ಬಂದವರಿಗೆ, ಒಂದೇ ಜಾಗದಲ್ಲಿ ಕರೆ …

Read More »

ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದ ದುಡಿಯುವ ಕೈಗಳಿಗೆ ಕೆಲಸ ನೀಡಿದ ಈಶ್ವರಪ್ಪ

ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …

Read More »

ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ

ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …

Read More »